Categories
ಮಲ್ನಾಡ್ ರಾಜಕೀಯ ರಾಜ್ಯ ಶಿವಮೊಗ್ಗ

ಮಲೆನಾಡಲ್ಲೇ ಮೋದಿ ಮೊದಲ ಪ್ರಚಾರ!

ಮಲೆನಾಡಲ್ಲೇ ಮೋದಿ ಮೊದಲ ಪ್ರಚಾರ!
– ಶಿವಮೊಗ್ಗದಲ್ಲಿ ಮಾ 17ರಂದು ಮೊದಲ ಸಭೆ
– ಶಿವಮೊಗ್ಗ, ಚಿಕ್ಕಮಗಳೂರು ಉಡುಪಿ, ಉ. ಕನ್ನಡ ವ್ಯಾಪ್ತಿಯಲ್ಲಿ ಸಂಘಟನೆ
– ಇಬ್ಬರು ಮಾಜಿ ಸಿಎಂ ಮಕ್ಕಳ ಕದನಕ್ಕೆ ಅಖಾಡ ಸಿದ್ಧ!

NAMMUR EXPRESS NEWS
ಶಿವಮೊಗ್ಗ: ದೇಶದಲ್ಲಿ ಲೋಕಸಭೆ ಚುನಾವಣೆ ರಂಗು ಶುರುವಾಗಿದೆ. ಈ ನಡುವೆ ರಾಜ್ಯದಲ್ಲಿ ಪ್ರತಿಷ್ಠೆಯ ಕ್ಷೇತ್ರವಾಗಿರುವ ಶಿವಮೊಗ್ಗದಲ್ಲಿ ಪಕ್ಷದ ಪರ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಲಿದ್ದಾರೆ. ಈಗಾಗಲೆ ಅವರ ಪ್ರವಾಸದ ಪಟ್ಟಿ ನಿಗದಿಯಾಗಿದ್ದು, ಶಿವಮೊಗ್ಗದಲ್ಲಿ ಸಭೆ ಆಯೋಜಿಸಲಾಗುತ್ತಿದೆ. ಮಾರ್ಚ್‌ 17ರಂದು ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ ಕೇರಳದಲ್ಲಿ ಮೊದಲ ಸಭೆಯಲ್ಲಿ ಮೋದಿ ಭಾಗವಹಿಸಲಿದ್ದಾರೆ. ಆ ಬಳಿಕ ವಿಮಾನದ ಮೂಲಕ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಇಲ್ಲಿ ಆ ದಿನದ ಎರಡನೇ ಸಭೆಯಲ್ಲಿ ಭಾಗವಹಿಸಲಿದ್ದಾರೆ. ದಕ್ಷಿಣ ಕನ್ನಡ, ಉಡುಪಿ – ಚಿಕ್ಕಮಗಳೂರು, ಉತ್ತರ ಕನ್ನಡ ಮತ್ತು ಶಿವಮೊಗ್ಗ ಲೋಕಸಭೆ ಕ್ಷೇತ್ರ ವ್ಯಾಪ್ತಿಗೆ ಈ ಸಭೆ ನಿಗದಿಗೊಳಿಸಲಾಗಿದೆ. ‘ಶಿವಮೊಗ್ಗ ನಗರದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ ಪಾರ್ಕ್‌) ಸಭೆ ಆಯೋಜಿಸುವ ಸಾಧ್ಯತೆ ಇದೆ. ಇನ್ನಷ್ಟು ಮಾಹಿತಿ ಹೊರ ಬರಬೇಕಿದೆ.

ಇಬ್ಬರು ಮಾಜಿ ಸಿಎಂ ಮಕ್ಕಳ ಕದನ!

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ರಾಘವೇಂದ್ರ ಹಾಗೂ ಕಾಂಗ್ರೆಸ್ ಪಕ್ಷದಿಂದ ಬಂಗಾರಪ್ಪ ಪುತ್ರಿ ಗೀತಾ ಶಿವರಾಜ್ ಕುಮಾರ್ ಕಣಕ್ಕೆ ಇಳಿದು ರಾಜ್ಯದಲ್ಲೇ ಅತ್ಯಂತ ಪ್ರತಿಷ್ಠಿತ ಕ್ಷೇತ್ರವಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.