ಟಾಪ್ 4 ನ್ಯೂಸ್ ಮಲ್ನಾಡ್
– ರಿಪ್ಪನ್ ಪೇಟೆ : ವಿದ್ಯುತ್ ತಗುಲಿ ಯುವಕ ಸಾವು
– ಸಾಗರ : ತಹಶೀಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಲೆಕ್ಕಾಧಿಕಾರಿ
– ಸೊರಬ : ಸಾಗುವಾನಿ ಮರ ಅಕ್ರಮ ಸಾಗಾಣೆ ಆರೋಪಿಗಳ ಬಂಧನ
– ಶಿವಮೊಗ್ಗ : ಕಾಣೆಯಾಗಿದ್ದ ಮಹಿಳೆ ಶವ ನದಿಯಲ್ಲಿ ಪತ್ತೆ
NAMMUR EXPRESS NEWS
ರಿಪ್ಪನ್ಪೇಟೆ : ವಿದ್ಯುತ್ ತಗುಲಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಗವಟೂರಿನ ಹಳೂರು ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್ ಎಸ್ (19) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಇಂದು ಬೆಳಗಿನ ಜಾವ ಮನೆ ಮುಂಭಾಗದಲ್ಲಿರುವ IBx ಬೇಲಿಯ ಬಳಿಯಲ್ಲಿ ಮೂತ್ರ ವಿಸರ್ಜನೆ ಮಾಡುವಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಬೇಲಿಯ ಮೇಲೆ ಬಿದ್ದಿದ್ದಾನೆ. ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ ಅಷ್ಟರಲ್ಲಾಗಲೇ ಯುವಕನ ಪ್ರಾಣ ಪಕ್ಷಿ ಹಾರಿಹೋಗಿತ್ತು.
ಮನೆಯ ಮುಂಭಾಗದ ಬೇಲಿಯ ಮೇಲೆ ವಿದ್ಯುತ್ ವಯರ್ ತುಂಡಾಗಿ ಬಿದ್ದಿತ್ತು ಹಾಗಾಗಿ ಈ ದುರ್ಘಟನೆ ನಡೆದಿದೆ ಎನ್ನಲಾಗುತಿದ್ದು ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ. ಕಾರ್ತಿಕ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿಬಿಎ ವ್ಯಾಸಾಂಗ ಮಾಡುತಿದ್ದನು.ಸ್ಥಳಕ್ಕೆ ರಿಪ್ಪನ್ಪೇಟೆ ಪಿಎಸ್ಐ ಪ್ರವೀಣ್ ಹಾಗೂ ಮೆಸ್ಕಾಂ ಸಿಬ್ಬಂದಿಗಳು ತೆರಳಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ.
– ಸಾಗರ : ತಹಶೀಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಲೆಕ್ಕಾಧಿಕಾರಿ
ಸಾಗರ : ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತಹಶೀಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಇದೀಗ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಮಾನಸಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ಸಾಗರ ತಾಲೂಕಿನ ತಹಸಿಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಡೆತ್ ನೋಟ್ ಬರೆದಿಟ್ಟು ನಿದ್ದೆ ಮಾತ್ರೆ ಸೇವಿಸಿ ಗ್ರಾಮ ಲೆಕ್ಕಧಿಕಾರಿ ವಿಮಲ ಎನ್ನುವವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಹಶೀಲ್ದಾರ್ ಕಚೇರಿಯಲ್ಲಿ ಈ ಒಂದು ಘಟನೆ ನಡೆದಿದೆ. ತಹಶೀಲ್ದಾರ್ ಚಂದ್ರಶೇಖರ್ ನಾಯಕ ವಿರುದ್ಧ ಮಾನಸಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಸಾಗರ ತಾಲೂಕಿನ ಅರಹ ಗ್ರಾಮದ ವಿಎ ವಿಮಲಾರಿಂದ ಆರೋಪ ಕೇಳಿ ಬಂದಿದೆ. ಗ್ರಾಮ ಲೆಕ್ಕಾಧಿಕಾರಿ ವಿಮಲಾ (33) ಆತ್ಮಹತ್ಯೆಗೆ ಯತ್ನಿಸಿದವರು. ಅಸ್ವಸ್ಥ ಗ್ರಾಮ ಲೆಕ್ಕಾಧಿಕಾರಿ ವಿಮಲಾಗೆ ಸಾಗರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.
– ಸೊರಬ : ಸಾಗುವಾನಿ ಮರ ಅಕ್ರಮ ಸಾಗಾಣೆ ಆರೋಪಿಗಳ ಬಂಧನ
ಸೊರಬ: ತಾಲೂಕಿನ ಕಾಸರಗುಪ್ಪೆ ಗ್ರಾಮ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಸಾಗುವಾನಿ ಮರ ಕಡಿತಲೆ ಮಾಡಿ ಸಾಗಣಿಕೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಾಹನ ಸಮೇತ ಹಿಡಿದು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಘಟನೆ ನಡೆದಿದೆ. ಆರೋಪಿಗಳು ಕಾಸರಗುಪ್ಪೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಆಕ್ರಮವಾಗಿ ಸಾಗುವಾನಿ ಮರ ಕಡಿತಲೆ ಮಾಡಿ ಸಾಗಾಣಿಕೆ ಮಾಡುವ ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿದಾಗ ಸಾಗುವಾನಿ ಮರ ಹಾಗೂ ಒಂದು ಟಾಟಾ ಎಸಿ ಮತ್ತು ಒಂದು ದ್ವಿಚಕ್ರ ವಾಹನ ಸಮೇತ ನಿಸರಾಣಿಯ ರವೀಂದ್ರ, ಸುಬ್ಬಪ್ಪ, ರಾಕೇಶ ರಘುಪತಿ (18) ಎಂಬು ವರನ್ನು ಸ್ಥಳದಲ್ಲಿ ಬಂಧಿಸಲಾಗಿದೆ. ಚೀಲ ನೂರಿನ ಪ್ರದೀಪ್ ಮಂಜಪ್ಪ (30 )ಹಾರೆಕೊಪ್ಪದ ನಂದನ ಆನಂದ(25) ಸಿದ್ದಾಪುರದ ನಾಗರಾಜ(25) ಗೊಂಟನಾಳ ಎಂಬ ಮೂರು ಜನ ಆರೋಪಿಗಳು ತಲೆಮರೆಸಿ ಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ವಲಯ ಅರಣ್ಯ ರಕ್ಷಣಾಧಿಕಾರಿ ಜಾವಿದ್ ಭಾಷಾ ಅಂಗಡಿ,ಅರಣ್ಯ ಸಂರಕ್ಷಕ ರಾದ ಪರಶುರಾಮ್, ಯೋಗ ರಾಜ್, ಸಿಬ್ಬಂದಿಗಳಾದ ಹರೀಶ್, ಆನಂದ್ ಪಾಲ್ಗೊಂಡಿದ್ದರು.
– ಶಿವಮೊಗ್ಗ : ಕಾಣೆಯಾಗಿದ್ದ ಮಹಿಳೆ ಶವ ನದಿಯಲ್ಲಿ ಪತ್ತೆ
ಶಿವಮೊಗ್ಗ : ಭೀಮೇಶ್ವರ ದೇವಸ್ಥಾನದ ತುಂಗ ನದಿಯ ಭೀಮನ ಮಡುವಿನಲ್ಲಿ ಮಹಿಳೆಯೋರ್ವರ ಶವ ಪತ್ತೆಯಾಗಿದೆ. ಮೃತದೇಹವನ್ನ ಮಾಲಿನಿ ಎಂದು ಗುರುತಿಸಲಾಗಿದೆ. ಇವರಿಗೆ 57 ವಯಸ್ಸಾಗಿತ್ತು ಎಂದು ತಿಳಿದು ಬಂದಿದೆ. ದೊಡ್ಡಪೇಡೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದ ಮಾಲಿನಿ ಭೀಮನ ಮಡಿಲಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ನ್ಯೂ ಮಂಡ್ಲಿಯ ವಿಜಯ ಬೇಕರಿ ಹಿಂಭಾಗದ ನಿವಾಸಿಯಾಗಿದ್ದ ಮಹಿಳೆ ಜುಲೈ 10 ರಂದು ನಾಪತ್ತೆಯಾಗಿದ್ದರು ಎಂದು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೇಂಟ್ ದಾಖಲಾಗಿತ್ತು. ಇಂದು ಶವವಾಗಿ ಪತ್ತೆಯಾಗಿದ್ದಾರೆ. ಭೀಮನ ಮಡುವಿನಲ್ಲಿ ಮಹಿಳೆಯ ಮೃತದೇಹ ತೇಲಿ ಬಂದಿದೆ. ಮೃತರು ಮಾನಸಿಕ ಅಸ್ವಸ್ಥರಾಗಿದ್ದು ನಿನ್ನೆ ಬೆಳಗ್ಗೆಯಿಂದ ಮಹಿಳೆ ಕಾಣೆಯಾಗಿದ್ದರು. ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.