ಮಂಗಳೂರು: ತುಳು ರಂಗಭೂಮಿ ಕಲಾವಿದ ಸುರೇಶ್ ವಿಟ್ಲ ವಿಧಿವಶ!
NAMMUR EXPRESS NEWS
ಮಂಗಳೂರು: ಮಂಜೇಶ್ವರ ಶಾರದಾ ಆರ್ಟ್ಸ್ ನಲ್ಲಿ ಸುಮಾರು 20 ವರ್ಷಗಳಿಂದ ಕೆಲಸ ನಿರ್ವಹಿಸಿಕೊಂಡಿದ್ದ ಸುರೇಶ್ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು, ಸಾವನ್ನಪ್ಪಿದ್ದಾರೆ. ತಕ್ಷಣವೇ ಮನೆಯವರು ಆಸ್ಪತ್ರೆಗೆ ದಾಖಲಿಸಿದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಯಿತು. ಆದರೆ ದುರಾದೃಷ್ಟವಶಾತ್ ಸುರೇಶ್ ವಿಟ್ಲ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತ ಸುರೇಶ್ ಪತ್ನಿ ಹಾಗು ಓರ್ವ ಮಗನನ್ನು ಅಗಲಿದ್ದಾರೆ.
ವಿಟ್ಲದ ಕಲಾಭಿಮಾನಿಗಳು, ಸಹಕಲಾವಿದರು, ಕಲಾವಿದನ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಮೃತರ ಅಂತ್ಯಸಂಸ್ಕಾರ ಏ.7 ಇಂದು ವಿಟ್ಲದಲ್ಲಿ ನಡೆಸುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.
