- ಬೆಂಗಳೂರು, ಬಾಂಬೆ, ಚೆನ್ನೈ ಸೇರಿ 5 ಕಡೆ ಪ್ರಯಾಣ?
- ಮಲೆನಾಡಿನ ಅಭಿವೃದ್ಧಿಗೆ ಹೊಸ ಭರವಸೆ
NAMMUR EXPRESS
ಶಿವಮೊಗ್ಗ: ರಾಜ್ಯದ ಗಮನ ಸೆಳೆದಿರುವ ಶಿವಮೊಗ್ಗ ಏರ್ಪೋರ್ಟ್ ಇದೀಗ ಒಂದು ಹಂತಕ್ಕೆ ಮುಗಿದಿದೆ. ಈ ನಡುವೆ ಶಿವಮೊಗ್ಗದಿಂದ ಐದು ಮಾರ್ಗದಲ್ಲಿ ವಿಮಾನ ಹಾರಾಟ, ಪ್ರಸ್ತಾವನೆಯಲ್ಲಿ ಕೇಂದ್ರದ ಮುಂದಿಡಲಾಗಿದೆ.
ಮಲೆನಾಡು, ಕರಾವಳಿ, ಬೆಂಗಳೂರು, ಮಧ್ಯ ಕರ್ನಾಟಕ ಸಂಪರ್ಕ ಸುಲಭವಾಗುವ ಈ ಏರ್ಪೋರ್ಟ್ ಸವಾರಿ ಭಾರೀ ಕುತೂಹಲ ಮೂಡಿಸಿದೆ.
ಇತ್ತ ಶಿವಮೊಗ್ಗ ಏರ್ ಪೋರ್ಟ್ನಿಂದ ಐದು ಮಾರ್ಗಗಳಲ್ಲಿ ವಿಮಾನ ಹಾರಾಟ ನಡೆಸಲು ನಿರ್ಧರಿಸಲಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಅಂತಿಮ ಪ್ರಸ್ತಾವನೆ ಸಲ್ಲಿಸುವ ಕುರಿತು ಸಿದ್ಧತೆ ನಡೆಯುತ್ತಿದೆ. ಸೆ.13ರೊಳಗೆ ಅಂತಿಮ ಪ್ರಸ್ತಾವನೆ ಸಲ್ಲಿಸಬೇಕಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಅಂದ ಹಾಗೆ ಈ ಏರ್ಪೋರ್ಟ್ ಕಾಮಗಾರಿಯನ್ನು ರಾಜ್ಯದ ಪ್ರತಿಷ್ಠಿತ ಕನ್ಸ್ಟ್ರಕ್ಷನ್ ಕಂಪನಿಗಳಲ್ಲಿ ಒಂದಾದ ತೀರ್ಥಹಳ್ಳಿ ಮೂಲದ ನ್ಯಾಷನಲ್ ಕನ್ಸ್ಟ್ರಕ್ಷನ್ಸ್ ಮಾಡುತ್ತಿದೆ.
ಎಲ್ಲೆಲ್ಲಿಗೆ ವಿಮಾನ ಹಾರಾಟ?
ಬೆಂಗಳೂರು, ಚೆನ್ನೈ
ಮುಂಬೈ ಸೇರಿ ಐದು ಮಾರ್ಗಗಳಲ್ಲಿ ವಿಮಾನ ಹಾರಾಟಕ್ಕೆ ನಿರ್ಧರಿಸಲಾಗಿದೆ. ಉಡಾನ್ ಯೋಜನೆ ಅಡಿ ಈ ಮಾರ್ಗಗಳನ್ನು ಸೂಚಿಸಲಾಗಿದೆ.
ಪ್ರವಾಸೋದ್ಯಮಕ್ಕೆ ಹೈ ಟಚ್!
ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲೆಯ ಪ್ರವಾಸೋದ್ಯಮ ಮತ್ತು ಕೈಗಾರಿಕೋದ್ಯಮ ಅಭಿವೃದ್ಧಿಯನ್ನು ಗಮನದಲ್ಲಿ ಇರಿಸಿಕೊಂಡು ಈ ಮಾರ್ಗಗಳನ್ನು ನಿರ್ಧರಿಸಲಾಗಿದೆ ಎನ್ನಲಾಗಿದೆ.
ರಾಜ್ಯದ ಮುಂಚೂಣಿ ಮಾಧ್ಯಮ ಸಂಸ್ಥೆ ನಮ್ಮೂರ್ ಎಕ್ಸ್ಪ್ರೆಸ್. ರಾಜ್ಯದ ಎಲ್ಲಾ ಸುದ್ದಿಗಳಿಗೆ NAMMUR EXPRESS ” ಫೇಸ್ಬುಕ್ ಮತ್ತು ಯೂಟ್ಯೂಬ್ ಚಾನೆಲ್ ಲೈಕ್ ಮಾಡಿ , ಸಬ್ಸೈಬ್ ಆಗಿ , ವಾಟ್ಸಾಪ್ನಲ್ಲಿ ಎಲ್ಲಾ ನಿಮ್ಮ ಊರಿನ ಸುದ್ದಿ ಪಡೆಯಲು 9481949101ಗೆ ನಿಮ್ಮ ಹೆಸರು , ಊರು , ತಾಲೂಕು ವಾಟ್ಸಾಪ್ ಮಾಡಿರಿ. ನಿಮ್ಮ ಎಲ್ಲಾ ಸ್ನೇಹಿತರು ಹಾಗೂ ಗ್ರೂಪ್ಗಳಿಗೆ ಶೇರ್ ಮಾಡಿರಿ. ಧನ್ಯವಾದಗಳು. ಮಲೆನಾಡಿನ ಖ್ಯಾತ ಮಾಧ್ಯಮದಲ್ಲಿ ಜಾಹೀರಾತಿಗಾಗಿ ಕರೆ ಮಾಡಿ 9480181535.