ಟಾಪ್ 5 ನ್ಯೂಸ್ ಮಲ್ನಾಡ್
– ಹೊಳೆಹೊನ್ನೂರು : ವಿದ್ಯುತ್ ಶಾಕ್ ನಿಂದ ವಿದ್ಯಾರ್ಥಿ ಸಾವು
– ಹೊಸನಗರ : ಹುಲಿಕಲ್ನಲ್ಲಿ ಬಸ್ ವೊಂದು ನಿಯಂತ್ರಣ ತಪ್ಪಿ ತಿರುವಿನಲ್ಲಿ ಬ್ರೇಕ್ ಫೇಲ್ ಆಗಿ ಕಂದಕಕ್ಕೆ ಉರುಳಿದೆ.
– ಶಿವಮೊಗ್ಗ : ಬೈಕ್ಗೆ ಡಿಕ್ಕಿಯಾಗುವುದನ್ನು ತಪ್ಪಿಸುವ ವೇಳೆ ಕಂಟ್ರೋಲ್ ತಪ್ಪಿ ಇನ್ನೋವಾ ಕಾರು ಪಲ್ಟಿ
– ಭದ್ರಾವತಿ: ಆಕಸ್ಮಿಕ ಬೆಂಕಿ, ಮನೆಯ ಗೃಹಬಳಕೆ ವಸ್ತು ಬೆಂಕಿಗೆ ಆಹುತಿ
– ಸೊರಬ : ನೇಣು ಬಿಗಿದ ಸ್ಥಿತಿಯಲ್ಲಿ ಗೃಹಣಿ ಪತ್ತೆ ಇದು ಆತ್ಮಹತ್ಯೆಯಲ್ಲ ಕೊಲೆ ಎಂಬ ಶಂಕೆ
NAMMUR EXPRESS NEWS
ಹೊಳೆಹೊನ್ನೂರು: ಅಡಕೆ ತೋಟದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗಮಧ್ಯೆ ಅಸುನೀಗಿದ ಘಟನೆ, ಭದ್ರಾವತಿ ತಾಲೂಕು ಹೊಳೆಹೊನ್ನೂರು ಸಮೀಪದ ಕನಸಿನಕಟ್ಟೆ ಗ್ರಾಮದಲ್ಲಿ ನಡೆದಿದೆ. ದರ್ಶನ್ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಈತ ಹೊಳೆಹೊನ್ನೂರು ಸರ್ಕಾರಿ ಕಾಲೇಜ್ ನಲ್ಲಿ, ಅಂತಿಮ ವರ್ಷದ ಬಿಕಾಂ ಅಭ್ಯಾಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ. ಭಾನುವಾರ ಕಾಲೇಜ್ ಗೆ ರಜೆಯಿದ್ದ ಕಾರಣದಿಂದ, ಸಂಜೆ 4. 30 ರ ಸುಮಾರಿಗೆ ತಮ್ಮ ಅಡಕೆ ತೋಟಕ್ಕೆ ನೀರು ಹಾಯಿಸಲೆಂದು ದರ್ಶನ್ ತೆರಳಿದ್ದು, ನಂತರ ಮನೆಗೆ ಆಗಮಿಸಿರಲಿಲ್ಲ. ಈ ನಡುವೆ ಸಂಜೆ 6. 50 ರ ಸುಮಾರಿಗೆ ತೋಟಕ್ಕೆ ಅವರ ಸಂಬಂಧಿಯೋರ್ವರು ತೆರಳಿದ್ದ ವೇಳೆ, ಪಂಪ್ ಸೆಟ್ ಸ್ವಿಚ್ ಬೋರ್ಡ್ ಬಳಿ ದರ್ಶನ್ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ. ತಕ್ಷಣವೇ ದರ್ಶನ್ ನನ್ನು ವಾಹನವೊಂದರಲ್ಲಿ ಹೊಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರೀಕ್ಷಿಸಿದ ವೈದ್ಯರು ದರ್ಶನ್ ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ತೋಟದಲ್ಲಿ ಪಂಪ್ ಸೆಟ್ ಆನ್ ಮಾಡುವ ವೇಳೆ, ವಿದ್ಯುತ್ ಶಾಕ್ ನಿಂದ ದರ್ಶನ್ ಮೃತಪಟ್ಟಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
– ಹೊಸನಗರ : ಹುಲಿಕಲ್ನಲ್ಲಿ ಬಸ್ ವೊಂದು ನಿಯಂತ್ರಣ ತಪ್ಪಿ ತಿರುವಿನಲ್ಲಿ ಬ್ರೇಕ್ ಫೇಲ್ ಆಗಿ ಕಂದಕಕ್ಕೆ ಉರುಳಿದೆ.
ಹೊಸನಗರ : ತಾಲ್ಲೂಕು ಹುಲಿಕಲ್ನಲ್ಲಿ ಬಸ್ ವೊಂದು ನಿಯಂತ್ರಣ ತಪ್ಪಿ ತಿರುವಿನಲ್ಲಿ ಕಂದಕಕ್ಕೆ ಬಿದ್ದ ಘಟನೆ ಮಾಹಿತಿ ಲಭ್ಯವಾಗಿದೆ. ಇಲ್ಲಿನ ಹುಲಿಕಲ್ ಘಾಟಿ ಟರ್ನಿಂಗ್ನಲ್ಲಿ ಕಳೆದ ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಸುಮಾರು 60 ಅಡಿ ಆಳಕ್ಕೆ ದುರ್ಗಾಂಬಾ ಬಸ್ ಬ್ರೇಕ್ ಫೇಲ್ ಆಗಿ ಕಂದಕಕ್ಕೆ ಉರುಳಿದೆ. ಬಸ್ನಲ್ಲಿ ಈ ವೇಳೆ ಸುಮಾರು 40 ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಅದೃಷ್ಟಕ್ಕೆ ಯಾರಿಗೂ ಈ ಘಟನೆಯಲ್ಲಿ ದೊಡ್ಡ ಪೆಟ್ಟಾಗಿಲ್ಲ. ಸಣ್ಣಪುಟ್ಟ ಗಾಯಗಳಿಂದ ಬಚಾವ್ ಪ್ರಯಾಣಿಕರಿಗೆ ಕುಂದಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಬಸ್ ದಾವಣಗೆರೆಯಿಂದ ಮಂಗಳೂರಿಗೆ ಹೋಗುತ್ತಿತ್ತು.
– ಶಿವಮೊಗ್ಗ : ಬೈಕ್ಗೆ ಡಿಕ್ಕಿಯಾಗುವುದನ್ನು ತಪ್ಪಿಸುವ ವೇಳೆ ಕಂಟ್ರೋಲ್ ತಪ್ಪಿ ಇನ್ನೋವಾ ಕಾರು ಪಲ್ಟಿ
ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರ್ ವೊಂದು ಪಲ್ಟಿಯಾದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಶಿವಮೊಗ್ಗ ನಗರದಿಂದ ತೀರ್ಥಹಳ್ಳಿಗೆ ಹೋಗುವ ರಸ್ತೆಯಲ್ಲಿ ಸಿಗುವ ಅರಕೆರೆ ಬಳಿಯಲ್ಲಿ ಈ ಘಟನೆ ಸಂಭವಿಸಿದೆ. ಎದುರುಗಡೆ ಬಂದ ಬೈಕ್ಗೆ ಡಿಕ್ಕಿಯಾಗುವುದನ್ನು ತಪ್ಪಿಸುವ ವೇಳೆ ಕಂಟ್ರೋಲ್ ತಪ್ಪಿ ಇನ್ನೋವಾ ಕಾರು ಪಲ್ಟಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ಕಾರು ಚಾಲಕನಿಗೆ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ. ಶಿವಮೊಗ್ಗ ನಗರದ ಉಮರ್ ಮತ್ತವರ ಸ್ನೇಹಿತರು ತೀರ್ಥಹಳ್ಳಿಗೆ ಕಡೆಗೆ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಘಟನೆ ಸಂಬಂಧ ಪಶ್ಚಿಮ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
– ಭದ್ರಾವತಿ: ಆಕಸ್ಮಿಕ ಬೆಂಕಿ, ಮನೆಯ ಗೃಹಬಳಕೆ ವಸ್ತು ಬೆಂಕಿಗೆ ಆಹುತಿ
ಭದ್ರಾವತಿ : ಭೋವಿ ಕಾಲೋನಿಯ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಗೃಹ ಬಳಕೆಯ ವಸ್ತುಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಮುಕ್ಕೂರಮ್ಮ ಎಂಬುವರ ಮನೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು ಮನೆಯಲ್ಲಿರುವ ಗೃಹ ಬಳಕೆ ವಸ್ತುಗಳಿಗೆ ಹಾಗೂ ಟಿವಿ ಫ್ರಿಜ್ ಗೃಹ ಬಳಕೆಯ ಪಾತ್ರಗಳು ಹಾಗೂ ದಿನಸಿ ಧಾನ್ಯಗಳು ಬಟ್ಟೆಗಳು ದಿವಾನ್ ಕಟ್ ಹಾಗೂ ಎಲ್ಲಾ ಎಲೆಕ್ಟ್ರಿಕ್ ವೈಯರ್ಗಳು ಸ್ವಲ್ಪ ಆಭರಣ ಹಾಗೂ ನಗದು ಹಾಗೂ ಮನೆ ರೆಕಾರ್ಡ್ಸ್ ಮತ್ತು ಮನೆಯ ಹೆಂಚು ಇತರೆ ವಸ್ತುಗಳಿಗೆ ಬೆಂಕಿಯಿಂದ ಹಾನಿಯಾಗಿದೆ. ಅಪಾರ ನಷ್ಟವಾಗಿರುವ ಮುಕ್ಕೂರಮ್ಮನವರಿಗೆ ಇನ್ನೊಂದು ಮನೆಯಿದ್ದು ಆ ಹೊಸ ಮನೆಗೆ ಇನ್ನೂ ಶಿಫ್ಟ್ ಆಗಿರಲಿಲ್ಲ. ಅಷ್ಟರಲ್ಲೇ ಈ ಬೆಂಕಿ ಅನಾಹುತ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಬಂದು ಅಗ್ನಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶ್ರೀ ವಸಂತಕುಮಾರ್ ಎನ್ ಜಿಲ್ಲಾ ಅಗ್ನಿಶಾಮಕ ಅಧಿಕಾರಿ, ನಾಗೇಂದ್ರ ಜಿ ಜಿ ಸಹಾಯಕ ಅಗ್ನಿಶಾಮಕ ಠಾಣಾ ಅಧಿಕಾರಿ, ಸಿಬ್ಬಂದಿಗಳಾದ ಆನಂದ, ಅರುಣ್ ಕುಮಾರ್, ಸುರೇಶ್, ಮಂಜುನಾಥ, ಸಂತೋಷ್, ಶಬ್ಬೀರ್ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
– ಸೊರಬ : ನೇಣು ಬಿಗಿದ ಸ್ಥಿತಿಯಲ್ಲಿ ಗೃಹಣಿ ಪತ್ತೆ ಇದು ಆತ್ಮಹತ್ಯೆಯಲ್ಲ ಕೊಲೆ ಎಂಬ ಶಂಕೆ
ಸೊರಬ: ಗೃಹಣಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತರ ಕುಟುಂಬ ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಶಂಕೆ ವ್ಯಕ್ತಪಡಿಸಿದೆ. ಘಟನೆ ಸೊರಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಶೈಲಜಾ (28) ಎಂಬ ಮಹಿಳೆ ಮೃತ ದುರ್ದೈವಿಯಾಗಿದ್ದು, ಘಟನೆ ಸೊರಬ ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ. ಆದರೆ ಶೈಲಜಾಳನ್ನು ಪತಿ ಹಾಗು ಅವರ ಅತ್ತೆ ಹೊಡೆದು ನೇಣು ಹಾಕಿದ್ದಾರೆ ಶೈಲಜಾ ಕುಟುಂಬಸ್ಥರು ಆರೋಪಿಸಿದ್ದಾರೆ.
ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಕುಟುಂಬಸ್ಥರ ಆಗ್ರಹಿಸಿದ್ದು, ಘಟನೆ ಕುರಿತು ಸೊರಬ ಪೊಲೀಸರಿಗೆ ದೂರು ಸಲ್ಲಿಸಲಾಗಿದೆ. ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.