Categories
ಕೊಪ್ಪ ಚಿಕ್ಕಮಗಳೂರು ತೀರ್ಥಹಳ್ಳಿ ಮಲ್ನಾಡ್ ಶಿವಮೊಗ್ಗ ಶೃಂಗೇರಿ

ಜನರಿಗೆ ತೊಂದರೆ ಕೊಡುತ್ತಿದ್ದ ಕಾಡಾನೆ ಸೆರೆಗೆ ಆದೇಶ

ಜನರಿಗೆ ತೊಂದರೆ ಕೊಡುತ್ತಿದ್ದ ಕಾಡಾನೆ ಸೆರೆಗೆ ಆದೇಶ

* ಶಾಸಕ ಟಿ ಡಿ ರಾಜೇಗೌಡರ ಪತ್ರದ ಆಧಾರದ ಮೇಲೆ ಆದೇಶ
* ಸಿಂಸೆ ಗ್ರಾಮಸ್ಥರ ನಿಯೋಗದೊಂದಿಗೆ ಅರಣ್ಯ ಸಚಿವರಿಗೆ ಮನವಿ ಸಲ್ಲಿಸಿದ್ದ ಶಾಸಕ

NAMMMUR EXPRESS NEWS
ಎನ್ ಆರ್ ಪುರ: ಜನರಿಗೆ ವಿಪರೀತ ತೊಂದರೆ ಕೊಡುತ್ತಿದ್ದ ಕಾಡಾನೆಯನ್ನು ಸೆರೆ ಹಿಡಿದು ಬೇರೆಡೆ ಸ್ಥಳಾಂತರಿಸುವಂತೆ ಗ್ರಾಮಸ್ಥರು ಮಾಡಿದ್ದ ಮನವಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸ್ಪಂದನೆ ನೀಡಿ ಕಾಡಾನೆ ಸೆರೆಗೆ ಆದೇಶಿಸಿದ್ದಾರೆ.

ತಾಲೂಕಿನ ಸಿಂಸೆ, ಅರಳಿಕೊಪ್ಪ, ವಗ್ಗಡೆ ಕಾನೂರು, ಗುಬ್ಬಿಗಾ ಗ್ರಾಮಗಳಲ್ಲಿ ಕಾಡಾನೆ ಉಪಟಳ ಹೆಚ್ಚಾಗಿದ್ದು,ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ ಡಿ ರಾಜೇಗೌಡ ಅವರು ಸಿಂಸೆ ಗ್ರಾಮಸ್ಥರ ನಿಯೋಗದೊಂದಿಗೆ ಸಚಿವರಿಗೆ ಮನವಿ ಮಾಡಿದ್ದರು. ಆನೆಯನ್ನು ಕಾಡಿಗೆ ಮರಳಿಸಲು ಹಲವು ಪ್ರಯತ್ನ ನಡೆಸಿದ್ದರೂ ಸಾಧ್ಯವಾಗಿರಲಿಲ್ಲ. ಹಗಲು ಹೊತ್ತಿನಲ್ಲಿ ಕಾಡಂಚಿನ ಗ್ರಾಮಗಳಲ್ಲಿ ಕಾಣಿಸುತ್ತಿತ್ತು.

ಈ ಮನವಿ ಹಿನ್ನೆಲೆ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರು ಇಂದು ವನ್ಯಜೀವಿ ಸಂರಕ್ಷಣಾ ಕಾಯಿದೆ 1972ರ ಸೆಕ್ಷನ್ 11(1) (ಎ) ಅನ್ವಯ ಆನೆ ಸೆರೆ ಕಾರ್ಯಾಚರಣೆಗೆ ಆದೇಶ ಹೊರಡಿಸಿದ್ದಾರೆ. ಮುಂದಿನ ಅಕ್ಟೋಬರ್ ಮೊದಲ ವಾರದಲ್ಲಿ ಕಾರ್ಯಾಚರಣೆ ಆರಂಭವಾಗಲಿದ್ದು, ಪ್ರಮಾಣಿತ ಕಾರ್ಯವಿಧಾನದಂತೆ ಲಕ್ಷ್ಮಣ, ಅಜಯ, ಮಾರ್ತಾಂಡ ಹಾಗೂ ಸಕ್ರೇಬೈಲು ಆನೆ ಶಿಬಿರದ 3 ಆನೆ ಬಳಸಿಕೊಂಡು ಸ್ಥಳೀಯರಿಗೆ ಯಾವುದೇ ಅಪಾಯ ಆಗದ ರೀತಿಯಲ್ಲಿ ಕಾರ್ಯಾಚರಣೆ ನಡೆಸಲು ಆದೇಶದಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.