- ಪ್ರಥಮ ಪಿಯುಸಿ ಆಧಾರದ ಮೇಲೆ ಫಲಿತಾಂಶ
- ಜುಲೈ ಅಂತ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ!
- ರಾಜ್ಯ ಸರಕಾರದ ಮಹತ್ವದ ಘೋಷಣೆ
NAMMUR EXPRESS
ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ PUC ಪರೀಕ್ಷೆ ರದ್ದು ಮಾಡಲಾಗಿದೆ. ಆದ್ರೆ SSLC ವಿದ್ಯಾರ್ಥಿಗಳಿಗೆ ಎಕ್ಸಾಂ ಇರುತ್ತೆ. ಜುಲೈ ಅಂತ್ಯದಲ್ಲಿ ಪರೀಕ್ಷೆ ನಡೆಯುತ್ತೆ ಎಂದು ಶಿಕ್ಷಣ ಸಚಿವ ಸುರೇಶ ಕುಮಾರ್ ಹೇಳಿದ್ದಾರೆ.
ಗ್ರೇಡ್ ಆಧಾರದ ಮೇಲೆ ಪಾಸ್ ಮಾಡಲು ನಿರ್ಧಾರ ಮಾಡಲಾಗಿದೆ. ಕರೋನಾ ಹೆಚ್ಚುತ್ತಿರುವ ಕಾರಣ ಈ ನಿರ್ಧಾರ ಮಾಡಲಾಗಿದೆ.
ಕಳೆದ ವರ್ಷದ ಕರೋನಾ ನಡುವೆ ಮೊದಲ ಪಿಯುಸಿ ಪರೀಕ್ಷೆ ಎದುರಿಸಿ ಜಿಲ್ಲಾ ಮಟ್ಟದಲ್ಲಿ ಪರೀಕ್ಷೆಯನ್ನು ನಡೆಸಲಾಗಿತ್ತು. ಆ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ದ್ವಿತೀಯ ಪಿಯುಸಿ ಫಲಿತಾಂಶ ಕೊಡಲು ತಯಾರಿ ನಡೆಸಲಾಗಿದೆ.
ಪರೀಕ್ಷೆ ಹೇಗಿರುತ್ತೆ?: ಶಿಕ್ಷಣ ಸಚಿವರಾದ ಎಸ್.ಸುರೇಶ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿ ಕೇಂದ್ರ ಸರ್ಕಾರ ಈಗಾಗಲೇ ಸಿಬಿಎಸ್ಇ ಹಾಗೂ ಐಸಿಎಸ್ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿದೆ. ಹೀಗಾಗಿ ರಾಜ್ಯದಲ್ಲೂ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡಿ ಎಂಬ ಮನವಿಗಳು ಕೇಳಿ ಬಂದಿದ್ದವು. ಈ ಹಿನ್ನೆಲೆ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ.
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತದೆ. 8 ಲಕ್ಷ 75 ಸಾವಿರ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ಪರೀಕ್ಷೆ ಇಲ್ಲದೆ ಅವರ ಕಲಿಕಾ ಮಟ್ಟ ನಿರ್ಧಾರವಾಗೋದು ಕಷ್ಟ. ಕಳೆದ ವರ್ಷ 9 ನೇ ತರಗತಿ ಪರೀಕ್ಷೆ ನಡೆದಿಲ್ಲ. CBSE ನಲ್ಲಿ ಮೂರು ತಿಂಗೊಳಿಗೊಮ್ಮೆ ವಿದ್ಯಾರ್ಥಿಗಳ ಇವ್ಯುಲೇಶನ್ ನಡೆಯುತ್ತೆ. ನಮ್ಮಲ್ಲಿ ಆ ಪದ್ಧತಿ ಇಲ್ಲ. ಹೀಗಾಗಿ ಎರಡು ಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ. ಸಮಾಜ ವಿಜ್ಞಾನ, ಗಣಿತ, ವಿಜ್ಞಾನ- ಈ ಮೂರು ವಿಷಯ ಸೇರಿ ಒಂದು ಪ್ರಶ್ನೆ ಪತ್ರಿಕೆ ಇರುತ್ತದೆ ಪ್ರಶ್ನೆಗಳು ಸರಳವಾಗಿರುತ್ತೆ. ನೇರವಾಗಿರುತ್ತದೆ. ಬಹು ಆಯ್ಕೆ ಪ್ರಶ್ನೆಗಳು ಇರುತ್ತೆ ಎಂದು ಮಾಹಿತಿ ನೀಡಿದ್ದಾರೆ.
ಜುಲೈ 18ರಿಂದ SSLC ಪರೀಕ್ಷೆ?: ಕರೋನಾ ಕಡಿಮೆಯಾದರೆ ಜುಲೈ 3ನೇ ವಾರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಅಂದರೆ ಜುಲೈ 18ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವ ಸಾಧ್ಯತೆ ಇದೆ. ಆದರೆ ಪರೀಕ್ಷೆ ನಡೆಸುವ ಬಗ್ಗೆ ಅಂತಿಮ ತೀರ್ಮಾನವಾಗಿಲ್ಲ. ಪರೀಕ್ಷಾ ಕೊಠಡಿ ಮೇಲ್ವಿಚಾರಕರು ಕೊರೋನಾ ಲಸಿಕೆಯನ್ನು ಕಡ್ಡಾಯವಾಗಿ ಪಡೆದಿರಬೇಕು. ಈ ಬಾರಿ 6000 ಸಾವಿರ ಪರೀಕ್ಷಾ ಕೇಂದ್ರಗಳಿವೆ. ಕಳೆದ ವರ್ಷ ಮೂರು ಸಾವಿರ ಮಾತ್ರ ಇದ್ದವು. ಒಂದು ಡೆಸ್ಕ್ ನಲ್ಲಿ ಒಬ್ಬ ವಿದ್ಯಾರ್ಥಿಯನ್ನು ಕೂರಿಸಲಾಗುತ್ತದೆ. ಒಂದು ರೂಮ್ ನಲ್ಲಿ 10 ರಿಂದ 12 ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದರು.
ಪಿಯುಸಿ ಅಂಕ ಗೊಂದಲ: ದ್ವಿತೀಯ ಪಿಯುಸಿ ಫಲಿತಾಂಶ ಗೊಂದಲ ಆಗಲಿದ್ದು, ಸರಕಾರ ತಕ್ಷಣಕ್ಕೆ ಘೋಷಣೆ ಮಾಡದೇ ಅವರ ಭವಿಷ್ಯ, ಮುಂಬರುವ ತೊಂದರೆ ನೋಡಿಕೊಂಡು ನಿಯಮ ಮಾಡಬೇಕು ಎಂಬುದು ನಮ್ಮೂರ್ ಎಕ್ಸ್ಪ್ರೆಸ್ ಕಳಕಳಿ..!.
ರಾಜ್ಯದ ಎಲ್ಲಾ ಸುದ್ದಿ, ಜಾಹೀರಾತಿಗಾಗಿ “NAMMUR EXPRESS” ಫೇಸ್ಬುಕ್ ಮತ್ತು ಯೂಟ್ಯೂಬ್ ಚಾನೆಲ್ ಲೈಕ್ ಮಾಡಿ, ಸಬ್ಸ್ಕ್ರೈಬ್ ಆಗಿ. ವಾಟ್ಸಾಪ್ನಲ್ಲಿ ಸುದ್ದಿ ಪಡೆಯಲು 9481949101ಗೆ ನಿಮ್ಮ ಹೆಸರು, ಊರು, ತಾಲೂಕು ವಾಟ್ಸಾಪ್ ಮಾಡಿರಿ. ನಿಮ್ಮ ಎಲ್ಲಾ ಸ್ನೇಹಿತರು ಹಾಗೂ ಗ್ರೂಪ್ಗಳಿಗೆ ಶೇರ್ ಮಾಡಿರಿ. ಧನ್ಯವಾದಗಳು..!.