ಮಕ್ಕಳ ಲವ್ ಕೇಸ್: ಬಾಲಕಿ ಆತ್ಮಹತ್ಯೆ!
– ಲವ್ ಮಾಡುವಂತೆ ಅಪ್ರಾಪ್ತ ಬಾಲಕರಿಂದ ಕಿರುಕುಳ
– ಮನನೊಂದ ಬಾಲಕಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು
NAMMUR EXPRESS NEWS
ಮಂಡ್ಯ: ಕಾಲ ಕೆಟ್ಟು ಹೋಗಿದೆ. ಮೊಬೈಲ್, ಸಾಮಾಜಿಕ ಜಾಲ ತಾಣಗಳ ಅತೀ ಬಳಕೆ ಇಂದಿನ ವಿದ್ಯಾರ್ಥಿಗಳು, ಯುವ ಸಮುದಾಯವನ್ನು ಹಾಳು ಮಾಡುತ್ತಿದೆ ಎಂಬ ಆತಂಕದ ನಡುವೆ ಮಂಡ್ಯದಲ್ಲಿ ನಡೆದ ಈ ಘಟನೆ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.
ಹೌದು. ಅಪ್ರಾಪ್ತ ಬಾಲಕರಿಂದ ಕಿರುಕುಳ ಹಿನ್ನಲೆ 15 ವರ್ಷದ ಬಾಲಕಿ ನೇಣಿಗೆ ಶರಣಾಗಿರುವ ಘಟನೆ ಮಂಡ್ಯ ತಾಲೂಕಿನ ಹನಕೆರೆ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಬಾಲಕಿ ಗುರುತಿಸಲಾಗಿದೆ. (15) ಎಂದು ಬಾಲಕಿಯನ್ನು ಪ್ರೀತಿಸುವ ವಿಚಾರವಾಗಿ ಯುವಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಬಾಲಕಿಗೆ ಪ್ರೀತಿಸುವಂತೆ ಕೂಡ ಬಾಲಕರು ಒತ್ತಾಯ ಮಾಡಿದ್ದಾರೆ. ಇವರ ಮಾತಿನ ಚಕಮಕಿಯ ಆಡಿಯೋ ವೈರಲ್ ಆಗಿದೆ.
ಅಷ್ಟೇ ಅಲ್ಲ, ಅದನ್ನು ಮೃತ ಬಾಲಕಿಯ ತಾಯಿಯ ವಾಟ್ಸಪ್ಗೂ ಬಾಲಕರು ಕಳುಹಿಸಿದ್ದಾರೆ. ಇದರಿಂದ ಮನನೊಂದು ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದದಾಳ. ಘಟನೆ ನಂತರ ಅಪ್ರಾಪ್ತ ಬಾಲಕರು ಪರಾರಿಯಾಗಿದ್ದು, ಈ ಬಗ್ಗೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ ಕಾಣೆಯಾಗಿರುವ ಬಾಲಕರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.