ತುಳು ಭಾಷೆ 2ನೇ ಅಧಿಕೃತ ಭಾಷೆ ಮಾಡಲು ಪಟ್ಟು!
– ಟ್ವಿಟರ್ ಅಲ್ಲಿ ಬೆಳಗ್ಗಿನಿಂದ ರಾತ್ರಿಯವರೆಗೆ ಅಭಿಯಾನ
– ರಾಜಕಾರಣಿ ಗಳ ಇಚ್ಛಾಶಕ್ತಿ ಕೊರತೆಗೆ ಖಂಡನೆ
NAMMUR EXPRESS NEWS
ಮಂಗಳೂರು : ನ.1ರಂದು ಕರ್ನಾಟಕ ರಾಜ್ಯೋತ್ಸವದಂದು ತುಳು ಭಾಷೆಗೆ ಅಧಿಕೃತ ಸ್ಥಾನಮಾನ ಸಿಗಬೇಕು ಎಂದು ಆಗ್ರಹಿಸಿದ ಕೆಲವು ಸಂಘಟನೆಗಳು ರಾಜ್ಯೋತ್ಸವವನ್ನು ಕರಾಳ ದಿನವನ್ನಾಗಿ ಆಚರಿಸಿದೆ. ಈ ನಿಟ್ಟಿನಲ್ಲಿ ಹಮ್ಮಿಕೊಂಡ ಟೀಟ್ ಅಭಿಯಾನದಲ್ಲಿ ನ.1ರ ಬೆಳಗ್ಗಿನಿಂದ ರಾತ್ರಿಯವರೆಗೆ ಸಾವಿರಾರು ಮಂದಿ ಟ್ವಿಟ್ ಮಾಡುವ ಮೂಲಕ ತುಳು ಭಾಷೆಗೆ ಸೂಕ್ತ ಸ್ಥಾನಮಾನ ನೀಡುವಂತೆ ಬೆಂಬಲ ಸೂಚಿಸಿದ್ದಾರೆ. ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದಾಗಿ ಹೀಗಾಗುತ್ತಿದೆ ಎಂದು ಅನೇಕರು ಟ್ವಿಟ್ ಮೂಲಕ ಪ್ರಧಾನಿ, ಮುಖ್ಯಮಂತ್ರಿಗಳು, ಸಂಸದರು, ಶಾಸಕರು ಸಹಿತ ವಿವಿಧ ಜನಪ್ರತಿನಿಧಿಗಳನ್ನು ಟ್ವಿಟ್ ಮೂಲಕ ಒತ್ತಾಯಿಸಿದ್ದಾರೆ.