ಪ್ರಣವ್ ಕೆ. ಭಟ್ ಅವರಿಗೆ ಮಹತ್ವದ ಹುದ್ದೆ
– ಪುತ್ತೂರಿನ ವಿವೇಕಾನಂದ ಸ್ವಾಯತ್ತ ಕಾಲೇಜಿನ ಆಂಗ್ಲ ವಿಭಾಗದ ಬೋರ್ಡ್ ಆಫ್ ಸ್ಟಡೀಸ್ ಸಂಸ್ಥೆಗೆ ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆ
ನಮ್ಮೂರ್ ಎಕ್ಸ್ ಪ್ರೆಸ್ ನ್ಯೂಸ್
ತೀರ್ಥಹಳ್ಳಿ/ ಪುತ್ತೂರು: ತೀರ್ಥಹಳ್ಳಿ ತಾಲೂಕು ಹುಲಿಮಂಡೆಯ ಜ್ಞಾನ ದರ್ಶಿನಿ ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಪ್ರಣವ್ ಕೆ. ಭಟ್ ಅವರು ಪುತ್ತೂರಿನ ವಿವೇಕಾನಂದ ಸ್ವಾಯತ್ತ ಕಾಲೇಜಿನ ಆಂಗ್ಲ ವಿಭಾಗದ ಬೋರ್ಡ್ ಆಫ್ ಸ್ಟಡೀಸ್ ಸಂಸ್ಥೆಗೆ ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಈ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಪ್ರಣವ್ ಅವರು ಅಮೂಲಾಗ್ರ ಕೊಡುಗೆ ನೀಡಿದ್ದು, ಇದೀಗ ಮಹತ್ವದ ಹುದ್ದೆ ಸಿಕ್ಕಿದೆ. ಬೋರ್ಡ್ ಆಫ್ ಸ್ಟಡೀಸ್‌ನ ಮುಖ್ಯ ಕರ್ತವ್ಯವೆಂದರೆ ಪಠ್ಯಕ್ರಮ ರೂಪಿಸುವುದು, ಅದರಲ್ಲಿ ಅಗತ್ಯವಾದ ಬದಲಾವಣೆಗಳನ್ನು ಸೂಚಿಸುವುದು ಮತ್ತು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಮಾರ್ಗದರ್ಶನ ನೀಡುವುದು. ಹಾಗೆಯೇ ಪರೀಕ್ಷಾ ವಿಧಾನ, ಪಠ್ಯಪುಸ್ತಕಗಳ ಆಯ್ಕೆ ಮತ್ತು ಶೈಕ್ಷಣಿಕ ಚಟುವಟಿಕೆಗಳ ಕುರಿತು ಸಲಹೆಗಳನ್ನು ನೀಡುವುದು ಇದರ ಪ್ರಮುಖ ಜವಾಬ್ದಾರಿಯಾಗಿದೆ. ಪ್ರಣವ್ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.
