ಮಂಗಳೂರು ಸಾಹಿತ್ಯ ಉತ್ಸವ
– ಭಾರತ್ ಫೌಂಡೇಶನ್ ನೇತೃತ್ವದಲ್ಲಿ ಲಿಟ್ ಫೆಸ್ಟ್!
– ಜನವರಿ 19ರಿಂದ ಕಾರ್ಯಕ್ರಮ
– ಕಾರ್ಯಕ್ರಮಗಳ ವಿವರ
NAMMUR EXPRESS NEWS
ಮಂಗಳೂರು: ಭಾರತ್ ಫೌಂಡೇಶನ್ ನೇತೃತ್ವದಲ್ಲಿ 6ನೇ ಆವೃತ್ತಿಯ ಲಿಟ್ ಫೆಸ್ಟ್ 2024 ಜ.19ರಿಂದ 21ರ ತನಕ ಮಂಗಳೂರಿನ ಟಿಎಂಎ ಪೈ ಇಂಟರ್ ನ್ಯಾಷನಲ್ ಕನ್ವೆನ್ಸನ್ ಸೆಂಟರ್ನಲ್ಲಿ ಜರುಗಲಿದೆ. ಈ ಬಾರಿ ಒಟ್ಟು 29 ಪ್ರಸ್ತುತ ಉತ್ಸವವನ್ನು ಒಳಗೊಂಡಿದೆ. ಎರಡು ವೇದಿಕೆಗಳು ಮತ್ತು ಹರಟೆ ಕಟ್ಟೆ ಇವುಗಳಲ್ಲಿ 60ಕ್ಕೂ ಅಧಿಕ ಸಾಹಿತಿಗಳು, ವಾಗ್ಮಿಗಳು ಭಾಗವಹಿಸಲಿದ್ದಾರೆ. ಈ ಬಾರಿಯ ಲಿಟ್ ಫೆಸ್ಟ್ ಗೌರವಕ್ಕೆ ‘ವನಿತಾ ಸೇವಾ ಸಮಾಜ’ ಧಾರವಾಡ ಈ ಸಂಸ್ಥೆಯನ್ನು ಆಯ್ಕೆ ಮಾಡಲಾಗಿದೆ ಎಂದು ಭಾರತ್ ಫೌಂಡೇಶನ್ ಟ್ರಸ್ಟಿ ಸುನಿಲ್ ಕುಲಕರ್ಣಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.
19ರಂದು ಸಂಜೆ 5 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಯಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಶ ತೋಳ್ತಾಡಿ, ಹೆಸರಾಂತ ಕಲಾವಿದೆ ರಾಧೆ ಜಗ್ಗಿ, ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ವಿನಯ್ ಹೆಗ್ಡೆ, ಮಿಥಿಕ್ ಸೊಸೈಟಿಯ ಕಾರ್ಯದರ್ಶಿ ರವಿ ಮತ್ತು ವನಿತಾ, ಸೇವಾ ಸಮಾಜ ಧಾರವಾಡ ಇದರ ಕಾರ್ಯದರ್ಶಿ ಮಧುರಾ ಹೆಗಡೆಯವರು ಭಾಗಿಯಾಗಲಿದ್ದಾರೆ. ಈ ಸಂದರ್ಭ 13 ಲೇಖಕರು ಬರೆದ ‘ದಿ ಐಡಿಯಾ ಆಫ್ ಭಾರತ್’ ಪುಸ್ತಕ ಬಿಡುಗಡೆಗೊಳ್ಳಲಿದೆ.
19ರ ಸಂಜೆ ಭರತನಾಟ್ಯ ಜ.20ರಂದು ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಲಿದೆ. ವಾಗ್ಮಿಗಳು, ಸಾಹಿತಿಗಳು, ಸಂಶೋಧಕರು, ವಿಷಯ ಪರಿಣಿತರು ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಇರಲಿದ್ದಾರೆ ಎಂದು ಭಾರತ್ ಫೌಂಡೇಶನ್ನ ಇನ್ನೊಬ್ಬ ಟ್ರಸ್ಟಿ ಶ್ರೀರಾಜ್ ಗುಡಿ ಹೇಳಿದರು.
ವಿಶೇಷತೆ: ಸಿನಿಮಾ ಪ್ರದರ್ಶನ, ಮಕ್ಕಳ ಸಾಹಿತ್ಯ ಅಭಿರುಚಿ ಮತ್ತು ಕಥೆಯ ಬಗ್ಗೆ ಪಾಲಕರಿಗೆ ಆಸಕ್ತಿ ಬೆಳೆಸುವ ದೃಷ್ಟಿಯಿಂದ ಕಾರ್ಕಳದ ವಂದನಾ ರೈ ಅವರಿಂದ ಮಕ್ಕಳಿಗಾಗಿ ‘ಚಿಣ್ಣರ ಅಂಗಳ’ ನಡೆಯಲಿದೆ.