Categories
ಮಂಗಳೂರು

ನ್ಯೂ ವೈಬ್ರೆಂಟ್, ಅಭಿವಿನ್ಯಾಸ ಕಾರ್ಯಕ್ರಮದ ಸಂಭ್ರಮ

ನ್ಯೂ ವೈಬ್ರೆಂಟ್, ಅಭಿವಿನ್ಯಾಸ ಕಾರ್ಯಕ್ರಮದ ಸಂಭ್ರಮ

* ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಕಾರ್ಯಕ್ರಮ
* ಹತ್ತು ಹಲವು ಗಣ್ಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಯಶಸ್ವಿ

NAMMUR EXPRESS NEWS
ಮೂಡಬಿದಿರೆ: ಮೂಡಬಿದಿರೆಯ ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮವು ಮೂಡುಬಿದಿರೆಯ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಜೂ. 04ರಂದು ನಡೆಯಿತು.
ಟ್ರಸ್ಟಿ ಮತ್ತು ಕಾಲೇಜಿನ ಪ್ರಾಂಶುಪಾಲರಾಗಿರುವಂತಹ ಡಾ. ಎಸ್. ಎನ್. ವೆಂಕಟೇಶ್ ನಾಯಕ್ ರವರು ಹಿಂದಿನ ಕಾಲದ ಮತ್ತು ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಅನೇಕ ಬದಲಾವಣೆಗಳಿವೆ. ವಿದ್ಯಾರ್ಥಿಗಳಿಗೆ ಶಿಕ್ಷಣದ ಕುರಿತು ಸರಿಯಾದ ಮಾರ್ಗದರ್ಶನ ಮಾಡುವವರಿರಲಿಲ್ಲ ಆದರೆ ಇಂದು ನಿಮಗೆ ಉತ್ತಮ ಅವಕಾಶಗಳಿವೆ ಎಂದು ಮಕ್ಕಳಿಗೆ ಅವಕಾಶಗಳ ಬಗ್ಗೆ ವಿವರಿಸಿದರು.
ಟ್ರಸ್ಟಿ ಸುಭಾಷ್ ಝಾ ಮಾತನಾಡಿ ನಿಮ್ಮ ಪದವಿ ಪೂರ್ವ ಶಿಕ್ಷಣವನ್ನು ಯುದ್ಧದ ರೀತಿಯಲ್ಲಿ ಎದುರಿಸಬೇಕು ಮತ್ತು ಪ್ರಯಾಣದಲ್ಲಿ ಬರುವ ಎಲ್ಲಾ ಸವಾಲುಗಳನ್ನು ವೀರರಂತೆ ಎದುರಿಸಿ ಎಂದರು. ಟ್ರಸ್ಟಿ ಶರತ್ ಗೋರೆ ಅವರು ಮಾತನಾಡಿ ಜೆಇಇ, ನೀಟ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು ಮತ್ತು ವಿದ್ಯಾರ್ಥಿಗಳಿಗೆ ಪರೀಕ್ಷೆಗಳ ಮಹತ್ವವನ್ನು ತಿಳಿಹೇಳಿದರು ಹಾಗೂ ಅವಕಾಶಗಳ ಬಗ್ಗೆ ಸವಿಸ್ತಾರವಾಗಿ ವಿವರಿಸಿ ವಿದ್ಯಾರ್ಥಿಗಳು ಸಮರ್ಪಣಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದರು.
ಟ್ರಸ್ಟಿ ಯೋಗೇಶ್ ಬೆಡೇಕರ್ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಅರೋಗ್ಯವನ್ನು ಯಾವ ರೀತಿಯಲ್ಲಿ ಕಾಪಾಡಿಕೊಳ್ಳಬೇಕು ಮತ್ತು ವಿದ್ಯಾರ್ಥಿ ಗಳು ಸುಚಿತ್ವ, ಶಿಸ್ತು, ಪಾಲಿಸಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಟ್ರಸ್ಟಿ ಮೆಹಬೂಬ್ ಭಾಷಾ ಮಾತನಾಡಿ ನಮ್ಮ ಸಂಸ್ಥೆಯು ನಿಮ್ಮ ಯಶಸ್ಸಿಗೆ ಬೇಕಾದ ಎಲ್ಲಾ ರೀತಿಯ ವ್ಯವಸ್ಥೆಯನ್ನ ಕಲ್ಪಿಸುತ್ತೇವೆ ಎಂದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಅಧಿಕಾರಿ ಅರುಣ್ ಡಿ ಸಿಲ್ವ ಉಪಸ್ಥಿತರಿದ್ದರು. ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ಹರೀಶ್ ನಂಬಿಯಾರ್ ಕಾರ್ಯಕ್ರಮ ವನ್ನು ನಿರೂಪಿಸಿದರು. ಇಂಗ್ಲಿಷ್ ಉಪನ್ಯಾಸಕ ಅರುಣ್ ಕುಮಾರ್ ವಂದಿಸಿದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.