Categories
ಮಲ್ನಾಡ್

ತೀರ್ಥಹಳ್ಳಿ : ಕುಟುಂಬ ಸಮಸ್ಯೆಯಿಂದಾಗಿ ಮನನೊಂದು ವಿಷ ಸೇವಿಸಿದ್ದ ಪ. ಪಂ ಕಾರ್ಮಿಕ ಸಾವು..!

ಮಲ್ನಾಡ್ ಟಾಪ್ 4 ನ್ಯೂಸ್

ತೀರ್ಥಹಳ್ಳಿ : ಕುಟುಂಬ ಸಮಸ್ಯೆಯಿಂದಾಗಿ ಮನನೊಂದು ವಿಷ ಸೇವಿಸಿದ್ದ ಪ. ಪಂ ಕಾರ್ಮಿಕ ಸಾವು..!
– ಹೊಸನಗರ : ಬಸ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿ..!!
– ತೀರ್ಥಹಳ್ಳಿ: ಕಾರು ಮತ್ತು ಬೈಕ್ ನಡುವೆ ಅಪಘಾತ ಬೈಕ್ ಚಾಲಕನಿಗೆ ಗಂಭೀರ ಗಾಯ..!
– ವಿದ್ಯುತ್ ಕಂಬಕ್ಕೆ ವಾಹನ ಡಿಕ್ಕಿಯಿಂದ ಚಾಲಕ ಸಾವು..!!

NAMMUR EXPRESS NEWS
ತೀರ್ಥಹಳ್ಳಿ : ಪಟ್ಟಣ ಪಂಚಾಯತ್ ನಲ್ಲಿ ಹಲವು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದ ಯುವಕ ವಿಷ ಸೇವಿಸಿ ಪ್ರಾಣ ಕಳೆದುಕೊಂಡಿದ್ದಾನೆ. ಪ್ರಶಾಂತ್ ( 30 ವರ್ಷ) ಮೃತಪಟ್ಟ ಯುವಕ. ಕುಟುಂಬ ಸಮಸ್ಯೆಯಿಂದಾಗಿ ಮನನೊಂದು ವಿಷ ಸೇವಿಸಿದ್ದಾನೆ ಎಂದು ತಿಳಿದುಬಂದಿದೆ. ಮದ್ಯಪಾನಕ್ಕೆ ವಿ*ಷ ಬೆರೆಸಿಕೊಂಡು ಸೇವಿಸಿದ್ದು ನಂತರ ಸ್ನೇಹಿತರಿಗೆ ತಿಳಿಸಿದ್ದಾನೆ. ತಕ್ಷಣವೇ ಆತನನ್ನು ಜೆಸಿ ಆಸ್ಪತ್ರೆ ನಂತರ ಮೆಗ್ಗಾನ್ ಆಸ್ಪತ್ರೆ ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ವಿಷ ಸಂಪೂರ್ಣ ದೇಹವನ್ನು ಆವರಿಸಿಕೊಂಡಿದ್ದ ಪರಿಣಾಮ ಚಿಕಿತ್ಸೆ ಫಲಿಸದೇ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಮೂಲತಃ ಭದ್ರಾವತಿಯವನಾಗಿದ್ದ ಪ್ರಶಾಂತ್ ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಈತನ ಪತ್ನಿ ಗರ್ಭಿಣಿ ಎಂದು ತಿಳಿದು ಬಂದಿದೆ. ಪ್ರಶಾಂತ್ ಅವರ ನಿಧನಕ್ಕೆ ಪಟ್ಟಣ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಸಿಬ್ಬಂದಿಗಳು ಸಂತಾಪ ಸೂಚಿಸಿದ್ದಾರೆ.

– ಹೊಸನಗರ : ಬಸ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿ..!!

ಖಾಸಗಿ ಬಸ್ ಅಪಘಾತವಾಗಿದೆ. ಈ ಘಟನೆ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಹೊಸನಗರ ತಾಲೂಕಿನ ನಿಟ್ಟೂರು-ನಾಗೋಡಿ ಮಾರ್ಗದಲ್ಲಿ ಖಾಸಗಿ ಬಸ್ ಅಪಘಾತಕ್ಕೀಡಾಗಿದೆ. ಖಾಸಗಿ ಬಸ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿರುವ ಘಟನೆ ನಗರದ ಶಾಲೆಯೊಂದರ ಬಳಿ ನಡೆದಿದೆ. ಸಾಗರದಿಂದ ಕುಂದಾಪುರದ ಕಡೆಗೆ ಹೊರಟಿದ್ದ ಬಸ್ ಮತ್ತು ನಿಟ್ಟೂರಿನ ಕಡೆಗೆ ಬರುತ್ತಿದ್ದ ರಸ್ತೆ ರೋಲರ್ (ರೋಡ್ ರೋಲರ್) ತುಂಬಿದ ಟಿಪ್ಪರ್ ಮಧ್ಯೆ ಈ ಅಪಘಾತ ಸಂಭವಿಸಿದೆ. ಬಸ್ಸಿನಲ್ಲಿ ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರು ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಸ್ತೆ ಅಪಘಾತ ಸುದ್ದಿ ಹೊಸನಗರ, ನಿಟ್ಟೂರು-ನಾಗೋಡಿ ರಸ್ತೆ, ಸಾಗರದಿಂದ ಕುಂದಾಪುರ ಬಸ್ ಮಾರ್ಗ, ಹೊಸನಗರ ಸುದ್ದಿ,

– ತೀರ್ಥಹಳ್ಳಿ: ಕಾರು ಮತ್ತು ಬೈಕ್ ನಡುವೆ ಅಪಘಾತ ಬೈಕ್ ಚಾಲಕನಿಗೆ ಗಂಭೀರ ಗಾಯ..!

ತೀರ್ಥಹಳ್ಳಿ : ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಚಾಲಕನಿಗೆ ಗಂಭೀರ ಗಾಯವಾಗಿದ್ದು ಆತನನ್ನು ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾದ ಘಟನೆ ತೀರ್ಥಹಳ್ಳಿಯ ಕೊಪ್ಪ ರಸ್ತೆಯಲ್ಲಿ ನಡೆದಿದೆ. ಕುರುವಳ್ಳಿ ಸಮೀಪದ ಕುಂಬಾರದಡಿಗೆ ತಿರುವಿನಲ್ಲಿ ಈ ಅಪಘಾತ ಸಂಭವಿಸಿದ್ದು ಬೈಕ್ ಚಾಲಕ ಮದನ್ ಎಂಬುವರಿಗೆ ಗಂಭೀರ ಗಾಯವಾಗಿದೆ. ಅವರನ್ನು ತಕ್ಷಣವೇ ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ನೂರು ಮೀಟರ್ ನಷ್ಟು ಬೈಕ್ ಸಮೇತ ಎಳೆದೋಯ್ಯಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ..

– ವಿದ್ಯುತ್ ಕಂಬಕ್ಕೆ ವಾಹನ ಡಿಕ್ಕಿಯಿಂದ ಚಾಲಕ ಸಾವು..!!

ಹೊಸನಗರದಿಂದ ಕುಂದಾಪುರ ಕಡೆ ಹೋಗುತ್ತಿದ್ದ ಬಡಾ ದೋಸ್ತ್ ವಾಹನ ಹುಲಿಕಲ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸಾಲಿಗ್ರಾಮದ ಮೂಲದ ಚಾಲಕ ಗೋಪಾಲ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಕ್ಲೀನರ್ ಪ್ರಭಾಕರ ಗಾಯಗೊಂಡಿದ್ದು ಮಾಸ್ತಿಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು. ಡಾ.ಸುದೀಪ್ ಡಿಮೆಲ್ಲೋ ಚಿಕಿತ್ಸೆ ನೀಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ನಡೆದಿದೆ. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.