ಮಂಗಳೂರಿನಲ್ಲಿ ಎಳನೀರು ಕುಡಿದು 100 ಮಂದಿ ಅಸ್ವಸ್ಥ!
– ಆಸ್ಪತ್ರೆಗೆ ದಾಖಲು: ಫ್ಯಾಕ್ಟರಿಗೆ ನೋಟೀಸ್, ಅಧಿಕಾರಿಗಳ ಭೇಟಿ
– ಎಲ್ಲರ ಸ್ಥಿತಿ ಈಗ ಸುಧಾರಣೆ: ಭಾರೀ ಅಲರ್ಟ್
NAMMUR EXPRESS NEWS
ಮಂಗಳೂರು: ಎಳನೀರು ಕುಡಿದು ಸುಮಾರು ಹಲವು ಮಂದಿ ಅಸ್ವಸ್ಥಗೊಂಡ ಘಟನೆ ಮಂಗಳೂರು ನಗರ ಹೊರವಲಯದ ಅಡ್ಯಾರ್ ಬಳಿ ನಡೆದಿದೆ. ಅಡ್ಯಾರ್ ಲ್ಲಿರುವ ಐಸ್ ಕ್ರೀಮ್ ತಯಾರಿಕ ಮಾರಾಟ ಸಂಸ್ಥೆಯಿಂದ ಒಂದಷ್ಟು ಮಂದಿ ಬೊಂಡದ ನೀರನ್ನು ಅಡ್ಯಾರ್ ಕಣ್ಣೂರು ಮತ್ತು ತುಂಬೆ ಪರಿಸರದ ನಿವಾಸಿಗಳು ಲೀಟರ್ ಲೆಕ್ಕದಲ್ಲಿ ಖರೀದಿಸಿ ಕುಡಿದಿದ್ದರು. ಲೀಟರ್ ಗೆ 40 ರೂಪಾಯಿಯಂತೆ ಸೋಮವಾರ ಸಂಜೆ ಈ ಎಳನೀರನ್ನು ಕುಡಿದ ಅಡ್ಯಾರು ಮತ್ತು ಕಣ್ಣೂರ್ ಸುತ್ತಮುತ್ತಲಿನ ಸಾರ್ವಜನಿಕರು ಮಂಗಳವಾರದಿಂದ ವಾಂತಿಬೇದಿಯಿಂದ ಬಳಲಿದ್ದರು.
ಬುಧವಾರದಂದು ಈ ಬಗ್ಗೆ ಜಿಲ್ಲಾ ಆರೋಗ್ಯ ಅಧಿಕಾರಿ ಹಾಗೂ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಇವರಿಗೆ ವಾಟ್ಸಪ್ ಮುಖಾಂತರ ದೂರು ಸಲ್ಲಿಕೆಯಾಗಿದ್ದು ತಕ್ಷಣವೇ ಇಬ್ಬರೂ ಅಧಿಕಾರಿಗಳೂ ಅಡ್ಯಾರ್ ನಲ್ಲಿರುವ ಬೊಂಡ ಫ್ಯಾಕ್ಟರಿ ಇಲ್ಲಿಗೆ ಭೇಟಿ ನೀಡಿ ಎಳನೀರಿನ ಸ್ಯಾಂಪಲನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ವಿಶ್ಲೇಷಣೆಗೆ ಕಳುಹಿಸಲು ಕ್ರಮ ಕೈಗೊಂಡಿದ್ದರು. ಇಡೀ ಫ್ಯಾಕ್ಟರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ ಶುಚಿಗೊಳಿಸಲಿ ಆದೇಶಿಸಲಾಗಿತ್ತು. ಇದಲ್ಲದೇ ಮಂಗಳೂರಿನ ವಿವಿಧ ಆಸ್ಪತ್ರೆಯಲ್ಲಿ ಒಳರೋಗಿ ಯಾಗಿ ದಾಖಲಾಗಿ ಸಂತ್ರಸ್ತರನ್ನು ಭೇಟಿ ಮಾಡಿ ಆರೋಗ್ಯವನ್ನು ವಿಚಾರಿಸಿದ್ದರು.
ಬೊಂಡ ನೀರು ಕುಡಿದು ಇದುವರೆಗೆ 137 ಮಂದಿ ಎಳನೀರು ಕುಡಿದಿರುವುದರಿಂದ ಅಸ್ವಸ್ಥರಾಗಿದ್ದು,ಹೊರರೋಗಿಗಳಾಗಿ 84,ಒಳರೋಗಿಗಳಾಗಿ 53 ಮಂದಿ ಚಿಕಿತ್ಸೆ ಪಡೆದಿದ್ದಾರೆ.ಇದುವರೆಗೆ 23 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿರುವ ಎಲ್ಲರ ಆರೋಗ್ಯವು ಸ್ಥಿರವಾಗಿದ್ದು, ಆರೋಗ್ಯ ಇಲಾಖೆಯಿಂದ ನಿರಂತರವಾಗಿ ಪರಿಸ್ಥಿತಿಯ ಮೇಲೆ ನಿಗಾ ವಹಿಸಿದೆ. ಗುರುವಾರ ಸಂಸ್ಥೆಯ ಮುಖ್ಯಸ್ಥರೊಂದಿಗೆ ಚರ್ಚಿಸಿ ಆರೋಗ್ಯ ಇಲಾಖೆಯೂ ತಾತ್ಕಾಲಿಕವಾಗಿ ಮತ್ತು ಮುಂದಿನ ಆದೇಶದವರೆಗೆ ಎಳನೀರು ಮತ್ತು ಇತರೆ ಆಹಾರ ಪದಾರ್ಥಗಳನ್ನು ಮಾರಾಟ ಮಾಡದಂತೆ ತಿಳುವಳಿ ನೋಟೀಸ್ ನೀಡಿ ಬಂದ್ ಮಾಡಿಸಿದೆ.