Categories
ಮಂಗಳೂರು

ಅರ್ಧ ಸೇದಿದ ಬೀಡಿ ನುಂಗಿ ಮಗು ಮೃತ್ಯು!

ಅರ್ಧ ಸೇದಿದ ಬೀಡಿ ನುಂಗಿ ಮಗು ಮೃತ್ಯು!
– ಮಂಗಳೂರಲ್ಲಿ ನಡೆದ ಘಟನೆ
– ಗಂಡನ ವಿರುದ್ಧ ದೂರು ನೀಡಿದ ಪತ್ನಿ

NAMMUR EXPRESS NEWS
ಮಂಗಳೂರು: ಅರ್ಧ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ ಹತ್ತು ತಿಂಗಳ ಮಗವೊಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಅಡ್ಯಾರ್‌ನಲ್ಲಿ ವಾಸವಾಗಿದ್ದ ಬಿಹಾರ ಮೂಲದ ದಂಪತಿಯ 10 ತಿಂಗಳ ಮಗು ಅನೀಶ್ ಕುಮಾರ್ ಮೃತ ಪಟ್ಟಿದೆ.
ಕಳೆದ ಶನಿವಾರ ಮಧ್ಯಾಹ್ನ ಸುಮಾರು 1:30ಕ್ಕೆ ಅರ್ಧ ಸೇದಿ ಬಿಸಾಡಿದ್ದ ಬೀಡಿ ತುಂಡನ್ನು ಮಗು ನುಂಗಿ ಅಸ್ವಸ್ಥಗೊಂಡಿತ್ತು. ಮಗುವನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ.
ತನ್ನ ಗಂಡನ ನಿರ್ಲಕ್ಷ್ಯದಿಂದಲೇ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡು ಮಗು ಮೃತಪಟ್ಟಿದೆ. ಮನೆಯೊಳಗೆ ಬೀಡಿ ಸೇದಿ ಬಿಸಾಡದಂತೆ ಗಂಡನಿಗೆ ಹಲವು ಬಾರಿ ಎಚ್ಚರಿಸಿದ್ದರೂ ಮತ್ತೆ ಎಸೆದ ಪರಿಣಾಮ ಮಗು ಪ್ರಾಣ ಕಳೆದುಕೊಂಡಿದೆ ಎಂದು ಮಗುವಿನ ತಾಯಿ ಲಕ್ಷ್ಮಿ ದೇವಿ ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.