ವಿಷ ಸೇವಿಸಿದ್ದ ವಿದ್ಯಾರ್ಥಿನಿ ಸಾವು!
– ಮಂಗಳೂರು ಕಾಲೇಜಿನ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿನಿ
– ಏನಿದು ಘಟನೆ? ಹೊಟ್ಟೆನೋವು ಎಂದು ವಿಷ ಸೇವಿಸಿದ್ದಾ…?
NAMMUR EXPRESS NEWS
ಕಾಸರಗೋಡು: ಆರೋಗ್ಯದಲ್ಲಿ ಏರುಪೇರುಗೊಂಡು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಉಪ್ಪಳದಲ್ಲಿ ನಡೆದಿದೆ.
ಮಂಗಳೂರು ಕಾಲೇಜಿನ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಉಪ್ಪಳ ಐಲ ಕುದುಪುಳುದವಿನ ಸುರೇಶ್ ಎಂಬವರರವರ ಪುತ್ರಿ ಧನ್ಯಶ್ರೀ (೧೯) ಮೃತ ವಿದ್ಯಾರ್ಥಿಯಾಗಿದ್ದಾಳೆ.
ಕಳೆದ ಹನ್ನೆರಡು ದಿನಗಳ ಹಿಂದೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದು ತಪಾಸಣೆ ನಡೆಸಿದಾಗ ವಿಷ ಸೇವನೆ ಮಾಡಿರುವ ಬಗ್ಗೆ ತಿಳಿದುಬಂದಿತ್ತು. ಗಂಭೀರ ಸ್ಥಿತಿಗೆ ತಲಪಿದ್ದ ಧನ್ಯಶ್ರೀಳನ್ನು ಕೊಚ್ಚಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಹಿನ್ನಲೆಯಲ್ಲಿ ವೈದ್ಯರ ಸಲಹೆಯಂತೆ ಕಾಸರಗೋಡಿಗೆ ಕರೆದುಕೊಂಡು ಬಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.