Categories
ತೀರ್ಥಹಳ್ಳಿ ಮಲ್ನಾಡ್

ಅಡಿಕೆ ತೋಟದಲ್ಲಿ ಗಾಂಜಾ ಗಿಡ ಬೆಳೆದವ ಅರೆಸ್ಟ್!

ಅಡಿಕೆ ತೋಟದಲ್ಲಿ ಗಾಂಜಾ ಗಿಡ ಬೆಳೆದವ ಅರೆಸ್ಟ್!

– ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಹುತ್ತಳ್ಳಿಯಲ್ಲಿ ಘಟನೆ
– ತೀರ್ಥಹಳ್ಳಿ ಪೊಲೀಸರ ಮಹತ್ವದ ಕಾರ್ಯಚರಣೆ
– 12 ಕೆಜಿ ಗಾಂಜಾ ಗಿಡ ವಶ: ಓರ್ವ ಅರೆಸ್ಟ್

NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ಹುತ್ತಳ್ಳಿ ಗ್ರಾಮದ ವಾಸಿ ಗುರುಮೂರ್ತಿಯು ತನ್ನ ವಾಸದ ಮನೆಯ ಹಿಂಭಾಗದ ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದಾನೆ ಎಂದು ಬಂದ ಖಚಿತ ಮಾಹಿತಿಯ ಮೇರೆಗೆ ತೀರ್ಥಹಳ್ಳಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಮಂಗಳವಾರ ಮಧ್ಯಾಹ್ನ ಈ ದಾಳಿ ನಡೆದಿದ್ದು ತೀರ್ಥಹಳ್ಳಿ ಭಾಗದಲ್ಲಿ ಗಾಂಜಾ ಗಿಡ ಬೆಳೆಯುವ ಈ ಘಟನೆ ಭಾರೀ ಕುತೂಹಲ ಮೂಡಿಸಿದೆ.
ಶಿವಮೊಗ್ಗ ಜಿಲ್ಲಾ ಎಸ್ಪಿ ಮಿಥುನ್ ಕುಮಾರ್, ಆಡಿಷನಲ್ ಎಸ್ಪಿ ಕುಮಾರ್ ಭೂಮಾರೆಡ್ಡಿ , ಹೆಚ್ಚುವರಿ ಪೊಲೀಸ್ ಅಧಿಕಾರಿ ಕಾರಿಯಪ್ಪ ಎ.ಜಿ ಇವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಗಜಾನನ ವಾಮನ ಸುತರಾ ಅವರ ನೇತೃತ್ವದ ಸಿಬ್ಬಂಧಿಗಳನ್ನೊಳಗೊಂಡ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿ ಅಡಿಕೆ ಗಿಡಗಳ ಮದ್ಯೆ ಬೆಳೆದಿದ್ದ ಅಂದಾಜು ಮೌಲ್ಯ 2,50,000/- ರೂಗಳ 9 ಕೆಜಿ 524 ಗ್ರಾಂ ತೂಕದ ಒಟ್ಟು 14 ಹಸಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಎರಡು ತಿಂಗಳ ಅವಧಿಯಲ್ಲಿ 8 ಕೇಸ್!

ಕಳೆದ ಎರಡು ತಿಂಗಳ ಅವಧಿಯಲ್ಲಿ ತೀರ್ಥಹಳ್ಳಿ ಪೊಲೀಸರು ಸುಮಾರು 8 ಗಾಂಜಾಕ್ಕೆ ಸಂಬಂಧಿಸಿದ ಕೇಸು ದಾಖಲಿಸಿ ಖಡಕ್ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. 6 ಗಾಂಜಾ ಸೇವನೆ ಪ್ರಕರಣ ದಾಖಲಿಸಿದ್ದು, 2 ಗಾಂಜಾ ಸಾಗಣೆ ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.