Categories
ಮಂಗಳೂರು

“ಶರಣ್, ಭರತ್‌, ರಿಯಾಝ್ “ಕಡಂಬುವಿಗೆ ಜೀವ ಬೆದರಿಕೆ!

“ಶರಣ್, ಭರತ್‌, ರಿಯಾಝ್ “ಕಡಂಬುವಿಗೆ ಜೀವ ಬೆದರಿಕೆ!

– ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳ ಅಟ್ಟಹಾಸ
– ಮೂರು ಪ್ರತ್ಯೇಕ ಪ್ರಕರಣ ದಾಖಲಿಸಿದ ಪೊಲೀಸರು

NAMMUR EXPRESS NEWS
ಮಂಗಳೂರು: ಮಂಗಳೂರಿನಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪೈಲ್ ಮತ್ತು ಬಜರಂಗದಳದ ಮುಖಂಡ ಭರತ್ ಕುಮ್ಡೇಲ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆ ಹಾಕಿರುವ ವಿಚಾರವಾಗಿ ಕದ್ರಿ ಮತ್ತು ಬಂಟ್ವಾಳ ಗ್ರಾಮಾಂತರ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಎಸ್‌ಡಿಪಿಐ ಮುಖಂಡ ರಿಯಾಜ್ ಕಡಂಬು ಅವರಿಗೂ ಬೆದರಿಕೆ ಇದ್ದು, ಆ ಬಗ್ಗೆಯೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಜೀವ ಬೆದರಿಕೆ ಇರುವ ವಿಚಾರವಾಗಿ ವಿಶ್ವ ಹಿಂದೂ ಪರಿಷತ್‌ ಮುಖಂಡ ಶರಣ್ ಪಂಪೈಲ್ ಮಂಗಳೂರಿನ ಕದ್ರಿ ಠಾಣೆಗೆ ದೂರು ನೀಡಿದ್ದಾರೆ. ಅದರಂತೆ ಪ್ರಕರಣ ದಾಖಲಿಸಿಕೊಂಡ ಕದ್ರಿ ಠಾಣೆ ಪೊಲೀಸರು ಇನ್ ಫಾರ್ಮೇಶನ್‌ ಟೆಕ್ನಾಲಜಿ ಆ್ಯಕ್ಟ್ ಮತ್ತು ಬಿಎನ್‌ಎಸ್‌ ಕಾಯ್ದೆ 351(4) ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ.
ಶರಣ್ ಪಂಪೈಲ್‌ಗೆ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಜೀವ ಬೆದರಿಕೆ ಒಡ್ಡಿದ್ದರು. “ಮುಂದಿನ ಟಾರ್ಗೆಟ್ ಶರಣ್ ಪಂಪೈಲ್” ಎಂದು ಪೋಸ್ಟ್ ಮಾಡಿದ್ದರು. “ಮುಂದಿನ ಟಾರ್ಗೆಟ್ ಶರಣ್ ಪಂಪೈಲ್. ಶರಣ್ ಹತ್ಯೆಯಾಗಲು ತಯಾರಾಗು” ಎಂದು ಸಾಮಾಜಿಕ ಮಾಧ್ಯಮ ಸಂದೇಶದಲ್ಲಿ ಬೆದರಿಕೆ ಹಾಕಲಾಗಿತ್ತು.
ಶರಣ್ ಪಂಪೈಲ್ ಮಾತ್ರವಲ್ಲದೆ ಇನ್ನೂ ಕೆಲವು ಮಂದಿ ಮುಖಂಡರಿಗೆ ಸಾಮಾಜಿಕ ಮಾಧ್ಯಮದ ಮೂಲಕ ಬೆದರಿಕೆ ಹಾಕಲಾಗಿದೆ. ಬಜರಂಗದಳ ಮುಖಂಡ ಭರತ್ ಕುಮ್ಡೇಲ್ ಹತ್ಯೆ ಬೆದರಿಕೆ ಸಂದೇಶ ವಿಚಾರವಾಗಿ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿಎನ್‌ಎಸ್ ಕಾಯ್ದೆ 196(1)(C), 353(2) ಸೆಕ್ಷನ್ ಅಡಿ ಪ್ರಕರಣ ದಾಖಲಿಸಲಾಗಿದೆ. “ಅಶ್ರಫ್ ಕೊಂದ ಭರತ್‌ನನ್ನು ಮರೆತಿಲ್ಲ ಎಂದು ಪೋಸ್ಟ್ ಹಾಕಿದ್ದಾರೆ.
“Wait and watch” ಎಂದು ತಲ್ವಾ‌ರ್ ಫೋಟೋ ಪೋಸ್ಟ್ ಮಾಡಿದ್ದರು.
ಇನ್ನು ಎಸ್‌ಡಿಪಿಐ ಮುಖಂಡ ರಿಯಾಜ್ ಕಡಂಬು ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿದವರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಕೊಲೆ ಬೆದರಿಕೆ ಹಾಕಿದ ಕೆ.ಆರ್ ರಾಕೇಶ್ ವಿರುದ್ಧ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಿಸಲಾಗಿದೆ. ಯೂಟ್ಯೂಬ್‌ನಲ್ಲಿ ಸುಹಾಸ್‌ ಶೆಟ್ಟಿ ಕೊಲೆ ಸುದ್ದಿ ಪ್ರಸಾರವಾಗುತ್ತಿದ್ದ ವೇಳೆ ಕಮೆಂಟ್ ಮೂಲಕ ಕೊಲೆ ಬೆದರಿಕೆ ಹಾಕಲಾಗಿತ್ತು. “Next is Riyaz Kadanbu hit list” ಎಂದು ಕಮೆಂಟ್ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ರಿಯಾಜ್ ಕಡಂಬು ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.