ಕಸಾಯಿ ಖಾನೆಗೆ ಸಾಗಿಸುತ್ತಿದ್ದ 19 ಗೋವು ರಕ್ಷಣೆ
– ಶೃಂಗೇರಿ ತಾಲೂಕು ಅಡ್ಡಗದ್ದೆ ಬಳಿ ಘಟನೆ
– ರಂಭಾಪುರಿ ಶ್ರೀಗಳ ಕಾರಿನ ಮೇಲೆ ಕಲ್ಲುತೂರಾಟ!
– ಬಾಗಲಕೋಟೆ ಜಿಲ್ಲೆಯ ರಂಭಾಪುರಿ ಪಂಚಗೃಹ ಗುರುಲಿಂಗೇಶ್ವರ ಮಠದ ವಿವಾದ
NAMMUR EXPRESS NEWS
ಶೃಂಗೇರಿ: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಅಡ್ಡಗದ್ದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ 19 ಗೋವುಗಳನ್ನು ರಕ್ಷಣೆ ಮಾಡಿದ್ದಾರೆ. ಕೆಳಕೊಪ್ಪ ಗ್ರಾಮದ ಗೋಪಾಲ ನಾಯ್ಕ ಎಂಬುವವರು ತರ್ ಪರ್ ಕರ್ ಮಾತೃ ಟ್ರಸ್ಟ್ ಗುರು ಶಾಲಾ ವಂದಿವೆದುಂತಹಗಲ್ ರಸ್ತೆ, ಅನ್ನಮಲಯನಗರ್, ಗುರುವರಾಜಪೇಟೆ, ಅರಕ್ಕನಮ್ ತಾಲ್ಲೂಕು, ವೆಲ್ಲೂರು, ತಮಿಳುನಾಡು ಇವರಿಗೆ 19 ಗೋವುಗಳನ್ನು ಮಾರಾಟ ಮಾಡಿದ್ದು, ಅಕ್ರಮವಾಗಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಕೆ.ಎ 50 ಬಿ 3920 ಲಾರಿಯನ್ನು ತಡೆದು 19 ಗೋವುಗಳನ್ನು ರಕ್ಷಣೆ ಮಾಡಿದ್ದಾರೆ. ಇತ್ತೀಚಿಗೆ ಎನ್.ಆರ್ ಪುರ ತಾಲೂಕಿನ ಮಾಗುಂಡಿ ಗ್ರಾಮದ ಸೇತುವೆ ಕೆಳಭಾಗದಲ್ಲಿ ಗೋವಿನ ಎರಡು ತಲೆ, ಎಂಟು ಕಾಲುಗಳು ಪತ್ತೆ ಆಗಿದ್ದವು. ಚಿಕ್ಕಮಗಳೂರು, ಶೃಂಗೇರಿ, ಮೂಡಿಗೆರೆ, ಎನ್.ಆರ್ ಪುರ ತಾಲೂಕಿನಲ್ಲಿ ನಿರಂತರವಾಗಿ ಗೋಮಾಂಸ ದಂಧೆ ನಡೆಯುತ್ತಿದೆ.
ರಂಭಾಪುರಿ ಶ್ರೀಗಳ ಕಾರಿನ ಮೇಲೆ ಕಲ್ಲುತೂರಾಟ
ಬಾಗಲಕೋಟೆ ಜಿಲ್ಲೆಯ ರಂಭಾಪುರಿ ಪಂಚಗೃಹ ಗುರುಲಿಂಗೇಶ್ವರ ಮಠದ ಪೀಠಾಧಿಪತಿ ಆಯ್ಕೆ ವಿವಾದ ಈಗ ತಾರಕ್ಕೇರಿದೆ.ಮಠದ ವಿವಾದ ಕೋರ್ಟ್ ನಲ್ಲಿ ಇರುವಾಗಲೇ ಕಟ್ಟಡದ ದುರಸ್ತಿ ಹಾಗೂ ಜಮೀನು ಉಳುಮೆ ಮಾಡಿದ್ದಕ್ಕೆ ಭಕ್ತರಿಂದ ತಕರಾರು ವ್ಯಕ್ತವಾಗಿದೆ. ಈ ವೇಳೆ ರಂಭಾಪುರಿ ಶ್ರೀಗಳ ಕಾರಿನ ಮೇಲೆ ಮಹಿಳಾ ಭಕ್ತಿಯೊಬ್ಬರು ಚಪ್ಪಲಿ ತೂರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶ್ರೀಗಳು ತೆರಳುವ ವಾಹನವನ್ನು ಅಡ್ಡಗಟ್ಟಲು ಪ್ರಯತ್ನಿಸಿದ್ದು, ಈ ವೇಳೆ ಸ್ಥಳದಲ್ಲಿ ತಳ್ಳಾಟ, ನೂಕಾಟ ಉಂಟಾಗಿ ಪರಿಸ್ಥಿತಿ ಬಿಗಡಾಯಿಸಿದೆಇನ್ನೂ ಬಾಗಲಕೋಟೆಯಿಂದ ಕಲಾದಗಿ ಮಾರ್ಗವಾಗಿ ಉದಗಟ್ಟಿ ಗ್ರಾಮಕ್ಕೆ ಅಡ್ಡಪಲ್ಲಕ್ಕಿ ಕಾರ್ಯಕ್ರಮಕ್ಕೆ ಹೋಗುತ್ತಿದ್ದ ರಂಭಾಪುರಿ ಶ್ರೀ ವಿರುದ್ಧ ಧಿಕ್ಕಾರ ಕೂಗಿ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
