Categories
ತೀರ್ಥಹಳ್ಳಿ ಮಲ್ನಾಡ್

ತೀರ್ಥಹಳ್ಳಿ: ಜೆ.ಟಿ. ಸುಂದರೇಶ್ ಸ್ಮರಣಾರ್ಥ ಬಾಲ್ ಬ್ಯಾಡ್ಮಿಂಟನ್ ಪಂದ್ಯ

ತೀರ್ಥಹಳ್ಳಿ: ಜೆ.ಟಿ. ಸುಂದರೇಶ್ ಸ್ಮರಣಾರ್ಥ ಬಾಲ್ ಬ್ಯಾಡ್ಮಿಂಟನ್ ಪಂದ್ಯ
– ರಾಷ್ಟ್ರಮಟ್ಟದ ಆಹ್ವಾನಿತ ತಂಡಗಳ ಹೊನಲು ಬೆಳಕಿನ ಪಂದ್ಯಾವಳಿ
– ಮೇ 11, 12ರಂದು ಅನಂತಮೂರ್ತಿ ಸರ್ಕಾರಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಆಯೋಜನೆ: ಸರ್ವರಿಗೂ ಸ್ವಾಗತ

NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿಯಲ್ಲಿ ದಿನಾಂಕ 11-05-2024 ಮತ್ತು ದಿನಾಂಕ 12-05-2024ರ 2 ದಿನಗಳ ಕಾಲ ದಿ.ಪ್ರೊ.ದಿವಂಗತ ಜೆ.ಟಿ.ಸುಂದರೇಶ್ ಇವರ ಸ್ಮರಣಾರ್ಥ ರಾಜ್ಯಮಟ್ಟದ ಹೊನಲು ಬೆಳಕಿನ ಬಾಲ್ ಬ್ಯಾಡ್ಮಿಂಟನ್ ಟೂರ್ನ್‌ಮೆಂಟ್ ಅನ್ನು ತೀರ್ಥಹಳ್ಳಿ ಬಾಲ್ ಬ್ಯಾಡ್ಮಿಂಟನ್ ಅಸೋಷಿಯೇಷನ್ ವತಿಯಿಂದ ಸಹ್ಯಾದ್ರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ ಹಾಗೂ ತೀರ್ಥಹಳ್ಳಿ ಮಲ್ನಾಡ್ ಕ್ಲಬ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಹಿರಿಯ ಕ್ರೀಡಾಪಟು ದಿವಂಗತ ಪ್ರೊ.ಜೆ.ಟಿ. ಸುಂದರೇಶ್ ಇವರ ಹೆಸರಿನಲ್ಲಿ ತೀರ್ಥಹಳ್ಳಿಯ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ರಾಜ್ಯಮಟ್ಟದ ಹೊನಲು ಬೆಳಕಿನ ಬಾಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್‌ ತೀರ್ಥಹಳ್ಳಿಯ ಡಾ. ಯುಆರ್ ಅನಂತಮೂರ್ತಿ ಸರ್ಕಾರಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

11-05-2024 ರ ಶನಿವಾರ ಸಂಜೆ 7 ಗಂಟೆಗೆ ಶಾಸಕ ಆರಗ ಜ್ಞಾನೇಂದ್ರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಬಾಲ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷರಾದ ವಾಟಿಗಾರು ಶಿವಾನಂದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು ಕೆ.ಆರ್.ದಯಾನಂದ ಕಡಿದಾಳ್ ಸಮಾರಂಭದ ಕುರಿತು ಪ್ರಾಸ್ತವಿಕ ನುಡಿಗಳನ್ನಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಆರಕ್ಷಕ ಉಪಾಧೀಕ್ಷಕರಾದ ಗಜಾನನ ವಾಮನ ಸುತಾರ, ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರಾಂಶುಪಾಲರು ವೈ ಎಂ ಸುಧಾ, ಟೌನ್ ಕ್ಲಬ್ ಅಧ್ಯಕ್ಷರು ಬಿ.ಎನ್ ಕೃಷ್ಣಮೂರ್ತಿ ಭಟ್, ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷರು ಅನಿಲ್ ಕುಮಾರ್ ಜಿ, ಜಿಲ್ಲಾ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷರು ಶಶಿ ಕೆಎಸ್, ಪ್ರಶಾಂತ್ ಹೆಗ್ಗಾರ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಮೇ 12ರಂದು ಸಮಾರೋಪ: ಗಣ್ಯರ ಆಗಮನ

ದಿನಾಂಕ: 12-05-2024 ರ ಭಾನುವಾರ ರಾತ್ರಿ 8 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಡಾ. ಆರ್‌ಎಂ ಮಂಜುನಾಥ ಗೌಡರು ಸಮಾರೋಪ ಭಾಷಣ ಮಾಡಲಿದ್ದಾರೆ. ಬಾಲ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷರಾದ ವಿಎಂ ಶಿವಾನಂದ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್, ಅನು ಸುಂದರೇಶ್, ಅನಂತಮೂರ್ತಿ ಸರ್ಕಾರಿ ಪ್ರೌಢಶಾಲೆ ಉಪ ಪ್ರಾಂಶುಪಾಲರು ದೇವೇಂದ್ರ ನಾಯ್ಕ್, ಹಿರಿಯ ಬಾಲ್ ಬ್ಯಾಡ್ಮಿಂಟನ್ ಆಟಗಾರ ನಂದೀಶ್ ಎ ಜಿ, ಏಕಲವ್ಯ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರು ರಾಘವೇಂದ್ರ ರವೀಂದ್ರ ಶೆಟ್ಟಿ, ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ರಾಜು ಎಸ್ ಆಗಮಿಸಲಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.