Categories
ಚಿಕ್ಕಮಗಳೂರು ಮಲ್ನಾಡ್

ಶಾಸಕ ಟಿ.ಡಿ.ರಾಜೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ

ಶಾಸಕ ಟಿ.ಡಿ.ರಾಜೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ

– ಕೋರ್ಟ್ ಸೂಚನೆ ಮೇರೆಗೆ ಎಫ್‌ಐಆರ್ ಬೆನ್ನಲ್ಲೇ ದಾಳಿ
– ಲೋಕಾಯುಕ್ತ ಎಸ್ ಪಿ ಸ್ನೇಹ ನೇತೃತ್ವದಲ್ಲಿ ದಾಳಿ

NAMMUR EXPRESS NEWS
ಚಿಕ್ಕಮಗಳೂರು : ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಮನೆ ಮೇಲೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ. ಬಿಜೆಪಿ ಮುಖಂಡ ದಿನೇಶ್ ಹೊಸೂರು ಶಾಸಕ ರಾಜೇಗೌಡ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಆರೋಪದಡಿ ಪ್ರಕರಣ ದಾಖಲಿಸಿದ್ದರು.ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶಾಸಕರ ವಿರುದ್ಧ ಎಫ್‌ಐಆರ್ ದಾಖಲಿಸಿ,ಸೂಕ್ತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆದೇಶಿಸಿತ್ತು. ಇದರಂತೆ ಚಿಕ್ಕಮಗಳೂರು ಲೋಕಾಯುಕ್ತ ಕಚೇರಿಯಲ್ಲಿ ಟಿ.ಡಿ ರಾಜೇಗೌಡ, ಪತ್ನಿ ಪುಷ್ಪಾ, ಮಗ ರಾಜ್ ದೇವ್ ವಿರುದ್ಧ FIR ದಾಖಲು ಎಫ್‌ಐಆ‌ರ್ ದಾಖಲಾಗಿತ್ತು.ಈ ಬೆನ್ನಲ್ಲೇ ಇಂದು ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಎಸ್ ಪಿ ಸ್ನೇಹಾ ನೇತೃತ್ವದಲ್ಲಿ ಶಾಸಕ ರಾಜೇಗೌಡರವರ ಬಸಾಪುರದ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದೆ. ಈ ದಾಳಿ ಸಮಯದಲ್ಲಿ ಶಾಸಕ ಟಿ ಡಿ ರಾಜೇಗೌಡ ಮನೆಯಲ್ಲಿದ್ದರು ಎನ್ನಲಾಗಿದೆ.

 

ಬಿಜೆಪಿ ಮುಖಂಡ ದಿನೇಶ್ ಹೊಸೂರ್ ದೂರಿನನ್ವಯ ವಿಚಾರಣೆ ನಡೆಸಿದ ನ್ಯಾಯಾಲಯ ಲೋಕಾಯುಕ್ತ ಎಸ್ ಪಿಗೆ ಸೂಚನೆ ನೀಡಿ ನವೆಂಬ‌ರ್ 17 ರೊಳಗೆ ತನಿಖಾ ವರದಿ ಸಲ್ಲಿಸಲು ಆದೇಶ ನೀಡಿತ್ತು. ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದಂತೆ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988 ರ ಅನ್ವಯ FIR ಸೆಕ್ಷನ್ 7,8,13, 120(B) 420,193,200 ಅಡಿ ಎಫ್‌ಐಆರ್ ದಾಖಲಾಗಿತ್ತು.

 

* ಲೋಕಾಯುಕ್ತಕ್ಕೆ ಸಂಪೂರ್ಣ ಸಹಕಾರ ನೀಡುವೆ – ಟಿ ಡಿ ರಾಜೇಗೌಡ
ಲೋಕಾಯುಕ್ತ ದೂರಿಗೆ ಸಂಬಂಧಿಸಿದಂತೆ ಶೃಂಗೇರಿ ಕ್ಷೇತ್ರದ ಶಾಸಕ ನಿನ್ನೆಯಷ್ಟೇ ಹೇಳಿಕೆ ನೀಡಿ ಲೋಕಾಯುಕ್ತ ತನಿಖೆಗೆ ಸಂಪೂರ್ಣ ಸಹಕರಿಸುವುದಾಗಿ ಹೇಳಿದ್ದರು.
ಮಾಜಿ ಶಾಸಕ ಡಿ ಎನ್ ಜೀವರಾಜ್ ಹಾಗೂ ಬಿಜೆಪಿ ಮುಖಂಡ ದಿನೇಶ್ ಹೊಸೂರು ದ್ವೇಷದ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದರು. ಶಾಸಕರ ನಿನ್ನೆಯ ಹೇಳಿಕೆ ಬೆನ್ನಲ್ಲೇ ಇಂದು ಲೋಕಾಯುಕ್ತ ದಾಳಿ ನಡೆದಿದ್ದು ಪ್ರಕರಣದ ತನಿಖೆ ಏನಾಗಬಹುದೆಂಬ ಕುತೂಹಲ ಮೂಡಿಸಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.