ನಿರುದ್ಯೋಗ ಸಮಸ್ಯೆಗೆ ಮಲೆನಾಡಲ್ಲಿ ಎರಡನೇ ಬಲಿ!
– ಸಾಗರ: ಮನೆ ಟೆರೇಸ್ ಮೇಲೆ ನೇಣಿಗೆ ಶರಣಾದ ವ್ಯಕ್ತಿ
– ಹೊಸನಗರ: ವಿಷ ಸೇವಿಸಿ ಯುವಕ ಆತ್ಮಹತ್ಯೆ
– ಸೊರಬ: ಒಡಹುಟ್ಟಿದ ಅಣ್ಣನನ್ನೇ ಕೊಂದ ತಮ್ಮ
NAMMUR EXPRESS NEWS
ಸಾಗರ: ಮನೆಯ ಟೆರೇಸ್ ಮೇಲಿನ ಸಿಂಟೆಕ್ಸ್ ಸ್ಟ್ಯಾಂಡಿಗೆ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರು ನಗರದಲ್ಲಿ ನಡೆದಿದೆ. ಮಧುಸೂದನ್(55) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಸಾಗರದ ಹೆಸರಾಂತ ಬೇಕರಿ ಒಂದರ ಉದ್ಯೋಗಿಯಾಗಿದ್ದ ಮಧುಸೂದನ್ ಇತ್ತಿಚೆಗೆ ಕೆಲಸ ಬಿಟ್ಟಿದ್ದ ಎನ್ನಲಾಗಿದೆ. ಬೇಕರಿಯಲ್ಲಿ ಕೆಲಸ ಬಿಟ್ಟ ಬಳಿಕ ಬೇರೆಡೆ ಸಿಕ್ಕಿರಲಿಲ್ಲ. ಉದ್ಯೋಗಕ್ಕಾಗಿ ಸಿರ್ಸಿಗೆ ಹೋಗಬೇಕಾಗಿತ್ತು. ಉದ್ಯೋಗ ಅರಸಿಕೊಂಡು ಸಿರ್ಸಿಗೆ ಹೋಗಲಾಗದೆ, ಸ್ಥಳೀಯವಾಗಿ ಯಾವುದೇ ಉದ್ಯೋಗವಿಲ್ಲದೆ ಜೀವನದಲ್ಲಿ ಜುಗುಪ್ಪೆಗೊಂಡು ತನ್ನ ಸಂಬಂಧಿಕರ ಮನೆಯ ಟೆರೇಸ್ ಮೇಲಿನ ಸಿಂಟೆಕ್ಸ್ ಸ್ಟ್ಯಾಂಡಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಟೆರೇಸ್ ಮೇಲೆ ಮೃತದೇಹ ಕಂಡು ಗಾಬರಿಗೊಂಡ ಸಂಬಂಧಿಕರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿಷ ಸೇವಿಸಿ ಯುವಕ ಆತ್ಮಹತ್ಯೆ
ಹೊಸನಗರ ತಾಲೂಕು ರಿಪ್ಪನ್ಪೇಟೆ ಪಟ್ಟಣದ ಸಮೀಪದ ಮೂಗೂಡ್ತಿ ಗ್ರಾಮದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ನಡೆದಿದೆ. ಮೂಗೂಡ್ತಿ ಗ್ರಾಮದ ನಿವಾಸಿ ಕೀರ್ತಿ (22) ಮೃತಪಟ್ಟ ಯುವಕನಾಗಿದ್ದು ಈತನು ಬೆಂಗಳೂರಿನಲ್ಲಿ ಕ್ಯಾಟರಿಂಗ್ ವೃತ್ತಿ ಮಾಡಿಕೊಂಡಿದ್ದನು. ಗುರುವಾರ ಸಂಜೆ ಬೆಂಗಳೂರಿನಿಂದ ಸ್ವಗ್ರಾಮ ಮೂಗೂಡ್ತಿಗೆ ಬಂದು ತನ್ನ ಅಣ್ಣನಿಗೆ ಮೊಬೈಲ್ ಮೂಲಕ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುತಿದ್ದೇನೆ ಎಂದು ಸ್ವತೋಟಕ್ಕೆ ತೆರಳಿ ವಿಷ ಸೇವಿಸಿದ್ದಾನೆ. ಗಾಬರಿಗೊಂಡ ಅಣ್ಣ ತಮ್ಮನಿಗಾಗಿ ಹುಡುಕಾಟ ಪ್ರಾರಂಭಿಸಿದ್ದಾನೆ. ಕೆಲಸಮಯದ ನಂತರ ಆತನೆ ಅಣ್ಣನಿಗೆ ಕರೆ ಮಾಡಿ ತೋಟದಲ್ಲಿ ವಿಷ ಸೇವಿಸಿರುವ ಮಾಹಿತಿ ನೀಡಿದ್ದಾನೆ ತಕ್ಷಣ ತೋಟಕ್ಕೆ ತೆರಳಿ ಆತನನ್ನು ಕೂಡಲೇ ಶಿವಮೊಗ್ಗದ ಮೆಗ್ಗಾನ್ ಗೆ ದಾಖಲಿಸಿ ಅಲ್ಲಿಂದ ಮಣಿಪಾಲ್ ಗೆ ಕರೆದೊಯ್ದು ನಂತರ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸಂಜೆ ಚಿಕಿತ್ಸೆ ಫಲಿಸದೇ ಕೀರ್ತಿ ಮೃತಪಟ್ಟಿದ್ದಾನೆ. ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಒಡಹುಟ್ಟಿದ ಅಣ್ಣನನ್ನೇ ಹತ್ಯೆಗೈದ ತಮ್ಮ!
ಆನಂದಪುರ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದಲ್ಲಿ ಗುರುವಾರ ಸಂಜೆ ಓರ್ವ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಆರೋಪಿಗಳು ಎಸ್ಕೆಪ್ ಆಗಿದ್ದರು. ಹೆದ್ದಾರಿ ಪಕ್ಕದಲ್ಲಿ ಕೊಲೆ ನೋಡಿದ ಜನರು ಗಾಬರಿಯಾಗಿದ್ದರು. ಕೊಲೆಯಾದ ವ್ಯಕ್ತಿ ಸೊರಬ ತಾಲೂಕಿನ ಉಡಿನೀರು ಗ್ರಾಮದ ರಫಿಕ್ (39) ಎನ್ನುವುದು ಪೊಲೀಸರಿಗೆ ತನಿಖೆ ವೇಳೆ ತಿಳಿದು ಬಂದಿದೆ. ಮೃತ ರಫಿಕ್ ನನ್ನು ಅವನ ಸ್ವಂತ ತಮ್ಮ ಇನಾಯತ್ ಹಾಗೂ ಅಕ್ಕನ ಮಗ ಸಮೀರ್ ಶಿವಮೊಗ್ಗಕ್ಕೆ ಶಾಪಿಂಗ್ ನೆಪದಲ್ಲಿ ಕರೆದುಕೊಂಡು ಬಂದು ಹಿಂದಿರುಗುವಾಗ ಮೊದಲು ಕಣ್ಣಿಗೆ ಖಾರದ ಪುಡಿ ಎರಚಿದ್ದಾರೆ. ಬಳಿಕ ತಂತಿಯಿಂದ ಕುತ್ತಿಗೆ ಬಿಗಿದು ಹತ್ಯೆ ಮಾಡಿದ್ದಾರೆ. ಕೊನೆಗೆ ಹೋಗುವಾಗ ಆತನ ಮೇಲೆ ಕಾರ್ ಕೂಡ ಹತ್ತಿಸಿದ್ದಾರೆ. ಆತ ಮೃತಪಟ್ಟಿರುವುದು ಖಚಿತವಾದ ಬಳಿಕ ಇಬ್ಬರು ಕಾರ್ನಲ್ಲಿ ಅಲ್ಲಿಂದ ಎಸ್ಕೆಪ್ ಆಗಿದ್ದರು. ಕುಟುಂಬದಲ್ಲಿ ಶುರುವಾದ ಆಸ್ತಿ ವಿವಾದವು ಅಣ್ಣ ಮತ್ತು ತಮ್ಮ ಇಬ್ಬರನ್ನು ಬಲಿ ಪಡೆದಿದೆ. ಅಣ್ಣನ ಕೊಲೆ ಕೇಸ್ನಲ್ಲಿ ಈಗ ತಮ್ಮನು ಜೈಲು ಸೇರಿದ್ದಾನೆ. ಮೂವರು ಗಂಡು ಮಕ್ಕಳಲ್ಲಿ ಇಬ್ಬರು ಕೊಲೆಯಾಗಿದ್ದಾರೆ.