-ಘಟನಾ ಸ್ಥಳಕ್ಕೆ ಸಿಎಂ ಭೇಟಿ.?!
ಬೆಂಗಳೂರು: ಶಿವಮೊಗ್ಗದ ಹುಣಸೋಡು ಬಳಿ ಸಂಭವಿಸಿದ ಭಾರಿ ದುರಂತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ನೀಡಿದ್ದಾರೆ. ಈ ಭಾರೀ ಅನಾಹುತದಲ್ಲಿ 8ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಇದು ತೀವ್ರ ಆಘಾತಕಾರಿ ಹಾಗೂ ದುರದೃಷ್ಟಕರ. ಹಿರಿಯ ಅಧಿಕಾರಿಗಳೊಂದಿಗೆ ಸಿ.ಎಂ.
ತಡರಾತ್ರಿಯಿಂದಲೇ ಸಂಪರ್ಕದಲ್ಲಿದ್ದು, ಅಗತ್ಯ ರಕ್ಷಣಾ ಕಾರ್ಯಾಚರಣೆಗೆ ತಂಡಗಳನ್ನು ಈಗಾಗಲೇ ರವಾನಿಸಲಾಗಿದೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರೆಲ್ಲರೂ ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ದುರ್ಘಟನೆಯ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ನಡುವೆ ಪ್ರಕರಣದ ತನಿಖೆ ನಡೆಸುವಂತೆ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಆಗ್ರಹಿಸಿದ್ದಾರೆ.