- ಮೂವರು ಅರೆಸ್ಟ್: ಗಾಂಜಾ ನಶೆಯಲ್ಲಿ ಕೊಲೆ
- ಪೊಲೀಸರ ಪರಿಶೀಲನೆ: ತೀರ್ಥಹಳ್ಳಿಗೆ ಹೊರಗಿನವರ ಕಳಂಕ!
NAMMUR EXPRESS NEWS
ಶಿವಮೊಗ್ಗ: ತೀರ್ಥಹಳ್ಳಿ ಪಟ್ಟಣ ಸಮೀಪ ಕುರುವಳ್ಳಿ ಪುತ್ತಿಗೆ ಮಠದ ಬಳಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಶ್ವಕರ್ಮ ಸಮುದಾಯ ಭವನದಲ್ಲಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸ್ ಸ್ಟೇಷನ್ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸ್ತಿದ್ದಾರೆ. ಮೂಲಗಳ ಪ್ರಕಾರ, ಕೊಲೆಯಾದವರು ದಾವಣಗೆರೆ ಜಿಲ್ಲೆ ಕಾರ್ಮಿಕರಾದ ಮಂಜಪ್ಪ (45) ಬೀರಪ್ಪ (46) ಎಂದು ಹೇಳಲಾಗಿದೆ. ದಾವಣಗೆರೆ ಮೂಲದ ಈ ಕೂಲಿ ಕಾರ್ಮಿಕರು ಕೆಲಸಕ್ಕೆ ಬಂದಿದ್ದು ಅವರು ಮದ್ಯ ಮತ್ತು ಗಾಂಜಾ ನಶೆಯಲ್ಲಿ ಗುರುವಾರ ನಡೆದ ಗಲಾಟೆ, ಕೊಲೆಯಲ್ಲಿ ಅಂತ್ಯವಾಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ರಾಜಪ್ಪ ಮತ್ತು ಇಬ್ಬರ ಎಂಬುವರ ಮೇಲೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಸಾಧ್ಯತೆ ಇದ್ದು ಸ್ಥಳದಲ್ಲಿ ಪೊಲೀಸರು ಮಹಜರ್ ನಡೆಸ್ತಿದ್ದಾರೆ.
ತೀರ್ಥಹಳ್ಳಿಯಲ್ಲಿ ಅಕ್ರಮ ಮದ್ಯ, ಗಾಂಜಾ ಹಾವಳಿ!
ತೀರ್ಥಹಳ್ಳಿ ತಾಲೂಕಿನಲ್ಲಿ ಅಕ್ರಮ ಮದ್ಯ, ಗಾಂಜಾ ಹಾವಳಿ ಹಳ್ಳಿ ಹಳ್ಳಿಗೂ ವಿಸ್ತರಣೆ ಆಗುತ್ತಿದೆ. ಆದರೂ ಪೊಲೀಸ್ ಮತ್ತು ಅಬಕಾರಿ ಇಲಾಖೆ ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕಿದೆ.