ಮಲ್ನಾಡ್ ಟಾಪ್ 3 ನ್ಯೂಸ್
ಶಿವಮೊಗ್ಗ : ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು..!!
– ಶಿಕಾರಿಪುರ: ಸೈಕಲ್‌ನಲ್ಲಿ ರಸ್ತೆ ದಾಟುತ್ತಿದ್ದಾಗ ಗೂಡ್ಸ್ ವಾಹನ ಡಿಕ್ಕಿ ಸೈಕಲ್ ಸವಾರನ ಸಾವು..!!
– ಶಿವಮೊಗ್ಗ : ಮೆಗ್ಗಾನ್ ಆಸ್ಪತ್ರೆಗೆ ಮಿನಿಸ್ಟರ್ ದಿಢೀರ್ ಭೇಟಿ..!!
– ಶಿಕಾರಿಪುರ: 6 ಲಕ್ಷ ಮೌಲ್ಯದ ಬಂಗಾರ ಹಾಗೂ ನಗದು ಕಳ್ಳತನ..!!
– ಭದ್ರಾವತಿ: ರಸ್ತೆ ಅಪಘಾತಕ್ಕೆ ಅರ್ಚಕ ಬಲಿ..!!
NAMMUR EXPRESS NEWS
ಶಿವಮೊಗ್ಗ: ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗೆ ದುಷ್ಕರ್ಮಿಗಳು ಕಳೆದ ರಾತ್ರಿ ಬೆಂಕಿ ಹಚ್ಚಿದ್ದಾರೆ. ಬೈಕ್‌ನ ಬಹು ಭಾಗ ಸುಟ್ಟು ಹೋಗಿದೆ. ಕಾಚಿನಕಟ್ಟೆ ಕೊರ್ಲಹಳ್ಳಿಯ ಓಂಕಾರಪ್ಪ ಎಂಬುವವರಿಗೆ ಸೇರಿದ ಬೈಕ್‌ಗೆ ಬೆಂಕಿ ಹಚ್ಚಲಾಗಿದೆ. ರಾತ್ರಿ 1 ಗಂಟೆ ಹೊತ್ತಿಗೆ ಘಟನೆ ನಡೆದಿದೆ. ‘ನಾಯಿಗಳು ಜೋರಾಗಿ ಬೊಗಳುತ್ತಿದ್ದರಿಂದ ಕಿಟಕಿಯಿಂದ ಹೊರಗೆ ನೋಡಿದಾಗ ಬೆಂಕಿ ಕಾಣಿಸಿತು. ಮುಂದಿನ ಬಾಗಿಲು ತೆಗೆಯಲು ಸಾಧ್ಯವಾಗದ್ದರಿಂದ ಹಿಂಬಾಗಿಲಿನಿಂದ ಬಂದು ಬೆಂಕಿ ನಂದಿಸಿದ್ದೇವೆ’ ಎಂದು ಓಂಕಾರಪ್ಪ ತಿಳಿಸಿದ್ದಾರೆ. ಘಟನೆಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ. ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
– ಶಿಕಾರಿಪುರ: ಸೈಕಲ್‌ನಲ್ಲಿ ರಸ್ತೆ ದಾಟುತ್ತಿದ್ದಾಗ ಗೂಡ್ಸ್ ವಾಹನ ಡಿಕ್ಕಿ ಸೈಕಲ್ ಸವಾರನ ಸಾವು..!!
ಶಿಕಾರಿಪುರ : ತಾಲೂಕಿನ ಅಂಬಾರಗೊಪ್ಪ ಕ್ರಾಸ್‌ನಲ್ಲಿ ಸೈಕಲ್‌ನಲ್ಲಿ ರಸ್ತೆ ದಾಟುತ್ತಿದ್ದಾಗ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಸವಾರ ರುದ್ರನಾಯ್ಕ (66) ಸ್ಥಳದಲ್ಲೇ ಮೃತಪಟ್ಟಿದ್ದಾರೆ . ಅಂಬಾರಗೊಪ್ಪ ಗ್ರಾಮದವರಾದ ರುದ್ರನಾಯ್ಕ ಅವರು ಗ್ರಾಮದಿಂದ ಶಿರಾಳಕೊಪ್ಪ-ಶಿಕಾರಿಪುರ ಮುಖ್ಯರಸ್ತೆ ದಾಟುವಾಗ ಈ ದುರ್ಘಟನೆ ನಡೆದಿದೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
– ಶಿವಮೊಗ್ಗ : ಮೆಗ್ಗಾನ್ ಆಸ್ಪತ್ರೆಗೆ ಮಿನಿಸ್ಟರ್ ದಿಢೀರ್ ಭೇಟಿ..!!
ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಅವರು ಆಸ್ಪತ್ರೆಯಲ್ಲಿನ ಒಳರೋಗಿಗಳ ವಿಭಾಗಕ್ಕೆ ಭೇಟಿ ನೀಡಿ ದಾಖಲಾಗಿದ್ದವರ ಆರೋಗ್ಯ ವಿಚಾರಿಸಿದರು. ಅಲ್ಲದೆ ಆಸ್ಪತ್ರೆಯ ಆಡಳಿತಾಧಿಕಾರಿಗಳ ಜೊತೆಗೆ ಸಭೆ ನಡೆಸಿ, ತುರ್ತು ಅಗತ್ಯತೆ ಕುರಿತು ಮಾಹಿತಿ ಪಡೆದರು.
– ಶಿಕಾರಿಪುರ: 6 ಲಕ್ಷ ಮೌಲ್ಯದ ಬಂಗಾರ ಹಾಗೂ ನಗದು ಕಳ್ಳತನ..!!
ಶಿಕಾರಿಪುರ: ತಾಲೂಕಿನ ಕಾಳೇನಹಳ್ಳಿ ಕ್ರಾಸ್ ಬಳಿ ಮನೆಯೊಂದರಲ್ಲಿ ಮಂಗಳವಾರ 6 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ₹30,000 ನಗದು ಕಳವು ಮಾಡಲಾಗಿದೆ. ಸರ್ಕಾರದಿಂದ ಉಚಿತವಾಗಿ ಸಿಂಟೆಕ್ಸ್ ನೀಡುವುದಾಗಿ ಹೇಳಿ ಬಂದಿದ್ದ ಇಬ್ಬರು ಅಪರಿಚಿತರು ಈ ಕಳವು ನಡೆಸಿದ್ದಾರೆ. ಒಬ್ಬ ವ್ಯಕ್ತಿ ಮನೆಯಲ್ಲಿದ್ದ ಮಹಿಳೆಯನ್ನು ಮಹಡಿ ಮೇಲೆ ಕರೆದುಕೊಂಡು ಹೋಗಿ ಮಾಹಿತಿ ಪಡೆಯುತ್ತಿದ್ದಾಗ, ಮತ್ತೊಬ್ಬ ವ್ಯಕ್ತಿ ಬೀರುವಿನಲ್ಲಿದ್ದ ಮಾಂಗಲ್ಯ ಸರ, 2 ಚೈನ್, ಅವಲಕ್ಕಿ ಸರ, 2 ಉಂಗುರ, ಕಿವಿ ಓಲೆ, ಜುಮುಕಿ ಸೇರಿ ಒಟ್ಟು 120 ಗ್ರಾಂ ಬಂಗಾರದ ಆಭರಣ ಹಾಗೂ ₹30,000 ನಗದು ದೋಚಿದ್ದಾನೆ. ನಂತರ ಇಬ್ಬರೂ ಬೈಕ್‌ನಲ್ಲಿ ಪರಾರಿಯಾಗಿದ್ದಾರೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
– ಭದ್ರಾವತಿ: ರಸ್ತೆ ಅಪಘಾತಕ್ಕೆ ಅರ್ಚಕ ಬಲಿ..!!
ಭದ್ರಾವತಿ : ಭದ್ರಾವತಿಯಲ್ಲಿ ದೇವಸ್ಥಾನದಲ್ಲಿ ಪೂಜೆ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದ ಹನುಮಂತಪ್ಪ ಕಾಲೊನಿಯ ಅರ್ಚಕ ಬಿ.ಕೆ. ಲಕ್ಷ್ಮೀಕಾಂತ (50) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಪೂಜೆ ಮುಗಿಸಿ ಮನೆಗೆ ಹೋಗುವಾಗ ಈ ಘಟನೆ ನಡೆದಿದೆ. ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಕಾರು ರಾಮಿನಕೊಪ್ಪ ಕ್ರಾಸ್ ಬಳಿ ಅವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಇವರು ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಶ್ರೀ ಕೃಷ್ಣ ದೇವಸ್ಥಾನ ಮತ್ತು ಬಿ.ಬಿ. ಮೈನ್ಸ್ ಹತ್ತಿರದ ರಂಗನಾಥಸ್ವಾಮಿ ದೇವಸ್ಥಾನಗಳಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು.