ಸಿದ್ದರಾಮಯ್ಯ ಬಜೆಟ್ನಲ್ಲಿ ಮಲೆನಾಡಿಗೆ ಏನೇನು?
– ಆಹಾರ ಪಾರ್ಕ್, ರಸ್ತೆ, ತಾರಾಲಯ, ರೈಲ್ವೆ ಮೇಲಸೇತುವೆ
– ಶೃಂಗೇರಿಗೆ 100 ಬೆಡ್ ಆಸ್ಪತ್ರೆ, ಕಾಫಿ ಪಾರ್ಕ್, ಚಿಕ್ಕಮಗಳೂರಿಗೆ ತಾರಾಲಯ
NAMMUR EXPRESS NEWS
ಶಿವಮೊಗ್ಗ: ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯ ಕಾಂಗ್ರೆಸ್ ಸರ್ಕಾರದ ಆಯ- ವ್ಯಯ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಲೆನಾಡಿಗೆ ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಕೆಲವೊಂದು ಘೋಷಣೆ ಮಾಡಿರುವ ಸಿದ್ದರಾಮಯ್ಯ ಅನುದಾನವನ್ನೂ ಸಹ ಮೀಸಲಿಡುವುದಾಗಿ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಫುಡ್ ಪಾರ್ಕ್ :
ಶಿವಮೊಗ್ಗದ ಸೋಗಾನ ವಿಮಾನ ನಿಲ್ದಾಣದ ಬಳಿಯಲ್ಲಿ ಆಹಾರ ಪಾರ್ಕ್ ನಿರ್ಮಾಣ.
ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ :
ಮುಂದಿನ 4 ವರ್ಷಗಳಲ್ಲಿ ಪ್ರತಿ ಜಿಲ್ಲಾ ಆಸ್ಪತ್ರೆಯಲ್ಲಿ ಸಂಯೋಜಿತ ಮತ್ತು ಸಾರ್ವಜನಿಕ ಆರೋಗ್ಯ ಪ್ರಯೋಗಾಲಯವನ್ನು ಸ್ಥಾಪಿಸುವ ಮೂಲಕ ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಉತ್ತಮ ಪ್ರಯೋಗಾಲಯ ಸೇವೆಗಳನ್ನು ಒದಗಿಸಲು ಕ್ರಮ.
ರೈಲ್ವೆ ಮೇಲ್ಸೇತುವೆ :
ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿರುವ ಬೊಮ್ಮನಕಟ್ಟೆ ರೈಲ್ವೆ ಲೆವೆಲ್ ಕ್ರಾಸಿಂಗ್’ನಲ್ಲಿ ಮೇಲ್ಸೇತುವೆ ನಿರ್ಮಾಣ.
ತಾರಾಲಯ :
ಶಿವಮೊಗ್ಗದಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ವಿಜ್ಞಾನ ಕೇಂದ್ರ/ ತಾರಾಲಯಗಳನ್ನು ಹೊಸದಾಗಿ ಸ್ಥಾಪಿಸಲಾಗುವುದು. ಶಿವಮೊಗ್ಗ, ರಾಯಚೂರು, ಚಿಕ್ಕಮಗಳೂರು, ಯಾದಗಿರಿ ಮತ್ತು ಮೈಸೂರಿನಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ವಿಜ್ಞಾನ ಕೇಂದ್ರ/ ತಾರಾಲಯಗಳನ್ನು ಹೊಸದಾಗಿ ಸ್ಥಾಪನೆ.
ಹೈ-ಸೆಕ್ಯೂರಿಟಿ ಕಾರಾಗೃಹ :
ಜಿಲ್ಲೆಯಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ಹೊಸ ಹೈ-ಸೆಕ್ಯೂರಿಟಿ ಕಾರಾಗೃಹವನ್ನು ನಿರ್ಮಾಣ.
ಹೈಟೆಕ್ ಮೀನು ಮಾರುಕಟ್ಟೆ :
ಭದ್ರಾವತಿಯಲ್ಲಿ ಅತ್ಯಾಧುನಿಕ ಹೈಟೆಕ್ ಮೀನು ಮಾರುಕಟ್ಟೆ ನಿರ್ಮಾಣ ಶಿವಮೊಗ್ಗ ಜಿಲ್ಲೆಯಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ಹೊಸ ಹೈ-ಸೆಕ್ಯೂರಿಟಿ ಕಾರಾಗೃಹ ನಿರ್ಮಾ. ಶಿವಮೊಗ್ಗ, ರಾಯಚೂರು, ಚಿಕ್ಕಮಗಳೂರು, ಯಾದಗಿರಿ ಮತ್ತು ಮೈಸೂರಿನಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ವಿಜ್ಞಾನ ಕೇಂದ್ರ/ತಾರಾಲಯಗಳನ್ನು ಹೊಸದಾಗಿ ಸ್ಥಾಪನೆ. ಮೈಸೂರಿನ ಕುಕ್ಕರಹಳ್ಳಿ ಬಳಿ ಹಾಗೂ ಕೆ.ಆರ್.ಎಸ್. ರಸ್ತೆ, ಶಿವಮೊಗ್ಗ-ಬೊಮ್ಮನಕಟ್ಟೆ ರಸ್ತೆ, ಗದಗ ಜಿಲ್ಲೆಯ ರೋಣದ ಮಲ್ಲಾಪುರ, ಚನ್ನಪಟ್ಟಣ-ಬೈರಾಪಟ್ಟಣ ಮಾರ್ಗ ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ ಒಟ್ಟು 6 ರೈಲ್ವೆ ಮೇಲು ಹಾಗೂ ಕೆಳಸೇತುವೆಗಳ ನಿರ್ಮಾಣವನ್ನು 350 ಕೋಟಿ ರೂ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಗೆ 100 ಬೆಡ್ ಆಸ್ಪತ್ರೆ, ಚಿಕ್ಕಮಗಳೂರಿಗೆ ಕಾಫಿ ಪಾರ್ಕ್, ಚಿಕ್ಕಮಗಳೂರಿಗೆ ತಾರಾಲಯ ಘೋಷಣೆ ಮಾಡಲಾಗಿದೆ.