- ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ನಿಷೇಧಾಜ್ಞೆ
- ಜನವರಿ 2ರವರೆಗೆ ಕರ್ಪ್ಯೂ
ಬೆಂಗಳೂರು: ಮತ್ತೆ ಕರೋನಾ ಆರ್ಭಟ ಶುರುವಾಗಿದೆ. ಇಂಗ್ಲೆಂಡ್ ಮೂಲಕ ಭಾರತಕ್ಕೆ ಹೊಸ ಕರೋನಾ ಬಂದಿದೆ. ರಾಜ್ಯದಲ್ಲೂ ಕೂಡ ಈ ಕರೋನಾ ಮತ್ತೆ ಭೀತಿ ಸೃಸ್ಟಿಸಿದೆ.
ಡಿ.23ರಿಂದ 10 ದಿನಗಳವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಆರೋಗ್ಯ ಸಚಿವ ಸುಧಾಕರ್ ಜೊತೆ ಚರ್ಚೆ ನಡೆಸಿ ಮಾತನಾಡಿದ
ಜನವರಿ 2 ರವರೆಗೆ ರಾತ್ರಿ 10 ರಿಂದ ಬೆಳಗ್ಗೆ 6 ರವರೆಗೆ ನೈಟ್ ಕರ್ಫ್ಯೂ ಜಾರಿಯಾಗಲಿದೆ. ತುರ್ತು ಸೇವೆಗಳಿಗೆ ಮಾತ್ರ ನೈಟ್ ಕರ್ಫ್ಯೂ ವೇಳೆ ಅವಕಾಶ ನೀಡಲಾಗುತ್ತದೆ. ಉಳಿದ ಎಲ್ಲ ಸೇವೆಗಳಿಗೆ ನಿರ್ಬಂಧ ವಿಧಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಹೊಸ ವರ್ಷಾಚರಣೆ ಸಂಭ್ರಮ, ಪಾರ್ಟಿಗಳಿಗೆ ಅವಕಾಶ ಇಲ್ಲ.
ಹೊರ ದೇಶಗಳಿಂದ ಬಂದವರ ಮೇಲೆ ನಿಗಾ ವಹಿಸಲಾಗುತ್ತದೆ ಎಂದು ಹೇಳಿದ್ದಾರೆ.