ಮಲ್ನಾಡ್ ಟಾಪ್ 4 ನ್ಯೂಸ್
ಶಿಕಾರಿಪುರ : ಶಾಲೆ ಆವರಣದಲ್ಲಿದ್ದ ಮಕ್ಕಳ ಮೇಲೆ ಜೇನು ದಾಳಿ!
– ತೀರ್ಥಹಳ್ಳಿ : ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ..!!
– ಶಿವಮೊಗ್ಗ : ಆನ್ಲೈನ್ ಗೇಮ್ ಜಾಹೀರಾತು ನಂಬಿ 22 ಲಕ್ಷ ಕಳೆದುಕೊಂಡ ವ್ಯಕ್ತಿ..!!
– ರಿಪ್ಪನ್ಪೇಟೆ : 33 ವರ್ಷದ ಮಹಿಳೆ ಕ್ಯಾನ್ಸರ್ಗೆ ಬಲಿ.. !
NAMMUR EXPRESS NEWS
ಶಿಕಾರಿಪುರ : ತಾಲೂಕಿನ ಬಗನಕಟ್ಟೆ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರೌಢ ಶಾಲೆಯಲ್ಲಿ ಜೇನುಗಳು ಅಲ್ಲಿದ್ದವರ ಮೇಲೆ ದಾಳಿ ನಡೆಸಿವೆ. ಈ ಘಟನೆಯಲ್ಲಿ 12 ಎಸ್.ಎಸ್.ಎಲ್.ಸಿ (SSLC) ವಿದ್ಯಾರ್ಥಿಗಳು ಮತ್ತು ಒಬ್ಬ ಸಿಬ್ಬಂದಿಗೆ ಪೆಟ್ಟಾಗಿದ್ದು,ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಗನಕಟ್ಟೆ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ಹಮ್ಮಿಕೊಳ್ಳಲಾಗಿತ್ತು. ಶಿಕ್ಷಕರು ಬರುವುದು ತಡವಾಗಿದ್ದರಿಂದ ಮಕ್ಕಳು ಶಾಲೆಯ ಆವರಣದಲ್ಲಿದ್ದರು. ಈ ವೇಳೆ ಜೇನು ದಾಳಿ ನಡೆಸಿದೆ. ಇನ್ನೂ ಜೇನು ಕಡಿತದಿಂದ ಪೆಟ್ಟಾದ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಿ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸಲಾಗಿದೆ. ಈ ಪೈಕಿ ಶಿವಮೊಗ್ಗದಲ್ಲಿರುವ ಮೆಗ್ಗಾನ್ ಆಸ್ಪತ್ರೆಗೆ ಆರು ವಿದ್ಯಾರ್ಥಿಗಳನ್ನು ದಾಖಲಿಸಲಾಗಿದೆ. ಉಳಿದವರಿಗೆ ಶಿಕಾರಿಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ. ಘಟನೆಯಲ್ಲಿ 12 ಮಕ್ಕಳಿಗೆ ಪೆಟ್ಟಾಗಿದೆ, ಅವರೆಲ್ಲರಿಗೂ ಸೂಕ್ತ ಚಿಕಿತ್ಸೆ ಒದಗಿಸಲಾಗುತ್ತಿದೆ.
– ತೀರ್ಥಹಳ್ಳಿ : ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ..!!
ತೀರ್ಥಹಳ್ಳಿ : ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಚಾಲಕನಿಗೆ ಸಣ್ಣ ಪುಟ್ಟ ಗಾಯ ಆಗಿರುವ ಘಟನೆ ಮೇಗರವಳ್ಳಿಯ ಕೋಳಿಗೆ ಕ್ರಾಸ್ ಬಳಿ ನಡೆದಿದೆ. ಅವೈಜ್ಞಾನಿಕ ರಸ್ತೆ ನಿರ್ಮಾಣದಿಂದ ಗುಂಡಿ ತಪ್ಪಿಸಲು ಹೋಗಿ ಎರಡು ವಾಹನ ಮುಖಾಮುಖಿ ಡಿಕ್ಕಿ ಆಗಿದೆ ಎನ್ನಲಾಗಿದೆ. ಕಾರು ಡಿಕ್ಕಿ ಹೊಡೆದು ರಸ್ತೆ ಬಿಟ್ಟು ಹೊರ ಹೋಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ..
– ಶಿವಮೊಗ್ಗ : ಆನ್ಲೈನ್ ಗೇಮ್ ಜಾಹೀರಾತು ನಂಬಿ 22 ಲಕ್ಷ ಕಳೆದುಕೊಂಡ ವ್ಯಕ್ತಿ..!!
ಶಿವಮೊಗ್ಗ: ಆನ್ಲೈನ್ ಗೇಮಿಂಗ್ ಮೂಲಕ ಸುಲಭವಾಗಿ ಲಾಭ ಗಳಿಸುವ ಆಸೆಗೆ ಬಿದ್ದು, ಶಿವಮೊಗ್ಗದ ವ್ಯಕ್ತಿಯೊಬ್ಬರು ಬರೋಬ್ಬರಿ 22,19,572 ಲಕ್ಷ ರೂಪಾಯಿ ಹಣವನ್ನು ಕಳೆದುಕೊಂಡಿರುವ ವಂಚನೆಯ ಘಟನೆ ಬೆಳಕಿಗೆ ಬಂದಿದೆ. ನಗರದ ನಿವಾಸಿಯೊಬ್ಬರು ಅಪರಿಚಿತ ಆನ್ಲೈನ್ ಗೇಮಿಂಗ್ನಲ್ಲಿ ಹಣ ಹೂಡಿ ಲಾಭ ಗಳಿಸುವ ಉದ್ದೇಶದಿಂದ ಆರಂಭದಲ್ಲಿ ಫೋನ್ಪೇ ಮೂಲಕ 300 ಹಣವನ್ನು ಆನ್ಲೈನ್ನಲ್ಲಿ ಠೇವಣಿ ಮಾಡಿದ್ದರು. ಆ ಆ್ಯಪ್ಗೆ ಸಂಬಂಧಿಸಿದವರು ಎಂದು ಹೇಳಿಕೊಂಡ ಅಪರಿಚಿತರು ವಾಟ್ಸ್ಆ್ಯಪ್ ಮೂಲಕ ದೂರುದಾರರಿಗೆ ಕರೆ ಮಾಡಿದ್ದಾರೆ. ಆಟದಲ್ಲಿ ಹೆಚ್ಚಿನ ಹಣವನ್ನು ಹೂಡಿಕೆ ಮಾಡಿದರೆ ದೊಡ್ಡ ಮೊತ್ತದ ಬೋನಸ್ ನೀಡುವುದಾಗಿ ಆಮಿಷವೊಡ್ಡಿದ್ದಾರೆ. ಇದನ್ನು ನಂಬಿದ ವ್ಯಕ್ತಿ, ತಮ್ಮ ಬ್ಯಾಂಕ್ ಖಾತೆಯಿಂದ ಒಟ್ಟು 22,19,572 ಲಕ್ಷ ರೂಪಾಯಿ ಹಣವನ್ನು ಹಂತ ಹಂತವಾಗಿ ಅವರ ಖಾತೆಗೆ ವರ್ಗಾಯಿಸಿದ್ದಾರೆ. ಆದರೆ, ಆನ್ಲೈನ್ ಗೇಮಿಂಗ್ನಲ್ಲಿ ಹಾಕಿದ ಹಣದ ಬಗ್ಗೆ ದೂರುದಾರರು ಫೋನ್ ಮೂಲಕ ಸಂದೇಶ ಕಳುಹಿಸಿ ಕೇಳಲು ಪ್ರಯತ್ನಿಸಿದಾಗ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ನಂತರ ತಮ್ಮ ಪರಿಚಯಸ್ಥರಲ್ಲಿ ವಿಚಾರಿಸಿದಾಗ ತಾವು ಮೋಸ ಹೋಗಿರುವುದು ಅರಿವಿಗೆ ಬಂದಿದೆ. ಆನ್ಲೈನ್ ಗೇಮಿಂಗ್ ಆಟದಲ್ಲಿ ಹೆಚ್ಚಿನ ಲಾಭಾಂಶ ನೀಡುವ ಆಮಿಷವೊಡ್ಡಿ, ಮೋಸದಿಂದ 22,19,572 ಲಕ್ಷ ರೂ ಹಣವನ್ನು ವರ್ಗಾಯಿಸಿಕೊಂಡು ವಂಚಿಸಿದವರನ್ನು ಪತ್ತೆ ಮಾಡಿ, ತಮ್ಮ ಹಣವನ್ನು ವಾಪಸ್ಸು ಕೊಡಿಸಬೇಕೆಂದು ದೂರುದಾರರು ಶಿವಮೊಗ್ಗದ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾರೆ.
– ರಿಪ್ಪನ್ಪೇಟೆ : 33 ವರ್ಷದ ಮಹಿಳೆ ಕ್ಯಾನ್ಸರ್ಗೆ ಬಲಿ.. !
ರಿಪ್ಪನ್ಪೇಟೆ : ಮಹಾಮಾರಿ ಕ್ಯಾನ್ಸರ್ ಗೆ ಇನ್ನೂ ಬಾಳಿ ಬದುಕಬೇಕಾಗಿದ್ದ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಪಟ್ಟಣದ ವ್ಯಾಪ್ತಿಯಲ್ಲಿ ನಡೆದಿದೆ. ಗವಟೂರು ಗ್ರಾಮದ 33 ವರ್ಷದ ಗೀತಾ ಎಂಬ ಯುವತಿ ಮಹಾಮಾರಿ ಕ್ಯಾನ್ಸರ್ನಿಂದ ಚಿಕಿತ್ಸೆ ಫಲಿಸದೇ ಇಂದು ನಿಧನರಾಗಿದ್ದಾರೆ. ಪತಿ ಅನಿಲ್ ಕುಮಾರ್ ಅವರನ್ನು ಅಗಲಿದ ಗೀತಾ ಕಳೆದ ಕೆಲವು ತಿಂಗಳಿನಿಂದ ದುಸ್ತರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಮೂಲತಃ ಆರೋಗ್ಯವಂತಳಾಗಿದ್ದ ಗೀತಾ ಅವರಿಗೆ ತಿಂಗಳುಗಳ ಹಿಂದೆ ರಕ್ತ ಕ್ಯಾನ್ಸರ್ ದೃಢಪಟ್ಟಿತ್ತು. ಆರಂಭದಲ್ಲಿ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದರೂ, ವೈದ್ಯರ ಸಲಹೆಯಂತೆ ಅವರನ್ನು ನಂತರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ನಿರಂತರ ಚಿಕಿತ್ಸೆಗೆ ಒಳಗಾಗುತ್ತಿದ್ದರೂ ಸ್ಥಿತಿ ಹೈರಾಣಗೊಳಿಸಿ ಕೊನೆಗೂ ಚಿಕಿತ್ಸೆ ಫಲಿಸದೇ ಅವರು ಅಕಾಲಿಕವಾಗಿ ಪ್ರಾಣ ಕಳೆದುಕೊಂಡಿದ್ದಾರೆ.







