Categories
ಮಂಗಳೂರು

ಸುರಲ್ಪಾಡಿಯಲ್ಲಿ ಅಕ್ರಮ ಗೋಸಾಗಾಟ ಬಜರಂಗದಳ ಕಾರ್ಯಕರ್ತರಿಂದ ತಡೆ!

ಸುರಲ್ಪಾಡಿಯಲ್ಲಿ ಅಕ್ರಮ ಗೋಸಾಗಾಟ ಬಜರಂಗದಳ ಕಾರ್ಯಕರ್ತರಿಂದ ತಡೆ!

– ಗೂಡ್ಸ್‌ ವಾಹನದಲ್ಲಿ ಕಾಲುಗಳನ್ನು ಕಟ್ಟಿ ಸಾಗಾಟ
– 25 ಗೋವುಗಳ ರಕ್ಷಣೆ!

NAMMUR EXPRESS NEWS
ಮಂಗಳೂರು: ಅಕ್ರಮ ಗೋಸಾಗಾಟ ಮಾಡುತ್ತಿದ್ದುದ್ದನ್ನು ಬಜರಂಗದಳ ಕಾರ್ಯಕರ್ತರು ತಡೆಯೊಡ್ಡಿರುವ ಘಟನೆ ನಗರದ ಹೊರವಲಯದ ಬಜಪೆ ಸುರಲ್ಪಾಡಿಯಲ್ಲಿ ಮಾ.28 ಶುಕ್ರವಾರದಂದು ನಡೆದಿದೆ.
ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ ಎನ್ನುವ ಖಚಿತ ಮಾಹಿತಿಯ ಆಧಾರದಲ್ಲಿ ವಾಹನವನ್ನು ತಡೆದು ಪರಿಶೀಲನೆ ಮಾಡಿದಾಗ ಗೂಡ್ಸ್‌ ವಾಹನದಲ್ಲಿ ಕಾಲುಗಳನ್ನು ಕಟ್ಟಿ ಅಮಾನುಷವಾಗಿ 25 ಗೋವುಗಳಿರುವುದು ಕಂಡು ಬಂದಿದೆ.
ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಗೋವುಗಳನ್ನು ರಕ್ಷಣೆ ಮಾಡಿದ ಕಾರ್ಯಕರ್ತಗರು ವಾಹನವನ್ನು ಪೊಲೀಸರಿಗೊಪ್ಪಿಸಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.