Categories
ಮಲ್ನಾಡ್

ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಪ್ರಮಾಣ ವಚನಕ್ಕೆ ಸಿದ್ಧತೆ

ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಪ್ರಮಾಣ ವಚನಕ್ಕೆ ಸಿದ್ಧತೆ

– ಜೂನ್ 24ರಂದು ವಿಧಾನ ಸೌಧದಲ್ಲಿ ಕಾರ್ಯಕ್ರಮ
– ಮಲೆನಾಡ ನಾಯಕನಿಗೆ ಮತ್ತೆ ಅಧಿಕಾರ: ಕಾರ್ಯಕರ್ತರ ಸಂತಸ

NAMMUR EXPRESS NEWS
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಸದಸ್ಯರಾಗಿ ಆಯ್ಕೆಯಾಗಿದ್ದ ಸಿಟಿ ರವಿ ಅವರು ನೂತನ ವಿಧಾನ ಪರಿಷತ್‌ ಸದಸ್ಯರಾಗಿ ಜೂ. 24ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಜೂನ್ 24ರ ಸೋಮವಾರದಂದು ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ಬೆಳಗ್ಗೆ 11 ಗಂಟೆಗೆ ಪ್ರಮಾಣವಚನ ಸ್ವೀಕಾರ ಸಮಾರಂಭವು ನಡೆಯಲಿದೆ. ಸಮಾರಂಭದಲ್ಲಿ ಪ್ರಮುಖರ ಸಮ್ಮುಖದಲ್ಲಿ ಸಿಟಿ ರವಿ ರವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

• ಕರ್ನಾಟಕ ಬಿಜೆಪಿಗೆ ಹೊಸ ಚೈತನ್ಯ: ಅಭಿಮಾನಿಗಳ ಸಂತಸ

ವಿಧಾನ ಸಭೆಯಿಂದ ವಿಧಾನ ಪರಿಷತ್ ಸ್ಥಾನಕ್ಕೆ ಡಾ. ಸಿ. ಟಿ. ರವಿ ಅವಿರೋಧವಾಗಿ ಆಯ್ಕೆ ಆಗಿದ್ದು, ಈ ಮೂಲಕ ಮಲೆನಾಡ ನಾಯಕನಿಗೆ ಮಹತ್ವದ ಹುದ್ದೆ ಸಿಕ್ಕಿದೆ.
ಮೂರು ದಶಕಗಳ ಕಾಲ ಬಿಜೆಪಿ ನಿಷ್ಠಾವಂತ ಕಾರ್ಯಕರ್ತರಾಗಿ ಪಕ್ಷ ಸಂಘಟನೆಯಲ್ಲಿ ತಮ್ಮನ್ನು ನಿರಂತರ ತೊಡಗಿಸಿಕೊಂಡಿದ್ದ ಡಾ. ಸಿ. ಟಿ. ರವಿ ಮತಗಟ್ಟೆ ಮಟ್ಟದಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅಮಿತ್ ಷಾ ಜೊತೆಯಲ್ಲಿ ಸ್ಟಾರ್ ಪ್ರಚಾರಕರಾಗಿ ಕೆಲಸ ಮಾಡಿದವರು.
ಲೋಕಸಭಾ ಚುನಾವಣೆಯಲ್ಲಿ ನಿರಂತರವಾಗಿ ಕರ್ನಾಟಕವಲ್ಲದೆ ದೇಶದ ನಾನಾ ರಾಜ್ಯಗಳಲ್ಲಿ ಬಿಜೆಪಿ ಮತ್ತು ಎನ್ ಡಿ ಎ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು. ಎಬಿವಿಪಿ, ಯುವ ಮೋರ್ಚಾ, ಬಿಜೆಪಿಯಲ್ಲಿ ವಿವಿಧ ಉನ್ನತ ಹುದ್ದೆಗಳಲ್ಲಿ ದಕ್ಷತೆ ಮತ್ತು ನಿಷ್ಠೆಯಿಂದ ಕೆಲಸ ಮಾಡಿದ್ದಾರೆ. ನಾಲ್ಕು ಬಾರಿ ಶಾಸಕರಾಗಿ, ಎರಡು ಬಾರಿ ಸಚಿವರಾಗಿ ನಿರೀಕ್ಷೆಗೂ ಮೀರಿ ಕೆಲಸ ಮಾಡಿದ್ದಾರೆ.
ಸಿ. ಟಿ. ರವಿ ಅವರ ಸಂಘಟನಾ ಚಾತುರ್ಯವನ್ನು ಮನಗಂಡಿದ್ದ ಪಕ್ಷವು ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಉನ್ನತ ಹುದ್ದೆಗೆ ನೇಮಕ ಮಾಡಿತ್ತು. ಅಲ್ಲಿಯೂ ಪಕ್ಷ ಸಂಘಟಿಸುವ ಮೂಲಕ ಪಕ್ಷದ ಗಮನ ಸೆಳೆದಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಿಂದ ಪರಾಭಾವಗೊಂಡಿದ್ದ ಅವರು ಫಲಿತಾಂಶದ ಬಗ್ಗೆ ತಲೆ ಕೆಡಿಸಿಕೊಳ್ಳದೆ ಪಕ್ಷ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಅವರ ಸಂಘಟನಾ ಸಾಮರ್ಥ್ಯಕ್ಕೆ ಪಕ್ಷ ಮನ್ನಣೆ ನೀಡುವ ಮೂಲಕ ಪಕ್ಷಕ್ಕೆ ಹೊಸ ಚೈತನ್ಯ ಬಂದಂತಾಗಿದೆ.
ಇದೀಗ ಅವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಿದ್ಧತೆ ನಡೆದಿದ್ದು, ಅವರ ಅಭಿಮಾನಿಗಳಿಗೆ ಸಂತಸ ತಂದಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.