Categories
ಮಂಗಳೂರು

ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕುಗಳಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ!

ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕುಗಳಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ!

– ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸೆಕ್ಷನ್ 144 ಜಾರಿ
– ನಿಯಮಗಳ ಪಾಲಿಸುವಂತೆ ಜಿಲ್ಲಾ ಪೊಲೀಸ್ ಕಮಿಷನರ್ ವಿನಂತಿ

NAMMUR EXPRESS NEWS
ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಕೊಲೆ ಪ್ರಕರಣದ ನಂತರ ಶಾಂತಿ ಸುವ್ಯವಸ್ಥೆ ಕಾಪಾಡಿಡುವ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ 3 ದಿನಗಳ ಕಾಲ ನಿಷೇಧವನ್ನು ಜಾರಿಗೊಳಿಸಲಾಗಿದೆ.
ಜಿಲ್ಲಾಧಿಕಾರಿ ಆದೇಶದ ಪ್ರಕಾರ, ಬಂಟ್ವಾಳ, ಬೆಳ್ತಂಗಡಿ, ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ ಮೇ 27ರ ಸಂಜೆ 6:00 ರಿಂದ ಮೇ. 30ರ ಸಂಜೆ 6:00 ಗಂಟೆಯವರೆಗೆ ಸೆಕ್ಷನ್ 144 ಜಾರಿಯಲ್ಲಿದೆ. ಈ ಅವಧಿಯಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಜನರ ಸಮೂಹ ಸೇರುವುದು, ಯಾವುದೇ ರೀತಿಯ ಹಿಂಸಾತ್ಮಕ ಘಟನೆ ಅಥವಾ ಪ್ರದರ್ಶನ ನಡೆಸುವುದು ನಿಷೇಧಿಸಲಾಗಿದೆ.
ಬಂಟ್ವಾಳದಲ್ಲಿ ನಡೆದ ಕೊಲೆ ಪ್ರಕರಣದ ನಂತರ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ ಮುನ್ನೆಚ್ಚರಿಕೆಯಾಗಿ ಈ ನಿಷೇಧವನ್ನು ಜಾರಿಗೊಳಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಪೊಲೀಸ್ ಎಚ್ಚರಿಕೆ!

ಜಿಲ್ಲಾ ಪೊಲೀಸ್ ಕಮಿಷನರ್ ಅವರು ನಿಷೇಧಾಜ್ಞೆಯನ್ನು ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಾದ ಕಾನೂನು ಕ್ರಮಕೈಗೊಳ್ಳುತ್ತಾರೆ ಎಂದು ಎಚ್ಚರಿಕೆ ಮಾಹಿತಿ ನೀಡಿದ್ದಾರೆ. ಸಾರ್ವಜನಿಕರು ಸಹಕರಿಸಬೇಕು ಎಂದು ಅಪೇಕ್ಷಿಸಲಾಗಿದೆ.
ಸ್ಥಳೀಯರು ನಿಷೇಧಾಜ್ಞೆಯ ನಿಯಮಗಳನ್ನು ಪಾಲಿಸಿ ಶಾಂತಿಯನ್ನು ಕಾಪಾಡಿಕೊಳ್ಳುವಂತೆ ಅಧಿಕಾರಿಗಳು ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.