ವಿದ್ಯಾರ್ಥಿನಿಯರ ಟಾಯ್ಲೆಟಲ್ಲಿ ಅಡಗಿಸಿಟ್ಟ ಮೊಬೈಲ್ ಪತ್ತೆ!
– 17 ವರ್ಷದ ಬಾಲಕ ಪೊಲೀಸ್ ವಶಕ್ಕೆ, ರೋಗಿಯ ಸೋಗಿನಲ್ಲಿ ಬಂದಿದ್ದ ಆರೋಪಿ
– ಮಂಗಳೂರು ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ!
– 8 ವರ್ಷದ ಮಗು ಹೃದಯಾಘಾತದಿಂದ ಕುಸಿದು ಬಿದ್ದು ಸಾವು
NAMMUR EXPRESS NEWS
ಮಂಗಳೂರು: ಮಂಗಳೂರಿನ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರ ಟಾಯ್ಲೆಟಿನಲ್ಲಿ ಮೊಬೈಲ್ ಅಡಗಿಸಿಟ್ಟಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಬಂದರು ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಪೊಲೀಸರು ತಕ್ಷಣ ಕಾರ್ಯಾಚರಣೆಗೆ ಇಳಿದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ವಯಸ್ಸಿನ 17 ವರ್ಷದ ಬಾಲಕನೊಬ್ಬನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿ ಬಾಲನ್ಯಾಯ ಮಂಡಳಿ ಮುಂದೆ ಹಾಜರುಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರ ಟಾಯ್ಲೆಟ್ ನಲ್ಲಿ ಮೊಬೈಲ್ ಪತ್ತೆಯಾಗಿತ್ತು.ಶೌಚಾಲಯದಲ್ಲಿ ಯಾರೂ ಇಲ್ಲದ ವೇಳೆ ಮೊಬೈಲ್ ರಿಂಗಿಣಿಸಿದ್ದು, ತಕ್ಷಣ ಭದ್ರತಾ ಸಿಬ್ಬಂದಿಯು ಶೌಚಾಲಯವನ್ನು ಪರಿಶಿಲಿಸಿದಾಗ ಮೊಬೈಲ್ ಪತ್ತೆಯಾಗಿತ್ತು. ಬಳಿಕ ಈ ಬಗ್ಗೆ ಪೊಲೀಸ್ ದೂರು ನೀಡಲಾಗಿತ್ತು.
ಸಿಸಿ ಕ್ಯಾಮರಾ ಆಧರಿಸಿ ಪರಿಶೀಲನೆ ನಡೆಸಿದಾಗ ಬಾಲಕನೊಬ್ಬ ಮೊಬೈಲ್ ಇಟ್ಟಿರುವುದು ಕಂಡು ಬಂದಿದೆ. ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೊಬೈಲನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಬಾಲಕ ರೋಗಿಯ ಸೋಗಿನಲ್ಲಿ ವೈದ್ಯಕೀಯ ಕಾಲೇಜಿನ ಒಳಗೆ ಬಂದು ಶೌಚಾಲಯದಲ್ಲಿ ಮೊಬೈಲ್ ಇಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
8 ವರ್ಷದ ಬಾಲಕಿ ಕುಸಿದುಬಿದ್ದು ಸಾವು: ಹೃದಯಾಘಾತ ಕಾರಣ
ಮಂಗಳೂರು: ಮನೆಯಲ್ಲಿ ಆಟ ಆಡುತ್ತಿದ್ದ ಬಾಲಕಿ ಕುಸಿದು ಬಿದ್ದು ಸಾವಿಗೀಡಾದ ಘಟನೆ ಸಂಭವಿಸಿದೆ. ಮಜಿಬೈಲ್ ಸಮೀಪದ ಇರಿಬೈಲ್ ಹೊಗದ್ದೆ ನಿವಾಸಿ ದಿ| ಡಾನಿಲ್ ಡಿಸೋಜಾ ಅವರ ಪುತ್ರಿ ಪ್ರಿನ್ಸಿಲ್ಲ (8) ಸಾವಿಗೀಡಾದ ಬಾಲಕಿ. ಈಕೆ ಮಜಿಬೈಲ್ ಸರ್ಕಾರಿ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು. ಮನೆ ಬಳಿ ಆಟವಾಡುತ್ತಿದ್ದ ಈಕೆ ಬೆಳಗ್ಗೆ ೯.೩೦ರ ವೇಳೆಗೆ ನೀರು ಕೇಳಿ ಕುಡಿದಿದ್ದಾಳೆ . ಬಳಿಕ ಸ್ಪಲ್ಪ ಹೊತ್ತಲ್ಲೇ ಕುಸಿದುಬಿದ್ದಿದ್ದಾಳೆ. ತಕ್ಷಣ ಆಕೆಯನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನವಾಗಲಿಲ್ಲ. ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಲಕಿಯ ಸಾವಿಗೆ ಹೃದಯಾಘಾತ ಕಾರಣವೆನ್ನಲಾಗಿದೆ. ಮೃತ ಬಾಲಕಿ ತಾಯಿ ಹಾಗೂ ಸಹೋದರ ಸಹೋದರಿ ಹಾಗೂ ಕುಟುಂಬಸ್ಥರನ್ನುಅಗಲಿದ್ದಾರೆ