•ತೀರ್ಥಹಳ್ಳಿ: ಪಿಯು ಕಾಲೇಜುಗಳ ಉಪನ್ಯಾಸಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
– ಅಧ್ಯಕ್ಷರಾಗಿ ಎಸ್.ಎಂ.ಜಗದೀಶ್, ಕಾರ್ಯಾಧ್ಯಕ್ಷರಾಗಿ ಶ್ರೀಧರಮೂರ್ತಿ ಎಂ.ಎನ್, ಕಾರ್ಯದರ್ಶಿಗಳಾಗಿ ಸುಬ್ರಮಣ್ಯ ಕೆ.ಟಿ, ಖಜಾಂಚಿಯಾಗಿ ತೀರ್ಥಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಪ್ರವೀಣ್ ಡಿ
ತೀರ್ಥಹಳ್ಳಿ: ತೀರ್ಥಹಳ್ಳಿ ತಾಲ್ಲೂಕಿನ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಸಭೆಯು ಕಳೆದ ಕೆಲವು ದಿನಗಳ ಹಿಂದೆ ಸಂಘದ ಅಧ್ಯಕ್ಷರಾದ ಯೋಗೀಶ್.ಎಸ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ತೀರ್ಥಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವೈ.ಎಂ.ಸುಧಾ, ಶಿವಮೊಗ್ಗದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜಿ.ಎಫ್.ಕುಟ್ರಿ, ಬಡ್ತಿ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷರಾದ ಘನಶಾಮ್, ಉಪನ್ಯಾಸಕರಾದ ಹಾಲಪ್ಪ ಮತ್ತು ದಿನಕರ್ ಅವರ ಮಾರ್ಗದರ್ಶನದಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ಉಪನ್ಯಾಸಕರ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಸಂಘದ ನೂತನ ಅಧ್ಯಕ್ಷರಾಗಿ ತೀರ್ಥಹಳ್ಳಿಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಎಸ್.ಎಂ.ಜಗದೀಶ್, ಕಾರ್ಯಾಧ್ಯಕ್ಷರಾಗಿ ಬಸವಾನಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಶ್ರೀಧರಮೂರ್ತಿ ಎಂ.ಎನ್, ಕಾರ್ಯದರ್ಶಿಗಳಾಗಿ ಆರಗ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಬ್ರಮಣ್ಯ ಕೆ.ಟಿ, ಖಜಾಂಚಿಯಾಗಿ ತೀರ್ಥಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಪ್ರವೀಣ್ ಡಿ, ಸಹ ಕಾರ್ಯದರ್ಶಿಗಳಾಗಿ ತೀರ್ಥಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ನಾಗಭೂಷಣ್ ಕೆ, ಉಪಾಧ್ಯಕ್ಷರಾಗಿ ತೀರ್ಥಹಳ್ಳಿಯ ಸರ್ಕಾರಿ ಬಾಲಿಕಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಶೈಲಾ ವೈ.ಎಂ, ಸಂಘಟನಾ ಕಾರ್ಯದರ್ಶಿಗಳಾಗಿ ತೀರ್ಥಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಪ್ರಕಾಶ್ ಬಿ.ಇ, ಮಾಳೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಚಂದ್ರಶೇಖರ್ ಎ. ಜೆ, ತೀರ್ಥಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಕೃಷ್ಣ, ಸಂಘದ ಪ್ರತಿನಿಧಿಗಳಾಗಿ ತೀರ್ಥಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಪ್ರಭಾಕರ್ ಸಿ.ಎನ್ ಅವರು ಆಯ್ಕೆಯಾಗಿದ್ದಾರೆ. ಇನ್ನು ತಾಲ್ಲೂಕಿನ ವಿವಿಧ ಕಾಲೇಜುಗಳ ನಿರ್ದೇಶಕರಾಗಿ ಅಶ್ವಿನ್, ಸುಧೀರ್ ಕೆ.ಎನ್, ದೇವಪ್ಪ ಬಿ.ಡಿ, ಮಹೇಶ್ ಬಿ.ಸಿ, ಕೆ.ಸಿ.ಪ್ರಕಾಶ್, ವಸಂತ್ ಎಸ್.ವಿ, ಪ್ರಶಾಂತ್ ಆಯ್ಕೆಯಾಗಿದ್ದಾರೆ. ಸಭೆಗೆ ವಿಶೇಷ ಆಹ್ವಾನಿತರಾಗಿ ತೀರ್ಥಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ಹಾಗೂ ಕರ್ನಾಟಕ ರಾಜ್ಯ ನೌಕರರ ಸಂಘದ ತೀರ್ಥಹಳ್ಳಿ ಶಾಖೆಯ ಉಪಾಧ್ಯಕ್ಷರಾದ ಡಾ.ದೇವರಾಜ್ ಎಚ್. ಎಲ್ ಅವರು ಆಗಮಿಸಿದ್ದರು.
