- ಮುನಿಸು ಬಿಟ್ಟು ಒಟ್ಟಾಗಿ ಪಕ್ಷ ಬಲಪಡಿಸ್ತಾರಾ ನಾಯಕರು?
- ಕಿಮ್ಮನೆ, ಮಂಜುನಾಥ ಗೌಡ ಒಂದೇ ಸಭೆಯಲ್ಲಿ!
- ಪಕ್ಷ ಕಟ್ಟಲು ಡಿಕೆಶಿ ವಾರ್ನಿಂಗ್.. ಮುಂದೇನು..?
NAMMUR EXPRESS
ತೀರ್ಥಹಳ್ಳಿ: ತೀರ್ಥಹಳ್ಳಿ ರಾಜಕಾರಣ ದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು ತೀರ್ಥಹಳ್ಳಿ ಕಾಂಗ್ರೆಸ್ ನಲ್ಲಿ ಈಗ ಒಗ್ಗಟ್ಟಿನ ಮಂತ್ರ ಶುರುವಾಗಿದೆ.
ಶನಿವಾರ ಬೆಂಗಳೂರಿನಲ್ಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಥಹಳ್ಳಿ ಕಾಂಗ್ರೆಸ್ ನಾಯಕರಾದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹಾಗೂ ಸಹಕಾರಿ ನಾಯಕ ಡಾ.ಆರ್ ಎಂ.ಮಂಜುನಾಥ ಗೌಡ ಒಂದೇ ಸಭೆಯಲ್ಲಿ ಒಂದೇ ವೇದಿಕೆಯಲ್ಲಿ ಪಾಲ್ಗೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ. ಈ ವೇಳೆ ಪಕ್ಷ ಸಂಘಟನೆಯನ್ನು ಮಾಡುವ ಬಗ್ಗೆ ಡಿಕೆಶಿವಕುಮಾರ್ ಇಬ್ಬರಿಗೂ ಕೂಡಾ ಸಲಹೆ ನೀಡಿದ್ದಾರೆ ಎಂಬ ಮಾತು ಕೇಳಿಬಂದಿದೆ.
ಏನಿದು ವಿವಾದ?: ಕಿಮ್ಮನೆ ರತ್ನಾಕರ್ ಅವರು ಕಾಂಗ್ರೆಸ್ ಪಕ್ಷದ ಶಾಸಕರಾಗಿ ರಾಜ್ಯ ಸರ್ಕಾರದಲ್ಲಿ ಮಂತ್ರಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಹತ್ತಾರು ವರ್ಷಗಳಿಂದ ಪಕ್ಷ ಕಟ್ಟುವ ಜತೆಗೆ ತಮ್ಮದೇ ಆದ ಸಾವಿರಾರು ಅಭಿಮಾನಿಗಳನ್ನು ಹೊಂದಿದ್ದಾರೆ. ಇನ್ನೊಂದೆಡೆ ಇದೀಗ ಕೆಲವೇ ತಿಂಗಳಲ್ಲಿ ಸಹಕಾರಿ ನಾಯಕರಾಗಿರುವ ಡಾ.ಆರ್.ಎಂ ಮಂಜುನಾಥ್ ಗೌಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿದ್ದರು. ಆದರೆ ಕಿಮ್ಮನೆ ಹಾಗೂ ಅರ್ಎಂಎಂ ಒಂದೇ ವೇದಿಕೆಯಲ್ಲಿ ಕಾಣದೇ ಯಾವುದೇ ಸಭೆಯಲ್ಲಿ ಒಟ್ಟಾಗಿ ಕಾಣದೇ ಇಡೀ ಕ್ಷೇತ್ರದಲ್ಲಿ ಗೊಂದಲ ಉಂಟಾಗಿತ್ತು. ಕಾಂಗ್ರೆಸ್ ಪಕ್ಷದಲ್ಲೂ ಕೂಡಾ ಇದು ಇರುಸು ಮುರುಸಿಗೆ ಕಾರಣವಾಗಿತ್ತು. ಈಗಾಗಲೇ ಕಳೆದ ವಾರ ನಡೆದಂತಹ ಎರಡೂ ಪ್ರತಿಭಟನೆಗಳಲ್ಲಿ ಇಬ್ಬರು ನಾಯಕರು ಪ್ರತ್ಯೇಕವಾಗಿ ಪ್ರತಿಭಟನೆಯನ್ನು ನಡೆಸುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಗೊಂದಲ ಕಾರಣವಾಗಿತ್ತು.
ಇದೀಗ ರಾಜ್ಯದಲ್ಲಿ ನಡೆದ ಕಾಂಗ್ರೆಸ್ ಸಂಘಟನಾ ಸಭೆಯಲ್ಲಿ ಇಬ್ಬರೂ ಒಂದೇ ವೇದಿಕೆಯಲ್ಲಿ ಕಾಣುವ ಮೂಲಕ ರಾಜಕೀಯವಾಗಿ ಭಾರೀ ಕುತೂಹಲ ಮೂಡಿಸಿದೆ. ತೀರ್ಥಹಳ್ಳಿ ಕ್ಷೇತ್ರದಲ್ಲಿ ಇಬ್ಬರೂ ಒಟ್ಟಾದ್ರೆ ಮಾತ್ರ ಗೆಲುವಿನ ಹೋರಾಟ ಮಾಡಬಹುದು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ..!. ಆದರೆ ಇಬ್ಬರ ಜಗಳ ಮೂರನೇಯವರಿಗೆ ಲಾಭ ಆಗಬಾರದು ಎಂಬ ಚರ್ಚೆ ಪಕ್ಷದ ವಲಯದಲ್ಲೇ ಇದೆ.
ಎಂಎಲ್ಸಿ ಚುನಾವಣೆಗೆ ಮಂಜುನಾಥ ಗೌಡ?!: ಕೆಲವೇ ತಿಂಗಳಲ್ಲಿ ಬರುವ ಜನ ಪ್ರತಿನಿಧಿಗಳಿಂದ ಆಯ್ಕೆಯಾಗುವವಿಧಾನ ಪರಿಷತ್ ಚುನಾವಣೆಗೆ ಶಿವಮೊಗ್ಗ ಜಿಲ್ಲೆಯಿಂದ ಆರ್ಎಂಎಂ ಅವರ ಹೆಸರು ಕೇಳಿಬರುತ್ತಿದ್ದು, ಒಂದು ವೇಳೆ ಮಂಜುನಾಥ ಗೌಡ ಅವರು ಎಂಎಲ್ಸಿ ಸ್ಥಾನಕ್ಕೆ ಸ್ಪರ್ಧೆ ಮಾಡಿದರೆ ಕಿಮ್ಮನೆ ರತ್ನಾಕರ್ ಅವರು ಶಾಸಕ ಸ್ಥಾನಕ್ಕೆ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ ಎಂಬ ಮಾತುಗಳು ಪಕ್ಷದ ವಲಯದಲ್ಲೇ ಕೇಳಿ ಬಂದಿದೆ. ಈ ಬಗ್ಗೆ ಎಲ್ಲಾ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಿರ್ಧಾರ ಅಂತಿಮವಾಗಲಿದೆ ಎಂಬ ಚರ್ಚೆ ಕೇಳಿ ಬಂದಿದೆ. ಆದರೆ ಇಬ್ಬರು ನಾಯಕರ ನಡೆ ಯಾವ ರೀತಿ ಮುಂದುವರಿಯಲಿದೆ ಎಂಬುದು ಕುತೂಹಲ ಮೂಡಿದೆ. ಮುಂಬರುವ ತಾಪಂ ಮತ್ತು ಜಿಪಂ ಚುನಾವಣೆ ಕೂಡ ಈ ದಿಕ್ಕಿನಲ್ಲಿ ಮಹತ್ವ ಪಡೆದಿದೆ.
ರಾಜ್ಯದ, ಮಲೆನಾಡಿನ ಎಲ್ಲಾ ಸುದ್ದಿಗಳಿಗೆ NAMMUR EXPRESS ” ಫೇಸ್ಬುಕ್ ಮತ್ತು ಯೂಟ್ಯೂಬ್ ಚಾನೆಲ್ ಲೈಕ್ ಮಾಡಿ , ಸಬ್ಸೈಬ್ ಆಗಿ , ವಾಟ್ಸಾಪ್ನಲ್ಲಿ ಎಲ್ಲಾ ನಿಮ್ಮ ಊರಿನ ಸುದ್ದಿ ಪಡೆಯಲು 9481949101ಗೆ ನಿಮ್ಮ ಹೆಸರು , ಊರು , ತಾಲೂಕು ವಾಟ್ಸಾಪ್ ಮಾಡಿರಿ. ನಿಮ್ಮ ಎಲ್ಲಾ ಸ್ನೇಹಿತರು ಹಾಗೂ ಗ್ರೂಪ್ಗಳಿಗೆ ಶೇರ್ ಮಾಡಿರಿ. ಧನ್ಯವಾದಗಳು. ಮಲೆನಾಡಿನ ಖ್ಯಾತ ಮಾಧ್ಯಮದಲ್ಲಿ ಜಾಹೀರಾತಿಗಾಗಿ ಕರೆ ಮಾಡಿ 9480181535.