Categories
ಮಲ್ನಾಡ್

ಮಲೆನಾಡು ಭಾಗದಲ್ಲಿ ಸತತ 4 ದಿನದಿಂದ ಮಳೆ.!

ಮಲೆನಾಡು ಭಾಗದಲ್ಲಿ ಸತತ 4 ದಿನದಿಂದ ಮಳೆ.!
– ಗುಡುಗು ಸಿಡಿಲಿನೊಂದಿಗೆ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ
– ಹಲವೆಡೆ ರಸ್ತೆ ಮೇಲೆ ಮರಬಿದ್ದು ಸಂಚಾರಕ್ಕೆ ಅಡ್ಡಿ

NAMMUR EXPRESS NEWS
ತೀರ್ಥಹಳ್ಳಿ: ಮಲೆನಾಡಿನ ಭಾಗದಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಮಧ್ಯಾಹ್ನದ ನಂತರ ಧಾರಾಕಾರ ಮಳೆ ಸುರಿಯಲು ಪ್ರಾರಂಭ ಮಾಡಿದೆ. ತೀರ್ಥಹಳ್ಳಿ, ಕೊಪ್ಪ, ಚಿಕ್ಕಮಗಳೂರು, ಹೊಸನಗರ, ಸಾಗರ ಸುತ್ತಮುತ್ತ ಭಾರಿ ಮಳೆ ಆಗುತ್ತಿದೆ. ಗುಡುಗು ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆ ಸುರಿದಿದೆ. ಇನ್ನು ಗ್ರಾಮೀಣ ಭಾಗಗಳಲ್ಲಿ ಕರೆಂಟ್ ಕಂಬದ ಮೇಲೆ ಮರಬಿದ್ದು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿದ್ದರೆ, ಇನ್ನು ಹಲವೆಡೆ ರಸ್ತೆ ಮೇಲೆ ಮರ ಬಿದ್ದು ಸಂಚಾರಕ್ಕೆ ಅಡ್ಡಿಯಾಗಿದೆ.

ನಿರಂತರ ಮಳೆಯ ಕಾರಣ ಜನಜೀವನ ಅಸ್ತವ್ಯಸ್ತವಾಗಿದ್ದು, ಕೂಲಿ ಕಾರ್ಮಿಕರು ಪರದಾಟ ನಡೆಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ರೈತರು, ಅಡಿಕೆ, ಕಾಫಿ ಬೆಳೆಗಾರರಲ್ಲಿ ಸಂತಸ ಮನೆ ಮಾಡಿದೆ. ಈ ವರ್ಷ ಸರಿಯಾದ ಸಮಯಕ್ಕೆ ಮಳೆ ಬಾರದೆ ಮಲೆನಾಡು ಭಾಗದ ಜನ ಕಂಗಾಲಾಗಿದ್ದರು. ಮಳೆ ಬೇಕು ಎಂದು ಕಾಯುತ್ತಾ ಕುಳಿತ್ತಿದ್ದರು. ಹಲವಾರು ಭಾಗಗಳಲ್ಲಿ ತಾವು ಮಕ್ಕಳಂತೆ ಸಾಕಿದ ಬೆಳೆಗಳು ಹಾಳಾಗಿ ಹೋಗಿದ್ದವು. ಈಗ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಕೆಲ ಭಾಗದ ರೈತರು ನಿಟ್ಟುಸಿರು ಬಿಟ್ಟಿದ್ದಾರೆ. ಮಳೆ ನಿರಂತರವಾಗಿ ಹೀಗೆ ಸುರಿಯಲಿ ಎಂದು ಭಗವಂತನಲ್ಲಿ ಬೇಡಿಕೊಳ್ಳುತ್ತಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.