Categories
ಮಂಡ್ಯ

ಮತ್ತೆ ಕಾವೇರಿ ಖ್ಯಾತೆ ಶುರು!

ಮತ್ತೆ ಕಾವೇರಿ ಖ್ಯಾತೆ ಶುರು!
– ತಮಿಳುನಾಡಿಗೆ ನೀರು: ಮಂಡ್ಯದಲ್ಲಿ 21ಕ್ಕೆ ಪ್ರತಿಭಟನೆ
– ರಾಜ್ಯದ ಪರ ರೈತರಿಗಾಗಿ ಹೋರಾಟ: ಸುಮಲತಾ

NAMMUR EXPRESS NEWS
ಮಂಡ್ಯ: ಕೆ.ಆರ್.ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿರುವುದನ್ನು ವಿರೋಧಿಸಿ ಮಂಡ್ಯದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಗಸ್ಟ್ 21ರಂದು ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.
ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಮುಂದೆ ಒಳ್ಳೆಯವರಾಗಲು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನೀರಿನ ಲಭ್ಯತೆಯನ್ನು ಚರ್ಚೆ ಮಾಡದೇ ನೀರು ಬಿಟ್ಟಿದ್ದಾರೆ. ಇದರ ವಿರುದ್ಧ ಪ್ರತಿಭಟನೆ ನಡೆಸಲಾಗುವುದು. ಈ ಹೋರಾಟಕ್ಕೆ ರೈತ ಸಂಘಟನೆ, ಕನ್ನಡಪರ ಸಂಘಟನೆಗಳು ಆಟೋ, ಚಾಲಕರು ಬೆಂಬಲ ನೀಡುವಂತೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವತ್ ನಾರಾಯಣ ಮನವಿ ಮಾಡಿದ್ದಾರೆ.

ಒಂದೆಡೆ ಆಪರೇಷನ್ ಹಸ್ತ ಜೋರಾಗುತ್ತಿದ್ದು ಈ ಕಡೆ ಕಾವೇರಿ ಹೋರಾಟವನ್ನು ಬಿಜೆಪಿ ದಾಳ ಮಾಡಿಕೊಳ್ಳಲು ಮುಂದಾಗಿದೆ.ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸಿ ಆ.21ರಂದು ಮಂಡ್ಯದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಯಲಿದೆ. ಇದು ಯಾರ ವಿರುದ್ಧದ ಪ್ರತಿಭಟನೆ ಅಲ್ಲ ಎಂದು ಸಂಸದೆ ಸುಮಲತಾ ಹೇಳಿದ್ದಾರೆ. ಕರ್ನಾಟಕ ಸರ್ಕಾರದ ತಮಿಳುನಾಡು ಪರ ನಿರ್ಧಾರದಿಂದ ನಮ್ಮ ರೈತರಿಗೆ ಅನ್ಯಾಯವಾಗಬಾರದು ಎಂದು ಈ ಹೋರಾಟ ನಡೆಯುತ್ತಿದೆ. ಕಾವೇರಿ ವಿಚಾರವಾಗಿ ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಿದ್ದೇನೆ ಎಂದರು. ಕಾವೇರಿ ನೀರಿನ ಅವಶ್ಯಕತೆ ಇರುವ ಎಲ್ಲರೂ ಈ ಹೋರಾಟದಲ್ಲಿ ಭಾಗಿಯಾಗಬೇಕು, ಸರ್ಕಾರ ಒಳ್ಳೆಯ ಹೆಜ್ಜೆ ಹಾಕಬೇಕು, ಹೀಗೆ ಬಿಟ್ಟರೆ ಮುಂದೆ ಕುಡಿಯುವ ನೀರಿನ ಸಮಸ್ಯೆ ಆಗುತ್ತದೆ. ನಾವು ಯಾರ ವಿರುದ್ಧವೂ ಹೋರಾಟ ಮಾಡುತಿಲ್ಲ ರೈತರ ಪರ ಹೋರಾಟ ಮಾಡುತ್ತಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ : ತೀರ್ಥಹಳ್ಳಿಯಲ್ಲಿ ಗಾಂಜಾ ಹೊಡೆದವರು ಅರೆಸ್ಟ್!?

[embedyt] https://www.youtube.com/watch?v=6xcRyzTIs_U%5B/embedyt%5D

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.