Categories
ಮಲ್ನಾಡ್

ಟಾಪ್ ನ್ಯೂಸ್ ಮಲ್ನಾಡ್

ಗಾಂಧಿ ಪ್ರತಿಮೆ ಒಡೆದ ಇಬ್ಬರು ಅರೆಸ್ಟ್!
– ಹೊಳೆಹೊನ್ನೂರು ಘಟನೆ: ಪ್ರವಾಸ ಹೋದವರಿಂದ ಕೃತ್ಯ
– ಶಿಕಾರಿಪುರ: ಯುವಕ ಅಪಘಾತಕ್ಕೆ ಬಲಿ
– ಚಿಕ್ಕಮಗಳೂರು: ಸ್ಕೂಟಿಯಲ್ಲೇ ಗಾಂಜಾ ಸಾಗಣೆ

NAMMUR EXPRESS NEWS
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ, ಮಹಾತ್ಮಗಾಂಧೀಜಿ ಸರ್ಕಲ್‌ನಲ್ಲಿದ್ದ ಗಾಂಧೀಜಿ ಪ್ರತಿಮೆಯನ್ನು ಧ್ವಂಸಗೊಳಿಸಿದ ಪ್ರಕರಣವನ್ನು ಪೊಲೀಸರು ಭೇಧಿಸಿದ್ದಾರೆ. ಇಬ್ಬರನ್ನು ವಶಕ್ಕೆ ಪಡೆದಿದ್ದು ಇನ್ನು ಅನೇಕರು ಘಟನೆಯಲ್ಲಿ ಭಾಗಿಯಾಗಿದ್ದಾರಾ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಶಿವಮೊಗ್ಗ ಎಸ್ ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದು,ಆರೋಪಿಗಳ ಪತ್ತೆಗೆ ಮೂರು ತಂಡ ರಚಿಸಲಾಗಿತ್ತು. ಸುಮಾರು 50 ಜನ ಪೊಲೀಸ್ ಸಿಬ್ಬಂದಿ ತಂಡದಲ್ಲಿದ್ದರು. ಇದೀಗ ತನಿಖೆಯ ಫಲವಾಗಿ ಇದೀಗ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಚಿತ್ರದುರ್ಗದ ಗಣೇಶ್ ಮತ್ತು ವಿನಯ್ ಬಂಧಿತ ಆರೋಪಿಗಳು ಎಂದು ತಿಳಿಸಿದ್ದಾರೆ.ಆರೋಪಿಗಳು ಚಿತ್ರದುರ್ಗ ಸಮೀಪ ಪಂಡ್ರಹಳ್ಳಿಯವರಾಗಿದ್ದು, ಕೃಷಿ ಕೆಲಸ ಮಾಡಿಕೊಂಡಿದ್ದವರು. ಚಿತ್ರದುರ್ಗದಿಂದ ಜೋಗಕ್ಕೆ ಹೋಗುವ ಮಾರ್ಗದಲ್ಲಿ ಈ ಆರೋಪಿಗಳು ಈ ದುಷ್ಕೃತ್ಯವನ್ನು ಎಸಗಿದ್ದಾರೆ, ಪ್ರತಿಮೆ ಧ್ವಂಸ ಮಾಡಿದ ಇಬ್ಬರು ನಂತರ ಶಿವಮೊಗ್ಗಕ್ಕೆ ಹೋಗಿ ವಾಪಸ್ ಹಳ್ಳಿಗೆ ಹೋಗಿದ್ದರು. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ವಿಚಾರಣೆ ವೇಳೆ ಇನ್ನಷ್ಟು ವಿಷಯ ತಿಳಿದು ಬರಲಿದೆ ಎಂದು ತಿಳಿಸಿದ್ದಾರೆ.

ಸ್ಕೂಟಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿ ಬಂಧನ

ಸ್ಕೂಟಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಾಳೆಹಳ್ಳಿಯಲ್ಲಿ ನಡೆದಿದೆ. ಮನೋಜ್‌ ಎಂಬಾತ ಚಿಕ್ಕಮಗಳೂರಿಗೆ ಸ್ಕೂಟಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ವೇಳೆ ಪೊಲೀಸರು ಬಂಧಿಸಿದ್ದು, ಆರೋಪಿಯಿಂದ 1 ಕೆಜಿ 175 ಗ್ರಾಂ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ್ದ ಸ್ಕೂಟಿಯನ್ನು ಜಪ್ತಿ ಮಾಡಲಾಗಿದೆ. ಬಸವನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಶಿಕಾರಿಪುರದಲ್ಲಿ ಯುವಕ ಅಪಘಾತಕ್ಕೆ ಬಲಿ

ಶಿಕಾರಿಪುರ ಪಟ್ಟಣದ ಹೊರವಲಯದ ಕೆಎಸ್ ಆರ್ ಟಿಸಿ ಡಿಪೋ ಎದುರು ಒಂದೇ ವಾರದಲ್ಲಿ ಎರಡನೇ ಅಪಘಾತವಾಗಿದ್ದು 2ನೇ ಬಲಿಯಾಗಿದೆ. ಶಿಕಾರಿಪುರ ಪಟ್ಟಣ ಹೊರವಲಯದಲ್ಲಿ ನಿರ್ಮಾಣವಾಗಿರುವ ಕೆಎಸ್ ಆರ್ ಟಿಸಿ ಡಿಪೋ ಎದುರು ಕಳೆದ ಎರಡು ದಿನಗಳ ಹಿಂದೆ ಎರಡು ಬೈಕ್ ಗಳ ನಡುವೆ ಮುಖಮುಖಿ ಡಿಕ್ಕಿಯಾಗಿ ಒರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದರು. ಮೂರು ಜನ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಮತ್ತೆ ಬೈಕ್, ಬಸ್ ನಡುವೆ ಅಪಘಾತ ಸಂಭವಿಸಿ ಅಪಘಾತದಲ್ಲಿ ಗಜೇಂದ್ರ ಆಚಾರ್ ಬಿನ್ ಶಂಕರ್ ಆಚಾರ್ (21) ವರ್ಷ ಸ್ಥಳದಲ್ಲಿಯೇ ಸಾವನ್ನಪ್ಪಿದಾನೆ. ಹಿಂಬದಿಯ ಕೂತಿದ ಯುವಕನಿಗೆ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ : ಚಂದ್ರನಂಗಳದಲ್ಲಿ ಭಾರತದ ಮುದ್ರೆ!

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.