Categories
ಮಂಗಳೂರು

ಬಂಟ್ವಾಳದ ಯುವಕನೊಬ್ಬನ ಮೃತದೇಹ ಹೊಂಡದಲ್ಲಿ ಪತ್ತೆಯಾಯ್ತು!

ಬಂಟ್ವಾಳದ ಯುವಕನೊಬ್ಬನ ಮೃತದೇಹ ಹೊಂಡದಲ್ಲಿ ಪತ್ತೆಯಾಯ್ತು!

NAMMUR EXPRESS NEWS
ಬಂಟ್ವಾಳ: ನಾಪತ್ತೆಯಾಗಿದ್ದ ಯುವಕನ ಮೃತದೇಹ ರಸ್ತೆ ಬದಿಯ ಹೊಂಡದಲ್ಲಿ ಜೂ. 16ರಂದು ಸೋಮವಾರ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಅಮ್ಮುಂಜೆ ಗ್ರಾಮದ ಬೆಂಜನಪದವು ನಿವಾಸಿ ಜನಾರ್ಧನ ಪೂಜಾರಿ ಅವರ ಪುತ್ರ ಸಾಗರ್ (28) ಎಂದು ಗುರುತಿಸಲಾಗಿದೆ.
ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದ ಸಾಗರ್ ಜೂ.14ರಂದು ತನ್ನ ಪತ್ನಿ ಹಾಗೂ ಮಗುವಿನೊಂದಿಗೆ ಬಿ.ಸಿ.ರೋಡಿಗೆ ಔಷಧಿ ತರಲೆಂದು ಅಟೋ ರಿಕ್ಷಾದಲ್ಲಿ ತೆರಳಿದ್ದರು. ವಾಪಾಸು ಬರುವಾಗ ಬೆಂಜನಪದವು ಮೂರು ಮಾರ್ಗ ಎಂಬಲ್ಲಿ ಸಾಗರ್ ಇಳಿದಿದ್ದು, ಬಳಿಕ ಮನೆಗೆ ಬಾರದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಬೆಳಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ವಿದ್ಯಾನಗರ ರಸ್ತೆಯ ಹೈಸ್ಕೂಲ್ ರೋಡ್ ಬಳಿ ಮೃತದೇಹ ಕಂಡುಬಂದಿದ್ದು, ಈ ಬಗ್ಗೆ ಮಾಹಿತಿ ಪಡೆದ ಮೃತರ ತಂದೆ ಜನಾರ್ಧನ ಪೂಜಾರಿ ಅವರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಸಾಗರ್ ಮೃತದೇಹ ಎಂದು ದೃಢಪಡಿಸಿದ್ದಾರೆ. ಹೊಂಡದಲ್ಲಿ ಬಿದ್ದು ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಅವರು ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.