ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್.!
– ಮೈತ್ರಿ ಕಪ್’ ಯೋಜನೆ ರಾಜ್ಯಾದ್ಯಂತ ವಿಸ್ತರಣೆ
– ವಿದ್ಯಾರ್ಥಿನಿಯರ ಸುರಕ್ಷತೆಗೆ ಹೊಸ ಯೋಜನೆ
NAMMUR EXPRESS NEWS
ಮಂಗಳೂರು : ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ರಾಜ್ಯಾದ್ಯಂತ ಮೈತ್ರಿ ಕಪ್ ವಿತರಣೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನ ನೆಹರೂ ಮೈದಾನದಲ್ಲಿ ಆಯೋಜಿಸಿದ್ದ ಸರ್ಕಾರಿ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಿಗೆ ಮೈತ್ರಿ ಮುಟ್ಟಿನ ಕಪ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದಿನ ತಿಂಗಳು ರಾಜ್ಯಾದ್ಯಂತ ಮೈತ್ರಿ ಕಪ್ ವಿತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದ ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಸ್ಯಾನಿಟರ್ ಪ್ಯಾಡ್ ವಿತರಿಸಲಾಗುವುದು. ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಯ 15 ಸಾವಿರ ವಿದ್ಯಾರ್ಥಿನಿಯರಿಗೆ ಮೈತ್ರಿ ಕಪ್ ಆರಂಭಿಕವಾಗಿ ವಿತರಿಸಿದ್ದು, ಮುಂದೆ ರಾಜ್ಯಾದ್ಯಂತ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.