ಲೋಕ ಸಭಾ ಚುನಾವಣೆಗೆ ಕರಾವಳಿಯಲ್ಲಿ ಕಟ್ಟೆಚ್ಚರ!
– ಮಂಗಳೂರು ಪೊಲೀಸರಿಂದ 19 ರೌಡಿಗಳ ಗಡಿಪಾರು
– ಮೂವರು ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ ಜಾರಿ
NAMMUR EXPRESS NEWS
ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದೆ ಬಹಳ ಶಾಂತಿಯುತವಾಗಿ ಮತದಾನ ಮಾಡುವುದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯು ಎಲ್ಲ ರೀತಿಯ ಪೂರ್ವ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು 19 ರೌಡಿಗಳನ್ನು ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ. ಈ ಹಿಂದಿನ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಗಳ ಹಿನ್ನಲೆ ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ.
ಮೂವರು ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ ಜಾರಿ:
ಇನ್ನೊಂದೆಡೆ, ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೂವರು ಕ್ರಿಮಿನಲ್ ಹಿನ್ನಲೆ ಹೊಂದಿರುವ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿರುವುದಾಗಿ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.