6ಕ್ಕೆ ನ್ಯೂ ವೈಬ್ರೆಂಟ್ ವಿದ್ಯಾರ್ಥಿ ವೇತನ ಪರೀಕ್ಷೆ!
– ಪ್ರಸಕ್ತ 10ನೇ ತರಗತಿ ವಿದ್ಯಾರ್ಥಿಗಳಿಗೆ ಆಯೋಜನೆ!
– ನಳಂದ ಪದವಿಪೂರ್ವ ಕಾಲೇಜಿನಲ್ಲಿ ಪರೀಕ್ಷೆ
NAMMUR EXPRESS NEWS
ಮಂಗಳೂರು: ಮೂಡುಬಿದಿರೆ ನ್ಯೂ ವೈಬ್ರೆಂಟ್ ಪದವಿಪೂರ್ವ ಕಾಲೇಜು ವತಿಯಿಂದ ಪ್ರಸಕ್ತ 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವಿಜಯಪುರ ಸೋಲಾಪುರ ರೋಡ್ ಕೆ.ಎಚ್.ಬಿ. ಕಾಲನಿಯ ಡಾ.ಬಿ.ಆರ್. ಅಂಬೇಡ್ಕರ್ ಮೆಮೋರಿಯಲ್ ಹೈಸ್ಕೂಲ್ ಸಮೀಪದಲ್ಲಿರುವ ನಳಂದ ಪದವಿಪೂರ್ವ ಕಾಲೇಜಿನಲ್ಲಿ ಏ.6ರಂದು ಬೆಳಗ್ಗೆ 10ಕ್ಕೆ ವಿದ್ಯಾರ್ಥಿವೇತನ ಪರೀಕ್ಷೆ ಆಯೋಜಿಸಲಾಗಿದೆ.
– ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಹೆಸರುವಾಸಿ ವೈಬ್ರೆಂಟ್ ಕಾಲೇಜು!
ಪಿ.ಯು. ಶಿಕ್ಷಣದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕ ತರಬೇತಿ ನೀಡುವ ಮೂಲಕ ಹೆಸರುವಾಸಿಯಾಗಿರುವ ನ್ಯೂ ವೈಬ್ರೆಂಟ್ ಪಿ.ಯು. ಕಾಲೇಜಿನಲ್ಲಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬಹುದು. ವಿದ್ಯಾರ್ಥಿವೇತನ ಪರೀಕ್ಷೆಯಲ್ಲಿ ಪಾಲ್ಗೊಂಡು ಪ್ರಯೋಜನ ಪಡೆದುಕೊಳ್ಳಬಹುದು.ಹೆಚ್ಚಿನ ಮಾಹಿತಿಗೆ 7411417028 / 7411649881 ಸಂಪರ್ಕಿಸಬಹುದು.
