ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮಗು ಬಲಿ..!!
– ಮಿಮ್ಸ್ ಆಸ್ಪತ್ರೆ ಎದುರು ರಸ್ತೆಯಲ್ಲೇ ಮಗು ಶವವಿಟ್ಟು ಗೋಳಾಟ
NAMMUR EXPRESS NEWS
ಮಂಡ್ಯ: ಟ್ರಾಫಿಕ್ ಪೊಲೀಸರ ಯಡವಟ್ಟಿಗೆ ಮಗು ಬಲಿಯಾಗಿರೋ ಮನಕಲಕುವ ಘಟನೆ ಸ್ವರ್ಣಸಂದ್ರ ಬಳಿಯ ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬಳಿ ನಡೆದಿದೆ. ಮೂರೂವರೆ ವರ್ಷದ ಹೃತೀಕ್ಷ ಮೃತ ಮಗು. ವಾಣಿ-ಅಶೋಕ್ ಎಂಬುವವರ ಮಗು ಮೃತಪಟ್ಟಿದೆ. ಮಗಳನ್ನು ಕಳೆದುಕೊಂಡ ದಂಪತಿ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೊರವನಹಳ್ಳಿಯ ನಿವಾಸಿ. ಹೃತೀಕ್ಷಾಗೆ ನಾಯಿ ಕಚ್ಚಿದ್ದ ಹಿನ್ನೆಲೆಯಲ್ಲಿ ಮಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಆದ್ರೆ ಇದೇ ವೇಳೆ ಹೆಲ್ಮೆಟ್ ತಪಾಸಣೆಗೆಂದು ಪೊಲೀಸರು ಬೈಕ್ ಅಡ್ಡಗಟ್ಟಿದ್ದಾರೆ. ಇದೇ ವೇಳೆ ಬೈಕ್ನಲ್ಲಿದ್ದ ತಂದೆ, ತಾಯಿ ಹಾಗೂ ಮಗು ಆಯಾ ಕೆಳಗೆ ಬಿದ್ದಿದ್ದಾರೆ. ಕೆಳಗೆ ಬಿದ್ದ ಪರಿಣಾಮ ಮಗಳ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಪರಿಣಾಮ ತೀವ್ರ ರಕ್ತಸ್ರವಾದಿಂದ ಮಗು ಸ್ಥಳದಲ್ಲೇ ಜೀವಬಿಟ್ಟಿದೆ. ಇನ್ನೂ, ಮುದ್ದಾದ ಮಗುವನ್ನು ಕಳೆದುಕೊಂಡು ಪೋಷಕರು ಮಿಮ್ಸ್ ಆಸ್ಪತ್ರೆ ಎದುರು ರಸ್ತೆಯಲ್ಲೇ ಶವವಿಟ್ಟು ಅಳುತ್ತಿದ್ದಾರೆ. ಪೊಲೀಸರ ನಡೆಗೆ ಸಾರ್ವಜನಿಕರ ಆಕ್ರೋಶ ಹೊರ ಹಾಕುತ್ತಿದ್ದಾರೆ.