Categories
ಕೊಪ್ಪ ಚಿಕ್ಕಮಗಳೂರು ಮಲ್ನಾಡ್

ಕೂಲಿ ಕಾರ್ಮಿಕ ಮಹಿಳೆ ಮೇಲೆ ಕಾಡುಕೋಣ ದಾಳಿ

ಕೂಲಿ ಕಾರ್ಮಿಕ ಮಹಿಳೆ ಮೇಲೆ ಕಾಡುಕೋಣ ದಾಳಿ

* ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಗುದ್ದಿದ ಕಾಡುಕೋಣ
* ಆನೆ ಹಾವಳಿ ಕಡಿಮೆಯಾಯ್ತು ಎನ್ನುವಷ್ಟರಲ್ಲಿ ಕಾಡುಕೋಣದ ಸರದಿ

NAMMMUR EXPRESS NEWS
ಕೊಪ್ಪ/ಜಯಪುರ: ಮಲೆನಾಡಿನಲ್ಲಿ ಮಾನವ ಹಾಗೂ ಕಾಡು ಪ್ರಾಣಿಗಳ ಸಂಘರ್ಷಕ್ಕೆ ತೆರೆ ಬೀಳುವಂತೆ ಕಾಣುತ್ತಿಲ್ಲ,ಕೊಪ್ಪ ತಾಲೂಕಿನ ಜಯಪುರ ಸಮೀಪದ ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಮಹಿಳೆ ಮೇಲೆ ಕಾಡುಕೋಣ ದಾಳಿ ಮಾಡಿದ ಘಟನೆ ನಡೆದಿದೆ.
ಜಯಪುರ ಸಮೀಪದ ಗುತ್ತಿಖಾನ್ ಎಸ್ಟೇಟ್‌ನಲ್ಲಿ ಈ ಅವಘಡ ಸಂಭವಿಸಿದ್ದು, ಮಹಿಳೆಗೆ ಗಂಭೀರ ಗಾಯವಾಗಿದೆ. ಕಾಡುಕೋಣ ದಾಳಿಗೊಳಗಾದ ಮಹಿಳೆಯನ್ನು ಗಾಳಿಗಂಡಿ ಮೂಲದ 60 ವರ್ಷದ ಬೇಬಿ ಎಂದು ಗುರುತಿಸಲಾಗಿದ್ದು,ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಗ್ರಾ ಪಂ ಅಧ್ಯಕ್ಷ ಕರುಣಾಕರ್ ಹಾಗೂ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಲವು ತಿಂಗಳುಗಳಿಂದ ಕಾಡಾನೆ ಹಾವಳಿಗೆ ತತ್ತರಿಸಿದ್ದ ಶೃಂಗೇರಿ ಕ್ಷೇತ್ರದ ಜನತೆ ಆನೆ ಕಾಟ ಸ್ವಲ್ಪ ಕಡಿಮೆಯಾಯ್ತು ಎನ್ನುವಷ್ಟರಲ್ಲೇ ಕಾಡುಕೋಣ ದಾಳಿಯನ್ನು ಎದುರಿಸುವಂತಾಗಿದೆ. ಇದರಿಂದ ಆಕ್ರೋಶಗೊಂಡ ಜನರು ಕಾಡುಪ್ರಾಣಿಗಳ ಹಾವಳಿಗೆ ಶಾಶ್ವತ ಪರಿಹಾರ ನೀಡುವಂತೆ ಹಾಗೂ ಕ್ರಮಕೈಗೊಳ್ಳದ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.