Categories
ಚಿಕ್ಕಮಗಳೂರು ಮಲ್ನಾಡ್

ಕಾಫಿನಾಡಿನಲ್ಲಿ ಮುಂದುವರಿದ ವರುಣನ ಆರ್ಭಟ: ಹವಾಮಾನ ಇಲಾಖೆಯಿಂದ ಹೈ ಅಲರ್ಟ್!

ಕಾಫಿನಾಡಿನಲ್ಲಿ ಮುಂದುವರಿದ ವರುಣನ ಆರ್ಭಟ: ಹವಾಮಾನ ಇಲಾಖೆಯಿಂದ ಹೈ ಅಲರ್ಟ್!

* ಕಾಫಿನಾಡಿನಲ್ಲಿ ಮುಂದಿನ 7 ದಿನ ಮಳೆ ಮುನ್ಸೂಚನೆ.
* ಗಾಳಿ ಮಳೆಗೆ ಹಲವು ಮನೆಗಳ ಹೆಂಚುಗಳು ಧರಾಶಾಹಿ.
* ಮುನ್ನೆಚ್ಚರಿಕೆ ವಹಿಸಲು ಹವಾಮಾನ ಇಲಾಖೆ ಮನವಿ.

ಚಿಕ್ಕಮಗಳೂರು: ಮಲೆನಾಡಿನ ಪ್ರಮುಖ ಜಿಲ್ಲೆಯಾದ ಚಿಕ್ಕಮಗಳೂರಿನಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕಾಫಿನಾಡಿನಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಜಿಲ್ಲೆಯ ಹಲವು ಭಾಗಗಳಲ್ಲಿ ಬೀಸುತ್ತಿರುವ ಪ್ರಬಲ ಗಾಳಿಗೆ ಮನೆಗಳ ಹೆಂಚುಗಳು ಹಾರಿಹೋಗಿದ್ದು, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾದ ವರದಿಗಳು ಲಭ್ಯವಾಗಿವೆ. ಅನಿರೀಕ್ಷಿತ ಗಾಳಿ-ಮಳೆಯಿಂದಾಗಿ ಸಂಕಷ್ಟಕ್ಕೀಡಾಗಿರುವ ನಿವಾಸಿಗಳು ಆತಂಕದಲ್ಲಿದ್ದಾರೆ.

ಧಾರಾಕಾರ ಮಳೆ ಮುಂದುವರಿಯಲಿರುವ ಹಿನ್ನೆಲೆಯಲ್ಲಿ ನದಿ ತೀರದ ನಿವಾಸಿಗಳು ಮತ್ತು ಮಲೆನಾಡಿನ ಘಟ್ಟ ಪ್ರದೇಶಗಳಲ್ಲಿ ಸಂಚರಿಸುವವರು ಜಾಗರೂಕರಾಗಿರಬೇಕು ಎಂದು ಸ್ಥಳೀಯ ಆಡಳಿತ ಸೂಚನೆ ನೀಡಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.