ಜೂನ್ 17ರವರೆಗೆ ಮಲೆನಾಡಲ್ಲಿ ಮಳೆ ರೆಡ್ ಅಲರ್ಟ್!
– ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ
– ಮಳೆ ವೇಳೆ ಅನಾಹುತಗಳಿಂದ ಎಚ್ಚರ
NAMMUR EXPRESS NEWS
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಪುನಃ ಸಕ್ರಿಯಗೊಂಡಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯೊಂದಿಗೆ ಗಾಳಿಯು ಸಹ ರಭಸವಾಗಿ ಬೀಸುತ್ತಿದೆ. ಇನ್ನೂ ಭಾರತೀಯ ಹವಾಮಾನ ಇಲಾಖೆ ಜೂನ್ 17ರವರೆಗೆ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಿದೆ. ಈಗಾಗಲೇ ಕರಾವಳಿಯಲ್ಲಿ ಭಾರೀ ಮಳೆ ಆಗುತ್ತಿದ್ದು, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ.
