Categories
ಮಂಗಳೂರು

ವಕ್ಫ್ ತಿದ್ದುಪಡಿ ಮಸೂದೆ ಸದನದಲ್ಲಿ ಸರ್ವಾನುಮತದಿಂದ ತಿರಸ್ಕರಿಸಿರುವುದು ಸ್ವಾಗತಾರ್ಹ!

ವಕ್ಫ್ ತಿದ್ದುಪಡಿ ಮಸೂದೆ ಸದನದಲ್ಲಿ ಸರ್ವಾನುಮತದಿಂದ ತಿರಸ್ಕರಿಸಿರುವುದು ಸ್ವಾಗತಾರ್ಹ!

– ಇದು ದೇಶದ ಜನರ ಸಾರ್ವತ್ರಿಕ ಆಕಾಂಕ್ಷೆ ಮತ್ತು ಜಾತ್ಯತೀತ ತತ್ವಗಳಿಗೆ ವಿರುದ್ಧವಾದ ಕಾಯ್ದೆ!
– ಜಿಲ್ಲಾ ಮುಸ್ಲಿಂ ಜನಪ್ರತಿನಿಧಿ ಒಕ್ಕೂಟ ದ.ಕ ಪತ್ರಿಕಾ ಪ್ರಕಟಣೆಯಲ್ಲಿ ಸೂಚನೆ

NAMMUR EXPRESS NEWS
ಮಂಗಳೂರು: ವಕ್ಫ್ ಮಸೂದೆ 2024, ರಾಜ್ಯದ ಜನರ ಸಾರ್ವತ್ರಿಕ ಆಕಾಂಕ್ಷೆಗಳಿಗೆ ವಿರುದ್ಧವಾಗಿರುವುದರಿಂದ ಸದನವು ಸರ್ವಾನುಮತದಿಂದ ತಿರಸ್ಕರಿಸಿರುವುದು ಮತ್ತು ಶಾಸನವನ್ನು ಹಿಂತೆಗೆದುಕೊಳ್ಳುವಂತೆ ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನು ಕೈಗೊಂಡಿರುವುದು ಸ್ವಾಗತಾರ್ಹ, ಈ ಕಾಯ್ದೆಯು ದೇಶದ ಎಲ್ಲಾ ವರ್ಗದ ಜನರ ಆಕಾಂಕ್ಷೆಗಳು ಮತ್ತು ಅವಕಾಶಗಳನ್ನು ಪ್ರತಿಬಿಂಬಿಸುವುದಿಲ್ಲ.
ಇದು ದೇಶದ ಜನರ ಸಾರ್ವತ್ರಿಕ ಆಕಾಂಕ್ಷೆಗಳು ಮತ್ತು ಜಾತ್ಯತೀತ ತತ್ವಗಳಿಗೆ ಸಂಪೂರ್ಣವಾಗಿ ವಿರುದ್ಧವಾದ ಕಾಯ್ದೆಯಾಗಿದೆ ಎಂದು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ, ವಕ್ಫ್ (ತಿದ್ದುಪಡಿ) ಮಸೂದೆ, 2024 ಅನ್ನು ತಕ್ಷಣ ಕೇಂದ್ರ ಸರಕಾರ ಹಿಂತೆಗೆದುಕೊಳ್ಳುವ ಮೂಲಕ ದೇಶದ ಸರ್ವಾನುಮತದ ಅಭಿಪ್ರಾಯಗಳನ್ನು ಗೌರವಿಸಲು ವಿಳಂಬವಿಲ್ಲದೆ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಜನಪ್ರತಿನಿಧಿಗಳ ಒಕ್ಕೂಟದ ಅಧ್ಯಕ್ಷರಾದ ಸಿರಾಜ್ ಬಜ್ಪೆ ಹಾಗೂ ಪ್ರಧಾನ ಕಾರ್ಯದರ್ಶಿ ಯಾದ ಎಸ್. ಅಬೂಬಕ್ಕರ್ ಸಜೀಪ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.