ನಾಗಮಂಗಲ ಗಲಭೆ: ನಿಷೇಧಾಜ್ಞೆ!
– ಪ್ರಮುಖ ಆರೋಪಿಗಳಿಗೆ ನ್ಯಾಯಾಂಗ ಬಂಧನ
– ಎರಡು ಕಡೆಯ 150ಕ್ಕೂ ಹೆಚ್ಚು ಮಂದಿ ಅರೆಸ್ಟ್:
– ಇನ್ಸ್ಪೆಕ್ಟರ್ ಅಮಾನತು ಮಾಡಿ ಐಜಿಪಿ ಆದೇಶ
– ಗಲಭೆ ನಡೆದ ಗ್ರಾಮದಲ್ಲಿ ನೀರವ ಮೌನ
NAMMUR EXPRESS NEWS
ನಾಗಮಂಗಲ: ಮಂಡ್ಯ ಜಿಲ್ಲೆ ನಾಗಮಂಗಲ ಗಲಭೆಗೆ ಸಂಬಂಧಿಸಿದಂತೆ ಗಣಪತಿ ಮಂಟಪ ಇದ್ದ ಬದ್ರಿಕೊಪ್ಪಿನಲ್ಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬದ್ರಿಕೊಪ್ಪಲು ಹೆಬ್ಬಾಗಿಲಿನಲ್ಲಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ಬಂಧನದ ಭೀತಿಯಿಂದ ಇಲ್ಲಿನ ಯುವಕರು ಗ್ರಾಮವನ್ನೇ ತೊರೆದು ಹೋಗುತ್ತಿದ್ದಾರೆ. ಹೀಗಾಗಿ, ಬದ್ರಿಕೊಪ್ಪಲು ಗ್ರಾಮ ಬಿಕೋ ಎನ್ನುತ್ತಿದೆ.
ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ದರ್ಗಾ ಬಳಿ ನಡೆದ ಗಲಭೆಯಲ್ಲಿ 20ಕ್ಕೂ ಅಧಿಕ ಅಂಗಡಿಗಳನ್ನು ಧ್ವಂಸ ಮಾಡಲಾಗಿತ್ತು. ಕೆಲವು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿತ್ತು. ಹಿಂದೂಗಳ ಗುಂಪು ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ಗಣಪತಿ ವಿಸರ್ಜನೆಗೆ ತೆರಳುತ್ತಿದ್ದಂತೆ ಮುಸ್ಲಿಮರ ಗುಂಪು ಲ್ಲಾಹು ಅ್ರ್ ಘೋಷಣೆ ಕೂಗಿ ಗಲಾಟೆಯೆಬ್ಬಿಸಿದ್ದರು. ಬಳಿಕ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದರು. ಇದೀಗ ಇಡೀ ಗ್ರಾಮದಲ್ಲಿ ಮೌನ ಆವರಿಸಿದೆ.
52 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ
ಗಣಪತಿ ಮೆರವಣಿಗೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 52 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನಾಗಮಂಗಲ ಸಿವಿಲ್ ನ್ಯಾಯಾಲಯ ಆದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 52 ಆರೋಪಿಗಳನ್ನು ಪೊಲೀಸರು ಕೋರ್ಟ್ಗೆ ಹಾಜರುಪಡಿಸಿದ್ದರು. ಸದ್ಯ ಆರೋಪಿಗಳನ್ನು ಮಂಡ್ಯ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ.
ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ 150 ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. 30 ಮುಸ್ಲಿಂ ಯುವಕರು ಮತ್ತು 23 ಹಿಂದೂ ಯುವಕರನ್ನು ಬಂಧಿಸಲಾಗಿದ್ದು ಇನ್ನು ತಲೆಮರೆಸಿಕೊಂಡಿರುವ 97 ಜನರಿಗೆ ಶೋಧ ನಡೆಸಿದ್ದಾರೆ ಎಂದು ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ್ ಮಾಹಿತಿ ನೀಡಿದ್ದಾರೆ.
20ಕ್ಕೂ ಹೆಚ್ಚು ಅಂಗಡಿಗಳು ಭಸ್ಮ,ಅಶೋಕ್ ಅವರನ್ನು ಅಮಾನತು ಮಾಡಿ ಐಜಿಪಿ ಆದೇಶ!
ನಾಗಮಂಗಲ ಪಟ್ಟಣದ ಮಂಡ್ಯ ರಸ್ತೆ, ಮೈಸೂರು ರಸ್ತೆ, ಮರಿಯಪ್ಪ ವೃತ್ತ, ಕೊಳದ ಬೀದಿ ಸೇರಿದಂತೆ ಹೆದ್ದಾರಿಯ ಹಲವೆಡೆ ಚಪ್ಪಲಿ ಅಂಗಡಿ, ಬಟ್ಟೆ ಅಂಗಡಿ, ಪಾತ್ರೆ ಅಂಗಡಿ, ಬೈಕ್ ಶೋರೂಂ, ಟೈಲರ್ ಅಂಗಡಿ, ಕೋಳಿ ಅಂಗಡಿ, ಹಣ್ಣಿನ ಅಂಗಡಿ, ಗ್ಯಾರೇಜ್, ಟೈರ್ ಅಂಗಡಿ ಸೇರಿದಂತೆ ವಿವಿಧ ಬಗೆಯ 20ಕ್ಕೂ ಹೆಚ್ಚು ಅಂಗಡಿ ಮಳಿಗೆಗಳಿಗೆ ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಸುಟ್ಟು ಕರಕಲಾಗಿವೆ.
ಅಮಾಯಕರನ್ನು, ಗಣೇಶ ಪೂಜೆ ಮಾಡಿ ಬಂದು ಮನೆಯಲ್ಲಿ ಮಲಗಿದ್ದವರನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಮಹಿಳೆಯರು ಆರೋಪಿಸಿದ್ದಾರೆ. ಪೊಲೀಸ್ ಠಾಣೆಗಳ ಮುಂದೆ ಬಂದು ಪ್ರತಿಭಟನೆ ಮಾಡುತ್ತಿದ್ದಾರೆ.
ಗಲಭೆ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗಮಂಗಲ ಪಟ್ಟಣ ಪೊಲೀಸ್ ಇನ್ಸ್ ಪೆಕ್ಟರ್ ಅಶೋಕ್ ಅವರನ್ನು ಅಮಾನತು ಮಾಡಿ ಐಜಿಪಿ ಆದೇಶ ಹೊರಡಿಸಿದ್ದಾರೆ.
ಜೈಲುಪಾಲಾದ ಪುತ್ರ,ಸುದ್ದಿ ಕೇಳಿ ಕುಸಿದು ಬಿದ್ದ ತಾಯಿ!
ಗಲಭೆ ಪ್ರಕರಣದಲ್ಲಿ ತನ್ನ ಪುತ್ರ ಜೈಲುಪಾಲಾಗಿು ಸುದ್ದಿ ತಿಳಿು ತಾಯಿ ಕುಸಿದು ಬಿದ್ದಿುವ ಘಟನೆ ನಡೆದಿದೆ.
ತನ್ನ ಪುತ್ರ ಜೈಲುಪಾಲಾದ ಎಂದು ನೊಂದ ತಾಯಿ ನಾಗಮಂಗಲ ಕೋರ್ಟ್ ಮುಂಭಾಗವೇ ಕುಸಿದು ಬಿದ್ದದ್ದು, ಮತ್ತೊಂದೆಡೆ ತಮ್ಮ ಮಕ್ಕಳು ಜೈಲು ಸೇರಿರುವುದನ್ನು ನೋಡಿ ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ.
ಪ್ರಮೋದ್ ಮುತಾಲಿಕ್ ಭೇಟಿ ರದ್ದು
ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜರಂಗದಳದ ನಾಯಕ ಪ್ರಮೋದ್ ಮುತಾಲಿಕ್ ಇಂದು ನಾಗಮಂಗಲಕ್ಕೆ ಆಗಮಿಸುವುದಾಗಿ ತಿಳಿಸಿದ್ದರು. ಆದರೆ, ಅವರಿಗೆ ನಾಗಮಂಗಲಕ್ಕೆ ಬಾರದಂತೆ ಪೊಲೀಸರು ಸೂಚನೆ ನೀಡಿದ್ದಾರೆ. ಹೀಗಾಗಿ, ಇಂದು ನಾಗಮಂಗಲದಲ್ಲಿ ಗಲಭೆ ನಡೆದ ಸ್ಥಳಕ್ಕೆ ಬರುವ ಪ್ಲಾನ್ ಹಾಕಿಕೊಂಡಿದ್ದ ಮುತಾಲಿಕ್ ತಮ್ಮ ಭೇಟಿಯನ್ನು ರದ್ದುಪಡಿಸಿದ್ದಾರೆ.