ಗ್ಯಾರಂಟಿ ಯೋಜನೆ ಜೊತೆ ಬಾಂಬ್ ಉಚಿತ ಎಂದಾತನ ಮೇಲೆ ಕೇಸ್!
– ದಿವಾಕರ್ ಕೋಟ್ಯಾನ್ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ
– ಬಸ್ ಫ್ರಿ, ವಿದ್ಯುತ್ ಫ್ರಿ ಈಗ ಬಾಂಬ್ ಸ್ಪೋಟ ಫ್ರೀ ಎಂದು ವಿಡಿಯೋ!
NAMMUR EXPRESS NEWS
ಮಲ್ಪೆ: “ರಾಜ್ಯ ಸರ್ಕಾರದ ಗ್ಯಾರಂಟಿ ಜೊತೆಗೆ ಬಾಂಬ್ ಕೂಡಾ ಉಚಿತವಾಗಿ ಸಿಗುತ್ತದೆ” ಎಂದು ಸಿಎಂ ಸಿದ್ಧರಾಮಯ್ಯ ಅವರ ಬಗ್ಗೆ ನಿಂದಿಸಿ ಅವಹೇಳನ ಮಾಡಿ ವಿಡಿಯೋ ವೈರಲ್ ಮಾಡಿದ ಗರಡಿ ಮಜಲು ನಿವಾಸಿ ದಿವಾಕರ್ ಕೋಟ್ಯಾನ್ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ದಿವಾಕರ್ ಕೋಟ್ಯಾನ್ ವಿಡಿಯೋದಲ್ಲಿ, ‘ಬಸ್ ಟಿಕೆಟ್ ಫ್ರಿ, ವಿದ್ಯುತ್ ಬಿಲ್ ಫ್ರಿ ಜೊತೆಗೆ ಈಗ ಹೊಸದಾಗಿ ಬಾಂಬ್ ಸ್ಪೋಟ ಫ್ರೀ ಕೂಡ ರಾಜ್ಯ ಸರಕಾರ ಕೊಡುತ್ತಿದೆ. ಇದಕ್ಕೂ ಹಣ ಕೊಡಬೇಕೆಂದು ಇಲ್ಲ ಎಲ್ಲವೂ ಫ್ರಿ….ಆಮೇಲೆ ನೇರವಾಗಿ ಮೇಲೆ ಇದಕ್ಕಾಗಿ ನೋ ಪಾಸ್ ಪೋಟ್ ಬೇಡ ವೀಸಾ ನೂ ಬೇಡ .. ಸನ್ಮಾನ್ಯ ಮುಖ್ಯಮಂತ್ರಿ ಸಿದ್ರುಲ್ಲಾ ಖಾನ್.. ಹಿಂದುಗಳೇ ಫ್ರೀ ಬೇಕಲ್ಲ ತೆಗೆದುಕೊಳ್ಳಿ,..ಮುಂದೆ ಇನ್ನು ಆರು ತಿಂಗಳಿಗೆ ಬಸ್, ವಿದ್ಯುತ್, 2000ರೂ. ಜೊತೆ ಬಾಂಬ್ ಕೂಡ ಫ್ರೀ ಸಿಗುತ್ತದೆ.
ಮಜಾ ಮಾಡಿ ಎಂದು ಹೇಳಿದ್ದ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಇದೀಗ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿತ್ತು. ದಿವಾಕರ್ ಕೋಟ್ಯಾನ್ ರಾಜ್ಯ ಸರಕಾರದ ಯೋಜನೆಗಳ ಜೊತೆ ಬಾಂಬ್ ಉಚಿತ ಎಂದು ಹೇಳುವುದರೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿದ್ದಾನೆ. ಆತನ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಹಮ್ಮದ್ ಮಲ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅದರಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.