ನೀವೂ ಒದಲೇಬೇಕು.. ಈ ಟಾಪ್ 4 ನ್ಯೂಸ್
– ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಗೂ ಸೈಬರ್ ವಂಚನೆಗೆ ಯತ್ನ!
– ಸುಧಾಕರ್ ಪತ್ನಿಗೆ ಡಿಜಿಟಲ್ ಅರೆಸ್ಟ್ ಮಾಡಿ 14 ಲಕ್ಷ ಕಿತ್ತ ವಂಚಕರು!
– ಚಿತ್ರದುರ್ಗ: ಚಲಿಸುತ್ತಿದ್ದ ಕಾರಿಗೆ ಬೆಂಕಿ: ಕಾರು ಚಾಲಕ ಸಜೀವ ದಹನ
– ಮೊಟ್ಟೆ ಗಂಟಲಲ್ಲಿ ಸಿಲುಕಿ ವ್ಯಕ್ತಿ ದುರ್ಮರಣ!
NAMMUR EXPRESS NEWS
ಬೆಂಗಳೂರು: ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಗೂ ಸೈಬರ್ ವಂಚಕರು ಕಾಟಕೊಟ್ಟಿದ್ದಾರೆ. ದೂರ ಸಂಪರ್ಕ ಸಚಿವಾಲಯದ ಉದ್ಯೋಗಿ ಎಂದು ವಂಚನೆಗೆ ಯತ್ನಿಸಿರುವಂತ ಘಟನೆ ನಡೆದಿದೆ. ಈ ಮೂಲಕ ಇದೀಗ ಸೈಬರ್ ವಂಚನೆ ಎಲ್ಲರಿಗೂ ಆಗುತ್ತೆ ಎಂಬ ಆತಂಕ ಎದುರಾಗಿದೆ. ಇನ್ನೂ ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಯವರ ವೈಯಕ್ತಿಕ ಮಾಹಿತಿ ಪಡೆಯಲು ಸೈಬರ್ ವಂಚಕ ಯತ್ನಿಸಿದ್ದಾನೆ. ಅಲ್ಲದೇ ನಿಮ್ಮ ನಂಬರ್ ಗೆ ಅಶ್ಲೀಲ ವೀಡಿಯೋ ಕಳಿಸಲಾಗ್ತಿದೆ. ಅದನ್ನು ನಿಲ್ಲಿಸಲಾಗಿದೆ ಎಂದು ಬೆದರಿಕೆ ಹಾಕಿದ್ದಾನೆ. ಹೀಗಾಗಿ ಸೈಬರ್ ವಂಚಕನ ವಿರುದ್ಧ ದೂರು ನೀಡಲಾಗಿದೆ.
ಸುಧಾಕರ್ ಪತ್ನಿಗೆ ಡಿಜಿಟಲ್ ಅರೆಸ್ಟ್ ಮಾಡಿ 14 ಲಕ್ಷ ಕಿತ್ತ ವಂಚಕರು!
ಸೈಬರ್ ಕಳ್ಳರು ಮಾಜಿ ಸಚಿವ ಹಾಲಿ ಸಂಸದ ಸುಧಾಕರ್ ಅವರ ಪತ್ನಿಗೆ ಮೋಸ ಮಾಡಿದ್ದಾರೆ. ಆಗಸ್ಟ್ 26ರಂದು ಡಾ. ಪ್ರೀತಿ ಸುಧಾಕರ್ ಬೆಳಿಗ್ಗೆ 9:30ಕ್ಕೆ ಕರೆ ಬಂದಿತ್ತು. ನಾವು ಮುಂಬೈ ಸೈಬರ್ ಡಿಪಾರ್ಟ್ಮೆಂಟ್ ನಿಂದ ಮಾತನಾಡ್ತಿರೋದು. ನಿಮ್ಮ ದಾಖಲೆಗಳನ್ನ ಸದ್ಭತ್ ಖಾನ್ ಎಂಬ ಅಪರಿಚಿತ ಬಳಸಿಕೊಂಡಿದ್ದಾನೆ. ನಿಮ್ಮ ಹೆಸ್ರಲ್ಲಿ ಕ್ರೆಡಿಡ್ ಕಾರ್ಡ್ ಮಾಡಿಸಿ ಇಲ್ಲಿಗಲ್ ಟ್ರಾನ್ಸಾಕ್ಷನ್ ನಡೆಸಿದ್ದಾನೆ ವಿದೇಶಕ್ಕೆ ಕಾನೂಬಾಗಿರ ಚಟುವಟಿಕೆ ನಡೆಸಲು ಜನರನ್ನ ಕಳುಹಿಸಿದ್ದಾನೆ. ಸದ್ಬತ್ ಖಾನ್ ನ ಅರೆಸ್ಟ್ ಮಾಡಲಾಗಿದ್ದು, ಆತನ ಹೇಳಿಕೆಯಲ್ಲಿ ನಿಮ್ಮ ಹೆಸರಿನ ದಾಖಲೆಯಿದೆ. ವಿಚಾರಣೆ ನಡೆಸೋದಕ್ಕೆ ವಿಡಿಯೋ ಕಾಲ್ ಮಾಡಿದ್ದೀವಿ. ನಿಮ್ಮ ದಾಖಲೆ ಹಾಗೂ ವೈಯಕ್ತಿಕ ದಾಖಲೆಗಳನ್ನು ರದ್ದು ಮಾಡೋದಾಗಿ ಬೆದರಿಕೆ ಹಾಕಿದ್ದಾರೆ. ನಿಮ್ಮ ಅಕೌಂಟ್ ಇಲ್ಲಿಗಲ್ ಆಗಿದ್ದು ಹಣ ಹಾಕಿ ಎಂದು ಬೆದರಿಕೆ. ಪ್ರೀತಿ ಅವರಿಂದ 14 ಲಕ್ಷ ಹಣ ಹಾಕಿಸಿಕೊಂಡ ವಂಚಕರು RBI ರೂಲ್ಸ್ ಪರಿಶೀಲನೆ ಮಾಡಿ 45 ನಿಮಿಷದಲ್ಲಿ ವಾಪಸ್ ಹಾಕೋದಾಗಿ ಹೇಳಿಕೆ ನೀಡಿದ್ದಾರೆ. ಪ್ರೀತಿ ಸುಧಾಕರ್ರಿಂದ 14 ಲಕ್ಷ ಹಣವನ್ನ ಆರ್ ಟಿಜಿಎಸ್ ಮಾಡಿಸಿಕೊಂಡ ವಂಚಕರು. ಹಣ ಹಾಕಿದ ನಂತರ ವಂಚನೆಯಾರೋದು ಪತ್ತೆಯಾಗಿದೆ
ಪ್ರೀತಿ ಸುಧಾಕರ್ ನೀಡಿದ ದೂರಿನ ಮೇರೆಗೆ ಸೈಬರ್ ಠಾಣೆಯಲ್ಲಿ ದಾಖಲಾಗಿದೆ.
ಚಲಿಸುತ್ತಿದ್ದ ಕಾರಿಗೆ ಬೆಂಕಿ: ಕಾರು ಚಾಲಕ ಸಜೀವ ದಹನ!
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಅರಳಿಕಟ್ಟೆ ಬಳಿ ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಚಾಲನೆ ಮಾಡುತ್ತಿದ್ದ ಚಾಲಕ ಸಜೀವ ದಹನವಾಗಿರುವ ಘಟನೆ ನಡೆದಿದೆ.
ಕಾರು ಚಾಲನೆ ಮಾಡುತ್ತಿದ್ದ ಸಿದ್ದೇಶ್ವರ್ ಮೃತಪಟ್ಟಿದ್ದಾನೆ. ಕಾರಿನಲ್ಲಿ ಊರಿಗೆ ವಾಪಾಸ್ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ.
ಬೆಂಕಿಯಿಂದ ತಪ್ಪಿಸಿಕೊಳ್ಳಲಾಗದೆ ಸಿದ್ದೇಶ್ವರ್ ಸಜೀವ ದಹನವಾಗಿದ್ದು, ಧಗ ಧಗ ಒತ್ತಿ ಉರಿಯುತ್ತಿದ್ದ ಬೆಂಕಿ ನಂದಿಸಲು ಸ್ಥಳಿಯರ ಹರಸಾಹಸ ಪಟ್ಟಿದ್ದಾರೆ. ಬೆಂಕಿ ನಂದಿಸುವಷ್ಟರಲ್ಲಿ ಅರಳಿಕಟ್ಟೆ ಗ್ರಾಮದ ಸಿದ್ದೇಶ್ವರ್ ಸುಟ್ಟು ಕರಕಲುವಾಗಿದ್ದಾನೆ. ಸ್ಥಳಕ್ಕೆ ಐಮಂಗಲ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಮಕ್ಕಳ ಬಗ್ಗೆ ಹುಷಾರು.. ಸಮುದ್ರದ ಅಲೆಗೆ ಬಾಲಕ ಬಲಿ!
ಭಟ್ಕಳ: ಸಮುದ್ರದ ಭಾರೀ ಅಲೆಗಳ ಅಬ್ಬರಕ್ಕೆ ಎಂಟು ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಭಟ್ಕಳ ತಾಲೂಕಿನ ಮುರುಡೇಶ್ವರ ಬೀಚ್‌ನಲ್ಲಿ ಸೋಮವಾರ ನಡೆದಿದೆ.
ಬೆಂಗಳೂರಿನ ಬಿದರಹಳ್ಳಿಯ ನಿವಾಸಿ ಕೆ. ರವಿ ರೆಡ್ಡಿ ಅವರ ಕಿರಿಯ ಮಗ ಕೃತಿಕ್ (8) ಮೃತಪಟ್ಟ ಬಾಲಕ. ರವಿ ರೆಡ್ಡಿ ಅವರು ತಮ್ಮ ಕುಟುಂಬ ಸಮೇತ ರವಿವಾರ ರಾತ್ರಿ ಮುರುಡೇಶ್ವರಕ್ಕೆ ಆಗಮಿಸಿ ತಂಗಿದ್ದರು. ಸೋಮವಾರ ಬೆಳಿಗ್ಗೆ ದೇವಸ್ಥಾನದ ಎಡಬದಿಯ ಕಡಲ ತೀರದಲ್ಲಿ ಮಕ್ಕಳು ಆಟವಾಡುತ್ತಿದ್ದಾಗ ಅನಿರೀಕ್ಷಿತವಾಗಿ ದೊಡ್ಡ ಅಲೆಯೊಂದು ಅಪ್ಪಳಿಸಿದೆ ಎಂದು ತಿಳಿದು ಬಂದಿದೆ.
ಅಲೆಯ ಸೆಳೆತಕ್ಕೆ ಇಬ್ಬರು ಸಮುದ್ರಕ್ಕೆ ಕೊಚ್ಚಿಹೋಗಿದ್ದರು. ಅಲೆಯಲ್ಲಿ ಸಿಲುಕಿ ಅಸ್ವಸ್ಥಗೊಂಡ ವಸಂತಾ ಕೆ. (27) ಅವರು ಆರ್.ಎನ್.ಎಸ್. ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ, ಕೃತಿಕ್ ಅವರು ಮುಳುಗಿ ಸಾವನ್ನಪ್ಪಿದ್ದಾರೆ.
ಮೊಟ್ಟೆ ಗಂಟಲಲ್ಲಿ ಸಿಲುಕಿ ವ್ಯಕ್ತಿ ದುರ್ಮರಣ!
ಕಾಸರಗೋಡು: ಮೊಟ್ಟೆ ಆಮಲೆಟ್ ತಿನ್ನುತ್ತಿದ್ದ ವೇಳೆ ಗಂಟಲಲ್ಲಿ ಸಿಲುಕಿ ವ್ಯಕ್ತಿಯೋರ್ವ ಮೃತಪಟ್ಟ ದಾರುಣ ಘಟನೆ ಬದಿಯಡ್ಕದಲ್ಲಿ ನಡೆದಿದೆ.
ಬದಿಯಡ್ಕ ಚುಳ್ಳಿಕ್ಕಾನ ನಿವಾಸಿ, ಪ್ರಸಕ್ತ ಬಾರಡ್ಕದಲ್ಲಿ ವಾಸವಿದ್ದ ವಿನ್ಸೆಂಟ್ ಕ್ರಾಸ್ತಾ(52) ಮೃತಪಟ್ಟವರು. ಸಂಜೆ ಮನೆ ಸಮೀಪದ ಗೂಡಂಗಡಿಯಿಂದ ಆಮ್ಮೆಟ್ ಸೇವಿಸುತ್ತಿದ್ದಾಗ ಘಟನೆ ನಡೆದಿದೆ.
ಆಮೈಟ್ ಗಂಟಲಲ್ಲಿ ಸಿಲುಕಿ ಒದ್ದಾಡುತ್ತಿದ್ದ ವಿನ್ಸೆಂಟ್ ರನ್ನು ತಕ್ಷಣ ಕುಂಬಳೆಯ ಆಸ್ಪತ್ರೆಗೆ ಕರೆದೊಯ್ಯಲಾಗಿತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿರುವುದಾಗಿ ವೈದ್ಯರು ತಿಳಿಸಿದ್ದಾರೆ.