Categories
ಮಂಗಳೂರು

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಡಿಕೆಶಿ!!

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಡಿಕೆಶಿ!!

– ಭೇಟಿ ನೀಡಿ ಹೆಗ್ಗಡೆಯವರ ಆಶೀರ್ವಾದ ಪಡೆದ ಉಪ ಮುಖ್ಯಮಂತ್ರಿ
– ದರ್ಶನ ಪಡೆದು ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ ಡಿಕೆ ಶಿವಕುಮಾರ್!

NAMMUR EXPRESS NEWS
ಮಂಗಳೂರು: ಕಳೆದ ವಾರವಷ್ಟೇ ಘಾಟಿ ಸುಬ್ರಮಣ್ಯ ಸ್ವಾಮಿ ದರ್ಶನ ಪಡೆದಿದ್ದ ಡಿ ಕೆ ಶಿವಕುಮಾರ್ ಏ. 20ರಂದು ಬೆಳ್ಳಂಬೆಳಗ್ಗೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಧರ್ಮಸ್ಥಳದಲ್ಲಿ ಒಂದು ಸುತ್ತು ದೇವಸ್ಥಾನ ಪ್ರದಕ್ಷಿಣೆ ಹಾಕಿ, ಮಂಜುನಾಥಸ್ವಾಮಿಯ ದರ್ಶನ ಪಡೆದು ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

ಬೆಳ್ತಂಗಡಿ ತಾಲೂಕಿನ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಏ.20 ರವಿವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥಸ್ವಾಮಿ ದರ್ಶನ ಪಡೆದರು. ಮಂಜುನಾಥಸ್ವಾಮಿಗೆ ಪ್ರಾರ್ಥನೆ ಸಲ್ಲಿಸಿ ಹುಂಡಿಗೆ ಕಾಣಿಕೆ ಹಾಕಿದರು. ಬಳಿಕ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದರು. ರಾಜ್ಯಸಭಾ ಸದಸ್ಯ ವೀರೇಂದ್ರ ಹೆಗ್ಗಡೆ ಅವರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಗೌಪ್ಯವಾಗಿ ಮಾತುಕತೆ ನಡೆಸಿದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.